‘ಸ್ಥಳೀಯರಿಗೆ ಮೊದಲ ಆದ್ಯತೆ ನೀಡಿ’: ಉದ್ಯಮಗಳಿಗೆ ಸಿಎಂ ಒಮರ್ ಅಬ್ದುಲ್ಲಾ ಎಚ್ಚರಿಕೆ!

Date:

ಕೇಂದ್ರಾಡಳಿತ ಪ್ರದೇಶದಲ್ಲಿ ಉದ್ಯಮಗಳನ್ನು ಸ್ಥಾಪಿಸುವ ಕಂಪನಿಗಳು ಸ್ಥಳೀಯ ಯುವಕರಿಗೆ ಉದ್ಯೋಗ ನೀಡಲೇಬೇಕು ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ. ಹೊರಗಿನವರಿಗೆ ಉದ್ಯೋಗ ನೀಡುವ ಪ್ರಯತ್ನಗಳನ್ನು ತಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

- Advertisement -

ಮಂಗಳವಾರ ಕಥುವಾದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, “ತರಬೇತಿ ಪಡೆದ ಸ್ಥಳೀಯ ಯುವಕರು ಲಭ್ಯವಿಲ್ಲ ಎಂಬ ನೆಪವನ್ನು ನಾವು ಒಪ್ಪುವುದಿಲ್ಲ. ನಮ್ಮ ಯುವಕರಿಗೆ ತರಬೇತಿ ನೀಡಲು ನಾವು ನಿಮಗೆ ಆರು ತಿಂಗಳು ಅಥವಾ ಒಂದು ವರ್ಷದ ಕಾಲಾವಕಾಶ ನೀಡುತ್ತೇವೆ. ನಮ್ಮಲ್ಲಿ ಅಕಾಡೆಮಿಗಳು, ತರಬೇತಿ ಕೇಂದ್ರಗಳು, ಕಾಲೇಜು ಮತ್ತು ವಿಶ್ವವಿದ್ಯಾಲಯಗಳಿವೆ” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ಜಮ್ಮು, ಸಾಂಬಾ ಮತ್ತು ಕಥುವಾ ಜಿಲ್ಲೆಗಳಲ್ಲಿ 30 ಕೋಟಿ ರೂ.ಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನದ ಮರುಸ್ಥಾಪನೆ ವಿಚಾರದಲ್ಲಿ ತಾವು ಕೇಂದ್ರ ಸರ್ಕಾರದ ಬಗ್ಗೆ ಮೃದು ಧೋರಣೆ ತಾಳಿದ್ದಾರೆ ಎಂದು ಪಿಡಿಪಿ ಸೇರಿದಂತೆ ರಾಜಕೀಯ ವಿರೋಧಿಗಳು ಮಾಡುತ್ತಿರುವ ಆರೋಪಗಳಿಗೆ ತಿರುಗೇಟು ನೀಡುವಂತೆಯೂ ಅವರ ಈ ಹೇಳಿಕೆ ಕಂಡುಬಂದಿದೆ.

ಮತ್ತೊಂದೆಡೆ, ರಾಜ್ಯ ಸ್ಥಾನಮಾನ ಮತ್ತು ವಿಶೇಷ ಸ್ಥಾನಮಾನದ ಮರುಸ್ಥಾಪನೆ ಬೇಡಿಕೆಯು ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಒಳಗೂ ಅಸಮಾಧಾನಕ್ಕೆ ಕಾರಣವಾಗಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಸರ್ಕಾರ ರಚಿಸಿದ ನಂತರ ಪಕ್ಷದ ನಾಯಕತ್ವವು ಈ ವಿಚಾರದಲ್ಲಿ ರಾಜಿ ಮಾಡಿಕೊಂಡಿದೆ ಎಂಬ ಭಾವನೆ ಹಲವು ನಾಯಕರಲ್ಲಿದೆ. ಇದೇ ಕಾರಣಕ್ಕೆ, ಆರ್ಟಿಕಲ್ 370 ರ ಅಡಿಯಲ್ಲಿ ಲಭ್ಯವಿದ್ದ ವಿಶೇಷ ಸ್ಥಾನಮಾನದ ನಿಲುವನ್ನು ಪಕ್ಷ ದುರ್ಬಲಗೊಳಿಸಿದೆ ಎಂದು ಆರೋಪಿಸಿ ಹಿರಿಯ ನಾಯಕ ಹಾಗೂ ಸಂಸದ ಅಗಾ ಸೈಯದ್ ರುಹುಲ್ಲಾ ಮೆಹದಿ ಅವರು ಇತ್ತೀಚೆಗೆ ಪಕ್ಷಕ್ಕೆ ಮತ್ತು ತಮ್ಮ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತಿಭೆಗಳಿಗೆ ಯಾವುದೇ ಕೊರತೆಯಿಲ್ಲ ಎಂದ ಅಬ್ದುಲ್ಲಾ, ಇಲ್ಲಿನ ಯುವಕರಿಗೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ಅವಕಾಶಗಳ ಅಗತ್ಯವಿದೆ ಎಂದರು.

“ಜಮ್ಮು ಮತ್ತು ಕಾಶ್ಮೀರದ ಯುವಕರು ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ ಮತ್ತು ದೇಶಾದ್ಯಂತ ಸೇವೆ ಸಲ್ಲಿಸುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಯುವಕರಿಲ್ಲದ ಸೇನಾ ರೆಜಿಮೆಂಟ್ ದೇಶದಲ್ಲಿದೆಯೇ? ನಮ್ಮ ಯುವಕರು ನಿಯೋಜನೆಗೊಳ್ಳದ ಪ್ರದೇಶವಿದೆಯೇ? ನೀವು ಎತ್ತ ನೋಡಿದರೂ ನಮ್ಮ ಯುವಕರು ದೇಶಸೇವೆಯಲ್ಲಿ ತೊಡಗಿರುವುದು ಕಾಣುತ್ತದೆ. ಅವರಿಗೆ ಕೇವಲ ಅವಕಾಶದ ಅಗತ್ಯವಿದೆ, ಅವಕಾಶ ಸಿಕ್ಕ ತಕ್ಷಣ ಅವರು ತಮ್ಮ ಛಾಪು ಮೂಡಿಸುತ್ತಾರೆ” ಎಂದು ಮುಖ್ಯಮಂತ್ರಿಗಳು ಯುವಜನತೆಯ ಸಾಮರ್ಥ್ಯವನ್ನು ಕೊಂಡಾಡಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ಕಾರುಣ್ಯ ಸೌಹಾರ್ದ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರಿ ಪ್ರಶಸ್ತಿ

ಬೀದರ್ ನಗರದ ಝೀರಾ ಕನ್ವೆನ್ಷನ್ ಹಾಲ್‌ನಲ್ಲಿ ನ.18ರಂದು ನಡೆದ ರಾಜ್ಯಮಟ್ಟದ 73ನೇ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

ಆರೋಗ್ಯ ಆಸ್ಪತ್ರೆಯಲ್ಲಿ ಸಿಗುವ ವಸ್ತುವಲ್ಲ, ನಮ್ಮ ಆಹಾರ ಪದ್ಧತಿಯಲ್ಲಿದೆ : ಸಚಿವ ಎನ್.ಚಲುವರಾಯಸ್ವಾಮಿ

ಆರೋಗ್ಯವೆಂಬುದು ಕೇವಲ ಆಸ್ಪತ್ರೆಗಳಲ್ಲಿ ಸಿಗುವ ವಸ್ತುವಲ್ಲ. ಅದು ನಮ್ಮ ದಿನಚರಿಯಲ್ಲಿ ಅಡಗಿದೆ...