ಜಾಗತಿಕ ತೈಲ ಸಂಕಟ: ಪಾಕ್‌ನಲ್ಲಿ ಇಂಧನ ಅಭಾವ; ಭಾರತಕ್ಕೂ ಎಚ್ಚರಿಕೆ ಗಂಟೆ

Date:

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧ ವಾತಾವರಣ ಮತ್ತು ಜಾಗತಿಕ ಇಂಧನ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವು ದಕ್ಷಿಣ ಏಷ್ಯಾದ ದೇಶಗಳಲ್ಲಿ ತೀವ್ರ ಇಂಧನ ಬಿಕ್ಕಟ್ಟನ್ನು ಸೃಷ್ಟಿಸಿದೆ. ನೆರೆರಾಷ್ಟ್ರ ಪಾಕಿಸ್ತಾನದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಭಾರತಕ್ಕೂ ಮುಂಬರುವ ದಿನಗಳಲ್ಲಿ ಇದು ಕಠಿಣ ಆರ್ಥಿಕ ಸವಾಲು ತಂದೊಡ್ಡುವ ಎಚ್ಚರಿಕೆಯ ಸಂಕೇತವಾಗಿದೆ.

- Advertisement -

ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟವಾದ ಲೀಟರ್‌ಗೆ ₹384.34ಕ್ಕೆ ಏರಿಕೆಯಾಗಿದ್ದರೆ, ಡೀಸೆಲ್ ದರ ₹415.83 ಕ್ಕೆ ಜಿಗಿದಿದೆ. ಕತಾರ್‌ನಿಂದ ಬರುವ ಎಲ್‌ಎನ್‌ಜಿ (ಪ್ರಕೃತಿ ಅನಿಲ) ಆಮದು ಸಂಪೂರ್ಣವಾಗಿ ಕುಸಿದಿದ್ದು, ವಿದ್ಯುತ್ ಉತ್ಪಾದನೆ ಮತ್ತು ಕೈಗಾರಿಕೆಗಳು ತೀವ್ರ ತೊಂದರೆ ಎದುರಿಸುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಇದನ್ನೂ ಓದಿ: ಮಧ್ಯಪ್ರಾಚ್ಯ ಯುದ್ಧ – ತೈಲ ಬಿಕ್ಕಟ್ಟು: ಭಾರತದಲ್ಲಿ ಮತ್ತೆ ಲಾಕ್‌ಡೌನ್‌?

ಪರಿಸ್ಥಿತಿ ಕೈಮೀರುತ್ತಿದ್ದಂತೆ ಪ್ರಧಾನಿ ಶೆಹಬಾಜ್ ಷರೀಫ್ ಸರ್ಕಾರ ದ್ವಿಚಕ್ರ ವಾಹನಗಳು ಮತ್ತು ಸಣ್ಣ ಕಾರು ಮಾಲೀಕರಿಗೆ ಲೀಟರ್‌ಗೆ ₹100 ರಂತೆ ಸಬ್ಸಿಡಿ ನೀಡುವ ಯೋಜನೆಯನ್ನು ಜಾರಿಗೆ ತಂದಿದೆ. ಜತೆಗೆ, ಪ್ರತಿದಿನದ ಜಾಗತಿಕ ಬೆಲೆಗೆ ತಕ್ಕಂತೆ ಇಂಧನ ದರ ಬದಲಾಯಿಸುವ ನಿರ್ಧಾರಕ್ಕೆ ಬಂದಿದೆ. ಈ ನಡುವೆ ಭಾರತದಲ್ಲೂ ಈಗಾಗಲೇ ಇಂಧನ ಸಂಕಷ್ಟ ಉಂಟಾಗುತ್ತಿದೆ.

Advertisements

ಭಾರತಕ್ಕೂ ಹೆಚ್ಚಿದ ಬೆಲೆ ಏರಿಕೆ ಭೀತಿ

ದೇಶದಲ್ಲಿ ತನ್ನ ಅಗತ್ಯದ ಶೇಕಡ 85ಕ್ಕಿಂತ ಹೆಚ್ಚು ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತಿರುವುದರಿಂದ, ಜಾಗತಿಕ ಮಟ್ಟದ ಈ ಏರಿಳಿತ ಭಾರತಕ್ಕೂ ಪ್ರತ್ಯಕ್ಷ ಹಾಗೂ ಪರೋಕ್ಷ ಎಚ್ಚರಿಕೆಯಾಗಿದೆ. ಈಗಾಗಲೇ ದೇಶದಲ್ಲಿ ಪೆಟ್ರೋಲ್, ಡಿಸೇಲ್ ದರವು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ.

ಪ್ರಸ್ತುತ ಭಾರತದಲ್ಲಿ ಪೆಟ್ರೋಲ್ ದರ ₹102.12 (ದೆಹಲಿ) ವ್ಯಾಪ್ತಿಯಲ್ಲಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ ಮುಂದುವರಿದರೆ ತೈಲ ಕಂಪನಿಗಳ ಮೇಲಿನ ಆರ್ಥಿಕ ಹೊರೆ ಹೆಚ್ಚಾಗಲಿದೆ. ಜಾಗತಿಕ ಇಂಧನ ಬೆಲೆ ಏರಿಕೆಯು ಆಮದು ವೆಚ್ಚವನ್ನು ಹೆಚ್ಚಿಸಲಿದ್ದು, ಭಾರತೀಯ ರೂಪಾಯಿ ಮೌಲ್ಯದ ಮೇಲೆ ಒತ್ತಡ ಹೇರಲಿದೆ. ಇದು ಸರಕು ಸಾಗಣೆ ವೆಚ್ಚ ಹೆಚ್ಚಿಸಿ ದೇಶೀಯವಾಗಿ ನಿತ್ಯಬಳಕೆಯ ವಸ್ತುಗಳ ಬೆಲೆ ಏರಿಕೆಗೆ ದಾರಿ ಮಾಡಿಕೊಡುವ ಭೀತಿಯಿದೆ.

ದೇಶದಲ್ಲಿ ಸದ್ಯಕ್ಕೆ ಇಂಧನ ಅಭಾವವಿಲ್ಲ ಎಂದು ಸರ್ಕಾರ ಹೇಳಿಕೊಳ್ಳುತ್ತಿದೆ. ರಷ್ಯಾ ಸೇರಿದಂತೆ ಪರ್ಯಾಯ ಮಾರ್ಗಗಳಿಂದ ರಿಯಾಯಿತಿ ದರದಲ್ಲಿ ತೈಲ ಭದ್ರಪಡಿಸಿಕೊಳ್ಳಲು ಮತ್ತು ನವೀಕರಿಸಬಹುದಾದ ಇಂಧನದ ಕಡೆಗೆ ಗಮನಹರಿಸಲು ಸರ್ಕಾರ ತುರ್ತು ಸಿದ್ಧತೆ ನಡೆಸಬೇಕಾದ ಅವಶ್ಯಕತೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ರಾಜ್ಯದ ಹಲವೆಡೆ ಒಣಹವೆ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

ಕರ್ನಾಟಕದಾದ್ಯಂತ ಇಂದು ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನದ ನಂತರ ಕೆಲವೆಡೆ...

ಒರಾಕಲ್‌ಗೆ ಎಐ ಹೊಡೆತ: ಕೆಲಸ‌ ಕಳೆದುಕೊಂಡ ಸಾವಿರಾರು ಉದ್ಯೋಗಿಗಳು

ಜಾಗತಿಕ ತಂತ್ರಜ್ಞಾನ ಮತ್ತು ಸಾಫ್ಟ್‌ವೇರ್ ದೈತ್ಯ 'ಒರಾಕಲ್' ಸಂಸ್ಥೆಯು ತನ್ನ ಜಾಗತಿಕ...

ಔರಾದ್‌ | ಸಾಲದ ಹೊರೆ : ಬಾವಿಗೆ ಹಾರಿ ರೈತ ಆತ್ಮಹತ್ಯೆ

ಸಾಲದ ಹೊರೆಯಿಂದ ರೈತರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಔರಾದ್...