ಜಾಗತಿಕ ತೈಲ ಬಿಕ್ಕಟ್ಟು: ಭಾರತದಲ್ಲಿ ಪ್ರೀಮಿಯಂ ಪೆಟ್ರೋಲ್-ಡೀಸೆಲ್ ದರ ಭಾರೀ ಏರಿಕೆ

Date:

ಗಲ್ಫ್ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಯಾಗಿದೆ. ಇದರ ಪರಿಣಾಮ ಭಾರತದ ಮೇಲೂ ಕಾಣಿಸಿಕೊಂಡಿದೆ. ದೇಶದ ತೈಲ ಮಾರಾಟ ಕಂಪನಿಗಳು (OMCs) ಶುಕ್ರವಾರದಿಂದ ಅನ್ವಯವಾಗುವಂತೆ 95-ಆಕ್ಟೇನ್ ಪ್ರೀಮಿಯಂ ಪೆಟ್ರೋಲ್ ದರವನ್ನು ಪ್ರತಿ ಲೀಟರ್‌ಗೆ 2 ರೂಪಾಯಿ ಹೆಚ್ಚಿಸಿವೆ. ಇದಕ್ಕಿಂತಲೂ ಆಘಾತಕಾರಿಯಾಗಿ, ಕೈಗಾರಿಕಾ ಬಳಕೆಯ ಡೀಸೆಲ್ ದರದಲ್ಲಿ ಲೀಟರ್‌ಗೆ 22 ರೂಪಾಯಿ ಭಾರೀ ಏರಿಕೆಯಾಗಿದೆ.

- Advertisement -

ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವ ಸಮಯದಲ್ಲಿ, ದೇಶದಲ್ಲಿ ಪ್ರೀಮಿಯಂ ಪೆಟ್ರೋಲ್ ಮತ್ತು ಕೈಗಾರಿಕೆ ಡೀಸೆಲ್‌ ದರಗಳು ಹೆಚ್ಚಾಗಿವೆ. ಆದರೂ, ದೇಶದ ಸಾಮಾನ್ಯ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆ ಮಾಡದಿರಲು ತೈಲ ಕಂಪನಿಗಳು ನಿರ್ಧರಿಸಿವೆ. ಆದ್ದರಿಂದ, ಜನಸಾಮಾನ್ಯರು ತಮ್ಮ ವಾಹನಗಳಿಗಾಗಿ ಬಳಸುವ ಪೆಟ್ರೋಲ್-ಡೀಸೆಲ್‌ನಲ್ಲಿ ಯಾವುದೇ ಏರಿಕೆ ಇರುವುದಿಲ್ಲ ಎಂದು ದೇಶದ ಅತಿದೊಡ್ಡ ಇಂಧನ ಮಾರಾಟ ಸಂಸ್ಥೆ ಇಂಡಿಯನ್ ಆಯಿಲ್ (IOCL) ಸ್ಪಷ್ಟಪಡಿಸಿದೆ. ತಾರ್ಕಿಕ ಬೆಲೆ ನಿಗದಿ ಕಾರ್ಯತಂತ್ರದ ಮೂಲಕ ಸಾಮಾನ್ಯ ಗ್ರಾಹಕರ ಮೇಲೆ ಹೊರೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ XP-95 ಪ್ರಿಮಿಯಂ ಪೆಟ್ರೋಲ್ಅನ್ನು ಐಷಾರಾಮಿ ಕಾರು ಮತ್ತು ಸ್ಪೋರ್ಟ್ಸ್ ಬೈಕ್‌ಗಳಿಗೆ ಬಳಸಲಾಗುತ್ತದೆ. ಅಂತೆಯೇ, ಕೈಗಾರಿಕಾ ಡೀಸೆಲ್‌ಅನ್ನು ಕಾರ್ಖಾನೆಗಳು ಮತ್ತು ದೊಡ್ಡ ಯಂತ್ರೋಪಕರಣಗಳಿಗೆ ಬಳಕೆ ಮಾಡಲಾಗುತ್ತದೆ. ಸದ್ಯ, ಈ ಪೆಟ್ರೋಲ್-ಡೀಸೆಲ್ ದರಗಳು ಹೆಚ್ಚಾಗಿವೆ.

ಈ ಬೆಲೆ ಏರಿಕೆಯು ಸಾಮಾನ್ಯ ಜನರ ದೈನಂದಿನ ಬಜೆಟ್ ಮೇಲೆ ತಕ್ಷಣದ ಪರಿಣಾಮ ಬೀರುವುದಿಲ್ಲವೆಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಂಕಿಅಂಶಗಳ ಪ್ರಕಾರ, ದೇಶದ ಒಟ್ಟು ವಾಹನ ಸವಾರರಲ್ಲಿ ಕೇವಲ 5%ಕ್ಕಿಂತ ಕಡಿಮೆ ಜನರು ಮಾತ್ರ ಪ್ರೀಂಮಿಯಂ ಪೆಟ್ರೋಲ್ ಬಳಸುತ್ತಾರೆ. ಆದ್ದರಿಂದ, ಆ 5% ಜನರ ಮೇಲೆ ಮಾತ್ರವೇ ಬೆಲೆ ಏರಿಕೆಯ ಪರಿಣಾಮ ತಟ್ಟಲಿದೆ ಎಂದು ಇಂಡಿಯನ್ ಆಯಿಲ್ ಹೇಳಿಕೊಂಡಿದೆ.

ಈ ಲೇಖನ ಓದಿದ್ದೀರಾ?: ಕೇರಳ ಚುನಾವಣೆಗೂ ಮುನ್ನ ಪಕ್ಷಗಳ ಸಂಕಟ: ಬಂಡಾಯ- ಪಕ್ಷಾಂತರ- ಉಚ್ಚಾಟನೆ ಸಂಕಷ್ಟ

ಕೈಗಾರಿಕಾ ಡೀಸೆಲ್ ಬೆಲೆಯಲ್ಲಿ ಒಮ್ಮೆಗೆ 22 ರೂಪಾಯಿ ಏರಿಕೆಯಾಗಿರುವುದು ಉತ್ಪಾದನಾ ವಲಯದಲ್ಲಿ ಆತಂಕ ಮೂಡಿಸಿದೆ. ಇದು ಸಾರಿಗೆ ವೆಚ್ಚ ಮತ್ತು ಕಾರ್ಖಾನೆಗಳ ಉತ್ಪಾದನಾ ವೆಚ್ಚವನ್ನು ಹೆಚ್ಚಿಸುವ ಸಾಧ್ಯತೆಯಿದೆ. ಪರೋಕ್ಷವಾಗಿ ಸಿದ್ಧ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗಬಹುದು ಎಂಬ ಭೀತಿ ವ್ಯಕ್ತವಾಗಿದೆ.

ಗಲ್ಫ್ ಪ್ರದೇಶದಲ್ಲಿ ಉದ್ವಿಗ್ನತೆ ಮುಂದುವರಿದು, ಜಾಗತಿಕವಾಗಿ ಕಚ್ಚಾ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದು, ಹೀಗೆಯೇ ಮುಂದುವರೆದರೆ, ಸಾಮಾನ್ಯ ಪೆಟ್ರೋಲ್ ಬೆಲೆಯೂ ಏರಿಕೆಯಾಗುವ ಸಾಧ್ಯತೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...