‘ಆಕೆ ನರಕಕ್ಕಾದರೂ ಹೋಗಲಿ’: ಹಿಜಾಬ್ ಎಳೆದ ನಿತೀಶ್ ಸಮರ್ಥಿಸಿದ ಕೇಂದ್ರ ಸಚಿವ ಗಿರಿರಾಜ್ ಸಿಂಗ್‌; ವಿಪಕ್ಷಗಳ ಆಕ್ರೋಶ

Date:

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ಎಳೆದ ಘಟನೆ ದೇಶಾದ್ಯಂತ ಸಂಚಲನ ಮೂಡಿಸಿದೆ. ಇದರ ಬೆನ್ನಲ್ಲೇ, ನಿತೀಶ್ ಕ್ರಮವನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಮಹಿಳೆಯ ಕುರಿತು “ನರಕಕ್ಕಾದರೂ ಹೋಗಲಿ” ಎಂದು ಹೇಳಿಕೆ ನೀಡಿರುವುದು ವಿವಾದದ ಕಿಡಿ ಹೊತ್ತಿಸಿದೆ.

- Advertisement -

​ಪಾಟ್ನಾದಲ್ಲಿ ಆಯುಷ್ ವೈದ್ಯರ ನೇಮಕಾತಿ ಪತ್ರ ವಿತರಣೆ ವೇಳೆ ನಿತೀಶ್ ಕುಮಾರ್ ಅವರು ಮಹಿಳೆಯ ಹಿಜಾಬ್ ಸರಿಸಿದ್ದರು. ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಗಿರಿರಾಜ್ ಸಿಂಗ್, “ಮುಖ್ಯಮಂತ್ರಿಗಳ ನಡೆಯಲ್ಲಿ ಯಾವುದೇ ತಪ್ಪಿಲ್ಲ. ನೇಮಕಾತಿ ಪತ್ರ ಪಡೆಯುವಾಗ ಗುರುತು ಪತ್ತೆಗೆ ಮುಖ ತೋರಿಸುವುದು ಅಗತ್ಯ. ನಾವಿರುವುದು ಭಾರತದಲ್ಲೇ ಹೊರತು ಇಸ್ಲಾಮಿಕ್ ರಾಷ್ಟ್ರದಲ್ಲಲ್ಲ. ಪಾಸ್‌ಪೋರ್ಟ್ ಕಚೇರಿ ಅಥವಾ ವಿಮಾನ ನಿಲ್ದಾಣಗಳಲ್ಲಿ ಮುಖ ತೋರಿಸುವುದಿಲ್ಲವೇ? ನಿತೀಶ್ ಅವರು ಪೋಷಕರ ಸ್ಥಾನದಲ್ಲಿ ನಿಂತು ಆ ಕೆಲಸ ಮಾಡಿದ್ದಾರೆ” ಎಂದು ಸಮರ್ಥಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಆ ಮಹಿಳೆ ಸರ್ಕಾರಿ ಕೆಲಸ ಬೇಡವೆಂದು ತಿರಸ್ಕರಿಸಬಹುದು ಅಥವಾ ನರಕಕ್ಕಾದರೂ ಹೋಗಲಿ, ಅದು ಆಕೆಯ ಆಯ್ಕೆ,” ಎಂದು ಗಿರಿರಾಜ್ ಸಿಂಗ್ ಹರಿಹಾಯ್ದಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನೇಕೆ ಮಾಡುತ್ತಿಲ್ಲ?

​ವಿಪಕ್ಷಗಳ ವಾಗ್ದಾಳಿ
ಕೇಂದ್ರ ಸಚಿವರ ಈ ಹೇಳಿಕೆ ಮತ್ತು ನಿತೀಶ್ ವರ್ತನೆಗೆ ‘ಇಂಡಿಯಾ’ ಒಕ್ಕೂಟದ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಇದು ಬಿಜೆಪಿಯವರ ಕೀಳು ಮನಸ್ಥಿತಿಯನ್ನು ತೋರಿಸುತ್ತದೆ,” ಎಂದು ಕಾಂಗ್ರೆಸ್ ಸಂಸದ ತಾರಿಖ್ ಅನ್ವರ್ ಕಿಡಿಕಾರಿದ್ದಾರೆ.

​ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಪ್ರತಿಕ್ರಿಯಿಸಿ, “ಒಬ್ಬ ಮುಸ್ಲಿಂ ನಾಯಕ ಹಿಂದೂ ಮಹಿಳೆಯ ಮುಸುಕು ಸರಿಸಿದ್ದರೆ ಬಿಜೆಪಿ ಮತ್ತು ದೇಶದ ಪ್ರತಿಕ್ರಿಯೆ ಹೇಗಿರುತ್ತಿತ್ತು?” ಎಂದು ಪ್ರಶ್ನಿಸಿದ್ದಾರೆ.

ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಹಾಗೂ ಎನ್‌ಸಿಪಿ ಸಂಸದೆ ಫೌಜಿಯಾ ಖಾನ್, “ಇದು ಮಹಿಳೆಯರ ಘನತೆಗೆ ಧಕ್ಕೆ ತರುವ ಮತ್ತು ಸಾರ್ವಜನಿಕವಾಗಿ ಅವಮಾನಿಸುವ ಹೇಯ ಕೃತ್ಯ,” ಎಂದು ಖಂಡಿಸಿದ್ದಾರೆ.

ಘಟನೆಯನ್ನು ಖಂಡಿಸಿರುವ ಆರ್‌ಜೆಡಿ ಮತ್ತು ಶಿವಸೇನೆ (ಯುಬಿಟಿ) ನಾಯಕರು ನಿತೀಶ್ ಕುಮಾರ್ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಳೆ ಅಬ್ಬರ: ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು; ಒಡಿಶಾದಲ್ಲಿ ಪ್ರವಾಹ

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಉತ್ತರ ಪ್ರದೇಶ...

26 ಬಾರಿ ಸೋತರೂ ಕುಗ್ಗದ ಛಲ; 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆದ ವೃದ್ಧ

ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...