ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಿದ್ದ ಸಮನ್ಸ್ ಹಿಂಪಡೆದ ಗೋವಾ ಪೊಲೀಸ್

Date:

  • ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಏಪ್ರಿಲ್‌ 13ರಂದು ನೋಟಿಸ್‌ ನೀಡಿದ್ದ ಗೋವಾ ಪೊಲೀಸ್
  • ನ್ಯಾಯಮೂರ್ತಿಗಳಾದ ಮಹೇಶ್ ಸೋನಕ್ ಮತ್ತು ವಾಲ್ಮೀಕಿ ಮೆನೇಜಸ್ ಪೀಠ ವಿಚಾರಣೆ

ಅರವಿಂದ್‌ ಕೇಜ್ರಿವಾಲ್ ಅವರಿಗೆ ನೀಡಿದ್ದ ಸಮನ್ಸ್‌ ಹಿಂಪಡೆಯುತ್ತಿದ್ದೇವೆ ಎಂದು ಗೋವಾ ಪೊಲೀಸರು ಬುಧವಾರ (ಏಪ್ರಿಲ್‌ 26) ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ.

2022ರ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಕಾನೂನುಬಾಹಿರವಾಗಿ ಸಾರ್ವಜನಿಕ ಆಸ್ತಿಗಳ ಮೇಲೆ ಭಿತ್ತಿಪತ್ರಗಳನ್ನು ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿ ಏಪ್ರಿಲ್‌ 27ರಂದು ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್‌ಗೆ ಸಮನ್ಸ್‌ ನೀಡಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್‌ 41 (ಎ) ಅಡಿಯಲ್ಲಿ ಆಮ್‌ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಏಪ್ರಿಲ್‌ 13ರಂದು ಪೊಲೀಸರು ಸ್ವಯಂ ಪ್ರೇರಿತವಾಗಿ ನೋಟಿಸ್‌ ನೀಡಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಏಪ್ರಿಲ್‌ 27ರಂದು ತನಿಖಾಧಿಕಾರಿಯ ಎದುರು ಹಾಜರಾಗುವಂತೆ ಪರ್ನೆಮ್‌ ಪೊಲೀಸರು ನೋಟಿಸ್‌ನಲ್ಲಿ ತಿಳಿಸಿದ್ದರು.

ಕೇಜ್ರಿವಾಲ್‌ ಈ ಸಮನ್ಸ್‌ ಅನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಮಹೇಶ್ ಸೋನಕ್ ಮತ್ತು ವಾಲ್ಮೀಕಿ ಮೆನೇಜಸ್ ಅವರ ಗೋವಾದ ವಿಭಾಗೀಯ ಪೀಠ ಪ್ರಕರಣದ ವಿಚಾರಣೆ ನಡೆಸಿತು.

ಕೇಜ್ರಿವಾಲ್‌ ಅವರಿಗೆ ನೀಡಲಾದ ಸಮನ್ಸ್‌ ಅನ್ನು ಹಿಂಪಡೆಯುತ್ತಿದ್ದೇವೆ ಎಂದು ಪೊಲೀಸರು ಪೀಠಕ್ಕೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರಕ್ಕೆ ದೆಹಲಿ ವಿವಿ ನಿಷೇಧ ರದ್ದುಪಡಿಸಿದ ದೆಹಲಿ ಹೈಕೋರ್ಟ್‌

ಸಮನ್ಸ್‌ ಹಿಂಪಡೆಯುವ ಪೊಲೀಸ್‌ ಹೇಳಿಕೆಯ ನಂತರ ಪೀಠ ಅರ್ಜಿಯನ್ನು ವಿಲೇವಾರಿ ಮಾಡಿತು ಎಂದು ಕೇಜ್ರಿವಾಲ್‌ ಅವರನ್ನು ಪ್ರತಿನಿಧಿಸಿದ ವಕೀಲ ಸುಬೋಧ್‌ ಕಂಟಕ್‌ ಅವರು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದರು.

ಅರವಿಂದ್‌ ಕೇಜ್ರಿವಾಲ್‌ ಅವರಿಗೆ ನೀಡಿದ ನೋಟಿಸ್‌ನಲ್ಲಿ, “ಆಸ್ತಿ ವಿರೂಪಗೊಳಿಸಿದ ಪ್ರಕರಣದ ತನಿಖೆಗೆ ಸಂಬಂಧಿಸಿ ಸತ್ಯಾಂಶ ಮತ್ತು ಸಂದರ್ಭಗಳನ್ನು ಖಚಿತಪಡಿಸಿಕೊಳ್ಳಲು ನಿಮ್ಮನ್ನು ಪ್ರಶ್ನಿಸಬೇಕಿದೆ” ಎಂದು ಹೇಳಲಾಗಿತ್ತು.

ಅದಕ್ಕಾಗಿ ಗೋವಾ ಪೊಲೀಸರು ಕೇಜ್ರಿವಾಲ್‌ ಅವರಿಗೆ ನೋಟಿಸ್‌ ನೀಡಿದ್ದರು. ನೋಟಿಸ್‌ ಹಿಂಪಡೆದ ಕಾರಣವನ್ನು ಬಹಿರಂಗಪಡಿಸಲಾಗಿಲ್ಲ. ನೋಟಿಸ್‌ ಹಿಂಪಡೆಯುವುದಾಗಿ ಲಿಖಿತ ರೂಪದಲ್ಲಿ ಹೇಳಿಕೆ ಸಲ್ಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್ | ಪೇಟ ಮತ್ತು ಸನ್ ಗ್ಲಾಸ್ ಧರಿಸಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ

ದೇಶಾದ್ಯಂತ ಜಾತಿ ದೌರ್ಜ್ಯನದ ಘಟನೆಗಳು ಹೆಚ್ಚುತ್ತಲೇ ಇವೆ. ಇತ್ತೀಚಿನ ಘಟನೆಯೊಂದರಲ್ಲಿ, ಪೇಟ...

ಬಿಹಾರ, ಆಂಧ್ರ, ಒಡಿಶಾಗೆ ವಿಶೇಷ ಸ್ಥಾನಮಾನಕ್ಕೆ ಜೆಡಿಯು, ವೈಎಸ್ಆರ್‌ಸಿಪಿ, ಬಿಜೆಡಿ ಬೇಡಿಕೆ

ನವದೆಹಲಿಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಬಿಹಾರ ಹಾಗೂ ಆಂಧ್ರ ಪ್ರದೇಶಗಳಿಗೆ ವಿಶೇಷ...

ಸಿಕ್ಕಿಂ ಪ್ರವೇಶಿಸುವ ಪ್ರವಾಸಿ ವಾಹನಗಳು ಕಸದ ಚೀಲ ಹೊತ್ತೊಯ್ಯುವುದು ಕಡ್ಡಾಯ!

ಸಿಕ್ಕಿಂಗೆ ಪ್ರವೇಶಿಸುವ ಎಲ್ಲಾ ಪ್ರವಾಸಿ ವಾಹನಗಳು ಈಗ ಕಡ್ಡಾಯವಾಗಿ ದೊಡ್ಡ ಕಸದ...