‘ಭಕ್ತರಿಗೆ ಒಳ್ಳೇದಾದ್ರೆ ದೇವರು ಕ್ಷಮಿಸುತ್ತಾನೆ’; ಮೆಟ್ರೋಗಾಗಿ ದೇವಾಲಯ ಭೂಮಿ ಸ್ವಾಧೀನ ವಿಚಾರದಲ್ಲಿ ಹೈಕೋರ್ಟ್‌ ಹೇಳಿದ್ದು ಹೀಗೆ!

Date:

ಭಕ್ತರಿಗೆ ಒಳ್ಳೆಯದಾಗುವ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಿದರೆ ದೇವರೂ ಕೂಡ ಕ್ಷಮಿಸುತ್ತಾರೆ ಎಂದು ಮದ್ರಾಸ್ ಹೈಕೋರ್ಟ್‌ ಹೇಳಿದೆ. ಚೆನ್ನೈನಲ್ಲಿ ಮೆಟ್ರೋ ಕಾಮಗಾರಿಗಾಗಿ ದೇವಾಲಯದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಅನುಮತಿ ನೀಡಿದೆ.

- Advertisement -

ಚೆನ್ನೈನಲ್ಲಿ ಮೆಟ್ರೋ ರೈಲು ಕಾಮಗಾರಿ ನಡೆಸಲು ಎರಡು ದೇವಾಲಯಗಳ ಭೂಮಿಯನ್ನು ಸ್ವಾಧೀನಕ್ಕೆ ಪಡೆಯಲು ‘ಚೆನ್ನೈ ಮೆಟ್ರೋ ರೈಲು ನಿಗಮ’ (ಸಿಎಂಆರ್‌ಎಲ್‌) ಮುಂದಾಗಿತ್ತು. ಚೆನ್ನೈನ ರತಿನ ವಿನಾಯಗರ್ ದೇವಸ್ಥಾನ ಮತ್ತು ದುರ್ಗಾಯಿ ಅಮ್ಮನ್ ದೇವಸ್ಥಾನ ಭೂಮಿ ಸ್ವಾಧೀನದ ವಿರುದ್ಧ ದೇವಾಲಯಕ್ಕೆ ಸಂಬಂಧಿಸಿದವರು ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಅರ್ಜಿದಾರರ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್‌ ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ವಿಚಾರಣೆ ನಡೆಸಿದ್ದಾರೆ. “ಧಾರ್ಮಿಕ ಸಂಸ್ಥೆಗಳಿಗೆ ಸೇರಿದ ಭೂಮಿಯನ್ನು ಸಾರ್ವಜನಿಕ ಯೋಜನೆಗಳಿಗಾಗಿ ಸ್ವಾಧೀನ ಮಾಡಿಕೊಳ್ಳುವುದನ್ನು ತಡೆಯಲು ಸಾಧ್ಯವಿಲ್ಲ. ಭೂಸ್ವಾಧೀನದಿಂದ ವಿನಾಯಿತಿ ನೀಡಲಾಗುವುದಿಲ್ಲ” ಎಂದು ಹೇಳಿದೆ.

ಅಲ್ಲದೆ, ಇದೇ ಸಮಯದಲ್ಲಿ ದೇವಾಲಯಗಳ ಭೂಮಿಯ ಬದಲಾಗಿ ‘ಅಣ್ಣಾ ಸಾಲೈನಲ್ಲಿರುವ ಯುನೈಟೆಡ್ ಇಂಡಿಯಾ ಇನ್ಶುರೆನ್ಸ್‌’ ಕಂಪನಿಯ ಕಟ್ಟಡ ಇರುವ ಜಾಗವನ್ನು ವಶಕ್ಕೆ ಪಡೆಯುವುದಾಗಿ ಸಿಎಂಆರ್‌ಎಲ್ ಹೇಳಿತ್ತು. ಸಿಎಂಆರ್‌ಎಲ್‌ನ ಧೋರಣೆಯ ವಿರುದ್ಧವೂ ವಿಮಾ ಕಂಪನಿ ಹೈಕೋರ್ಟ್‌ ಮೆಟ್ಟಿಲೇರಿತ್ತು. “ಸಿಎಂಆರ್‌ಎಲ್‌ನಿಂದ ಎನ್‌ಒಸಿ ಪಡೆದ ನಂತರವೇ 250 ಕೋಟಿ ರೂ. ಖರ್ಚು ಮಾಡಿ ಕಂಪನಿಯ ಕಟ್ಟಡ ನಿರ್ಮಾಣ ಮಾಡಲಾಗಿದೆ. ಈಗ ಸಿಎಂಎರ್‌ಎಲ್‌ ತನ್ನ ಕಚೇರಿಯನ್ನು ಕೆಡವಲು ಮುಂದಾಗಿದೆ. ಇದು ಅನ್ಯಾಯ” ಎಂದು ವಾದಿಸಿತ್ತು.

ವಿಮಾ ಕಂಪನಿಯ ವಾದವನ್ನು ಸಮ್ಮತಿಸಿರುವ ಹೈಕೋರ್ಟ್, “ವಿಮಾ ಕಂಪನಿಗೆ ಸಿಎಂಆರ್‌ಎಲ್‌ನಿಂದಲೇ ಎನ್‌ಒಸಿ ನೀಡಲಾಗಿದೆ. ಈಗ, ಅದನ್ನು ಸ್ವಾಧೀನಪಡಿಸಿಕೊಳ್ಳುವುದು ಎಲ್ಲ ಹಂತಗಳಲ್ಲಿ ನೈಸರ್ಗಿಕ ನ್ಯಾಯದ ತತ್ವಗಳಿಗೆ ವಿರುದ್ಧವಾಗಿದೆ. ಸಿಎಂಆರ್‌ಎಲ್ ಅಂತಹ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದೆ. ವಿಮಾ ಕಂಪನಿಗೆ ಸಿಎಂಆರ್‌ಎಲ್‌ ನೀಡಿದ್ದ ನೋಟಿಸ್‌ಅನ್ನು ರದ್ದುಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...