ಮೋದಿ ರೂಪದಲ್ಲಿ ದೇವರೇ ಅವತರಿಸಿದ್ದಾನೆ: ಅಂಬಾನಿ

Date:

ಭಾರತದ ಅಮೃತ ಘಳಿಗೆಯಲ್ಲಿ ಮೋದಿ ಅವರು ತಮ್ಮ ಜನ್ಮದಿನದ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದ್ದಾರೆ. ಭಾರತವನ್ನು ಜಗತ್ತಿನ ಸರ್ವಶ್ರೇಷ್ಠ ರಾಷ್ಟ್ರವನ್ನಾಗಿಸಲು ಆ ದೇವರೇ ಮೋದಿ ಅವರ ರೂಪದಲ್ಲಿ ಅವತರಿಸಿದ್ದಾನೆ ಎಂದು ಉದ್ಯಮಿ, ಮೋದಿ ಅವರ ಅತ್ಯಾಪ್ತ ಮುಖೇಶ್ ಅಂಬಾನಿ ಹೇಳಿದ್ದಾರೆ.

- Advertisement -

ಮೋದಿ ಅವರ 75ನೇ ಜನ್ಮದಿನಕ್ಕೆ ಅಂಬಾನಿ ಶುಭಾಶಯ ಕೋರಿದ್ದಾರೆ. ಅವರ ವಿಡಿಯೋವನ್ನು ಎಎನ್‌ಐ ಪ್ರಕಟಿಸಿದೆ. ವಿಡಿಯೋದಲ್ಲಿ; “ಸ್ವತಂತ್ರ ಭಾರತವು 100 ವರ್ಷಗಳನ್ನು ಪೂರೈಸುವಾಗ ಮೋದಿ ಅವರು ಭಾರತಕ್ಕೆ ಸೇವೆ ಸಲ್ಲಿಸುವುದನ್ನು ಮುಂದುವರಿಸಬೇಕು ಎಂಬುದು ನನ್ನ ಆಳವಾದ ಆಶಯ. ಪ್ರಧಾನಿಯವರ ಜನ್ಮದಿನವು ಎಲ್ಲಾ ಭಾರತೀಯರಿಗೆ ‘ಹಬ್ಬದ ದಿನ’ವಾಗಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

“ಇಂದು 145 ಕೋಟಿ ಭಾರತೀಯರಿಗೆ ಹಬ್ಬದ ದಿನವಾಗಿದೆ. ಇದು ನಮ್ಮ ಅತ್ಯಂತ ಗೌರವಾನ್ವಿತ ಮತ್ತು ಪ್ರೀತಿಯ ಪ್ರಧಾನಿ ನರೇಂದ್ರಭಾಯಿ ಮೋದಿ ಜಿ ಅವರ 75ನೇ ಹುಟ್ಟುಹಬ್ಬ. ಭಾರತದ ಇಡೀ ವ್ಯಾಪಾರ ಸಮುದಾಯದ ಪರವಾಗಿ, ರಿಲಯನ್ಸ್ ಕುಟುಂಬ ಮತ್ತು ಅಂಬಾನಿ ಕುಟುಂಬದ ಪರವಾಗಿ, ನಾನು ಪ್ರಧಾನಿ ಮೋದಿ ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಭಾರತದ ಅಮೃತ ಕಾಲದಲ್ಲಿ ಮೋದಿ ಜಿ ಅವರ ಅಮೃತ ಮಹೋತ್ಸವ ಬರುತ್ತಿರುವುದು ಕಾಕತಾಳೀಯವಲ್ಲ. ಅವರ ಜನ್ಮದಿನವನ್ನು ಭಾರತೀಯರು ಉತ್ಸವವಾಗಿ ಆಚರಿಸಬೇಕು” ಎಂದು ಅವರು ಹೇಳಿದ್ದಾರೆ.

ಬಿಲ್ ಅಂಡ್‌ ಮೆಲಿಂಡಾ ಗೇಟ್ಸ್ ಫೌಂಡೇಶನ್‌ನ ಸಂಸ್ಥಾಪಕಿ ಮತ್ತು ಮೈಕ್ರೋಸಾಫ್ಟ್‌ನ ಮಾಜಿ ಸಿಇಒ ಬಿಲ್ ಗೇಟ್ಸ್ ಕೂಡ ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. “ಪ್ರಧಾನಿ ಮೋದಿ, ನಿಮ್ಮ 75ನೇ ಹುಟ್ಟುಹಬ್ಬದಂದು ನಿಮಗೆ ನನ್ನ ಶುಭಾಶಯಗಳು. ನೀವು ಭಾರತದ ಅದ್ಭುತ ಪ್ರಗತಿಯನ್ನು ಮುನ್ನಡೆಸುತ್ತಿದ್ದೀರಿ. ಜಾಗತಿಕ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವಾಗ ನಿಮಗೆ ಉತ್ತಮ ಆರೋಗ್ಯ ಮತ್ತು ನಿರಂತರ ಶಕ್ತಿ ದೊರೆಯಲಿ ಎಂದು ನಾನು ಬಯಸುತ್ತೇನೆ. ಭಾರತ ಸರ್ಕಾರದೊಂದಿಗಿನ ನಮ್ಮ ಪಾಲುದಾರಿಕೆಯನ್ನು ಗೇಟ್ಸ್ ಫೌಂಡೇಶನ್ ಗೌರವಿಸುತ್ತದೆ. ವಿಕ್ಷಿತ್ ಭಾರತ್ ಎಡೆಗೆ ಸಾಗುವ ಆಶಯವನ್ನು ನಾವು ಬೆಂಬಲಿಸುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

3 ದಿನಗಳ ಬ್ಯಾಂಕ್ ಮುಷ್ಕರ ವಾಪಸ್: ವಾರಕ್ಕೆ 5 ದಿನ ಕೆಲಸದ ಪರಿಶೀಲನೆಗೆ ಸಮಿತಿ

ಸಾರ್ವಜನಿಕ ವಲಯದ ಬ್ಯಾಂಕ್‌ ನೌಕರರ ಒಕ್ಕೂಟವು (ಯುಎಫ್‌ಬಿಯು) ಸೋಮವಾರದಿಂದ ಹಮ್ಮಿಕೊಂಡಿದ್ದ ಮೂರು...

2017ರಲ್ಲಿ ಚುನಾವಣಾ ಆಯೋಗವನ್ನು ನಂಬಿದ್ದೆವು, ಆದರೆ 2022ರಲ್ಲಿ ಎಸ್‌ಪಿ ಮತಗಳನ್ನು ಇಸಿ ಅಳಿಸಿದೆ: ಅಖಿಲೇಶ್ ಆರೋಪ

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಬೆಂಬಲಿಗರ...

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...