ಚಿನ್ನದ ಬೆಲೆ ಏರಿಕೆ: ಆಭರಣ ಧರಿಸುವ ಕುರಿತು ನಿಯಮ ಜಾರಿಗೆ ತಂದ ಗ್ರಾಮ ಪಂಚಾಯತಿ

Date:

ಕಳೆದ ಒಂದು ವರ್ಷಗಳಲ್ಲಿ ಚಿನ್ನದ ಬೆಲೆ ಸುಮಾರು 5,000 ರೂ. ಏರಿಕೆಯಾಗಿದೆ. ಕಳೆದ ಒಂದೇ ತಿಂಗಳಲ್ಲಿ 1,000 ರೂ.ಗಳಿಗೆ ಹೆಚ್ಚು ಏರಿಕೆ ಕಂಡಿದೆ. ದಿನೇ-ದಿನೇ ಚಿನ್ನದ ಬೆಲೆ ಹೆಚ್ಚುತ್ತಿರುವ ಕಾರಣ, ಮದುವೆ ಮತ್ತು ಇತರ ಕಾರ್ಯಕ್ರಮಗಳಲ್ಲಿ ಮಹಿಳೆಯರು ಮೂರಕ್ಕಿಂತ ಹೆಚ್ಚು ಚಿನ್ನದ ಆರಭರನಗಳನ್ನು ಧರಿಸುವಂತಿಲ್ಲ ಎಂದು ಎರಡು ಗ್ರಾಮ ಪಂಚಾಯತಿಗಳು ಹೊಸ ಸಾಮಾಜಿಕ ನಿಯಮ ಜಾರಿಗೆ ತಂದಿವೆ.

- Advertisement -

ಉತ್ತರಾಖಂಡದ ಕಂಧಾರ್ ಮತ್ತು ಇಂದ್ರಾಣಿ ಗ್ರಾಮ ಪಂಚಾಯತಿಗಳ ಈ ನಿಯಮಗಳನ್ನು ಜಾರಿಗೆ ತಂದಿವೆ. “ಮದುವೆ ಮತ್ತು ಇತರ ಕಾರ್ಯಕ್ರಮಗಳ ಸಮಯದಲ್ಲಿ ಮಹಿಳೆಯರು ಕೇವಲ ಮೂಗುತಿ, ಕಿವಿಯೋಲೆ ಹಾಗೂ ಮಂಗಳಸೂತ್ರ ಮಾತ್ರವೇ ಧರಿಸಬೇಕು. ಈ ನಿಮಯವನ್ನು ಉಲ್ಲಂಘಿಸಿದರೆ, 50,000 ರೂ. ದಂಡ ವಿಧಿಸಲಾಗುತ್ತದೆ” ಎಂದು ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ನಿಯಮದ ಕುರಿತು ಮಾತನಾಡಿರುವ ಕಂಧಾರ್ ಗ್ರಾಮದ ಮುಖಂಡ ಅರ್ಜುನ್ ಸಿಂಗ್, “ಚಿನ್ನದ ಬೆಲೆ ಏರಿಕೆ ಭಾರೀ ಏರಿಕೆಯಾಗಿದೆ. ಪರಿಣಾಮ, ಜನರಲ್ಲಿ ಆರ್ಥಿಕ ಒತ್ತಡ ಹೆಚ್ಚಾಗಿದೆ. ಸಂಪತ್ತಿನ ಪ್ರದರ್ಶನದ ಸಂಸ್ಕೃತಿಯಿಂದ ಬಡವರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಈ ಅಸಮಾನತೆಯನ್ನು ತಗ್ಗಿಸಲು ಇಂತಹ ನಿಮಯಗಳ ಅಗತ್ಯವಿದೆ” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ಮಹಾಘಟಬಂಧನ್ ಭರಪೂರ ಭರವಸೆ; ಕಾರ್ಯಸಾಧುವೇ?

ಈ ನಿಯಮಕ್ಕೆ ಅಕ್ಷೇಪ ವ್ಯಕ್ತಪಡಿಸಿರುವ ಗ್ರಾಮದ ನಿವಾಸಿ ಅಮಲಾ ಚೌಹಾಣ್, “ಚಿನ್ನ ಒಂದು ಹೂಡಿಕೆಯ ಭಾಗ. ಚಿನ್ನ ಖರೀದಿದ್ದರೆ, ಅದೊಂದು ಆಸ್ತಿಯಾಗಿ ಉಳಿಯುತ್ತದೆ. ಭವಿಷ್ಯದಲ್ಲಿ ನೆರವಿಗೂ ಬಳಕೆಯಾಗುತ್ತದೆ. ಆದರೆ, ಮದ್ಯದಿಂದ ಯಾವುದೇ ಲಾಭವಿಲ್ಲ. ಆದ್ದರಿಂದ, ಮಹಿಳೆಯರು ಧರಿಸುವ ಆಭರಣಕ್ಕೆ ಮಿತಿ ಹೇರಿರುವಂತೆಯೇ, ಪರುಷರು ಮದ್ಯ ಸೇವನೆಯ ಮೇಲೂ ನಿಯಂತ್ರಣ ವಿಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಮದುವೆಯಗಳಲ್ಲಿ ಕೇವಲ ಆಭರಣಗಳು ಮಾತ್ರವೇ ಪ್ರದರ್ಶನದ ಸಂಸ್ಕೃತಿಯಲ್ಲಿಲ್ಲ. ದುಬಾರಿ ಉಡುಗೊರೆ, ಐಷಾರಾಮಿ ಕಾರ್ಯಕ್ರಮಗಳೂ ಪ್ರದರ್ಶನ ಸಂಸ್ಕೃತಿಯೇ ಆಗಿವೆ. ಅವುಗಳನ್ನೂ ನಿರ್ಬಂಧಿಸಬೇಕು” ಎಂದು ಮಹಿಳೆಯರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...