ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ; ಗ್ರಾಂಗೆ ₹15,513

Date:

ದೇಶದಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆ ಕಂಡಿದೆ. ಇಂದು (ಆ.13) 24 ಕ್ಯಾರೆಟ್‌ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹15,513 ಇದ್ದರೆ, 22 ಕ್ಯಾರೆಟ್‌ ಚಿನ್ನದ ದರ ₹14,220 ಹಾಗೂ 18 ಕ್ಯಾರೆಟ್‌ ಚಿನ್ನದ ಬೆಲೆ ₹11,635ಕ್ಕೆ ತಲುಪಿದೆ ಎಂದು GoodReturns ವರದಿ ಮಾಡಿದೆ.

- Advertisement -

ಆಗಸ್ಟ್‌ 12ಕ್ಕೆ ಹೋಲಿಸಿದರೆ 24 ಕ್ಯಾರೆಟ್‌ ಚಿನ್ನದ ದರ ಪ್ರತಿ ಗ್ರಾಂಗೆ ₹27 ಏರಿಕೆಯಾಗಿದೆ. ಇದೇ ವೇಳೆ 22 ಕ್ಯಾರೆಟ್‌ ಚಿನ್ನದ ಬೆಲೆಯಲ್ಲಿ ₹25 ಹಾಗೂ 18 ಕ್ಯಾರೆಟ್‌ ಚಿನ್ನದ ದರದಲ್ಲಿ ₹21 ಹೆಚ್ಚಳವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗುತ್ತಿರುವ ಏರಿಳಿತ, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ಹಾಗೂ ಜಾಗತಿಕ ಆರ್ಥಿಕ ಅನಿಶ್ಚಿತತೆಯ ಪರಿಣಾಮವಾಗಿ ಚಿನ್ನದ ಬೆಲೆಯಲ್ಲಿ ದಿನದಿಂದ ದಿನಕ್ಕೆ ಬದಲಾವಣೆ ಕಂಡುಬರುತ್ತಿದೆ. ಸುರಕ್ಷಿತ ಹೂಡಿಕೆಯ ಆಯ್ಕೆಯಾಗಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಿರುವುದು ಕೂಡ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಉದ್ವಿಗ್ನತೆ ಜಾಗತಿಕ ಮಾರುಕಟ್ಟೆಗಳ ಮೇಲೆ ಪರಿಣಾಮ ಬೀರುತ್ತಿದೆ. ಹೋರ್ಮುಜ್ ಜಲಸಂಧಿಯ ಮೇಲಿನ ಅಮೆರಿಕದ ಹಿಡಿತದ ಕುರಿತು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೊಮ್ಮೆ ಹೇಳಿಕೆ ನೀಡಿದ್ದು, ಇರಾನ್‌ನೊಂದಿಗಿನ ಸಂಘರ್ಷ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಈ ಪ್ರಮುಖ ಜಲಮಾರ್ಗದಲ್ಲಿ ಹಡಗುಗಳ ಸಂಚಾರವೂ ಕುಸಿದಿದೆ. ಇತ್ತ, ಅಮೆರಿಕದ ವಿರುದ್ಧದ ಪ್ರತಿರೋಧವನ್ನು ಮುಂದುವರಿಸುವುದಾಗಿ ಇರಾನ್‌ ಸ್ಪಷ್ಟಪಡಿಸಿದೆ. ಇಸ್ರೇಲ್‌ನ ಸೇನಾ ಕಾರ್ಯಾಚರಣೆಗಳಿಗೆ ಫ್ರಾನ್ಸ್‌ ಸೇರಿದಂತೆ ಹಲವು ಪಾಶ್ಚಿಮಾತ್ಯ ರಾಷ್ಟ್ರಗಳು ನೀಡುತ್ತಿರುವ ಬೆಂಬಲವನ್ನೂ ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್‌ ಅರಾಘ್ಚಿ ಟೀಕಿಸಿದ್ದಾರೆ.

ಇದನ್ನೂ ಓದಿ: ನನ್ನ ವೋಟರ್ ಐಡಿ ಡಿಲೀಟ್ ಮಾಡಲು ನಾಟಕ: ಚುನಾವಣಾ ಆಯೋಗ, ಮಾಧ್ಯಮಗಳ ವಿರುದ್ಧ ಪ್ರಕಾಶ್ ರಾಜ್ ಆಕ್ರೋಶ

ಪಶ್ಚಿಮ ಏಷ್ಯಾದ ಸಂಘರ್ಷದ ಪರಿಣಾಮ ಕಚ್ಚಾ ತೈಲದ ಬೆಲೆಯ ಮೇಲೂ ಒತ್ತಡ ಮುಂದುವರಿದಿದೆ. ಬ್ರೆಂಟ್‌ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಸುಮಾರು 87.80 ಡಾಲರ್‌ ಹಾಗೂ WTI ಕಚ್ಚಾ ತೈಲದ ಬೆಲೆ ಸುಮಾರು 82.22 ಡಾಲರ್‌ ಮಟ್ಟದಲ್ಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆ ಮತ್ತು ಮಾರುಕಟ್ಟೆಯಲ್ಲಿನ ಅನಿಶ್ಚಿತತೆಯಿಂದ ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾಗಿ ಚಿನ್ನದತ್ತ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಇದರ ಪರಿಣಾಮವಾಗಿ ಜಾಗತಿಕ ಚಿನ್ನದ ಬೆಲೆಯಲ್ಲಿ ಏರಿಳಿತ ಮುಂದುವರಿದಿದ್ದು, ಅದರ ನೇರ ಪರಿಣಾಮ ಭಾರತದ ಮಾರುಕಟ್ಟೆಯ ಮೇಲೂ ಬೀರುತ್ತಿದೆ.

ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಸ್ಪಾಟ್‌ ದರ, ಆಮದು ಸುಂಕ, ರೂಪಾಯಿ–ಡಾಲರ್‌ ವಿನಿಮಯ ದರ ಸೇರಿದಂತೆ ಹಲವು ಅಂಶಗಳ ಮೇಲೆ ಅವಲಂಬಿತವಾಗಿರುವುದರಿಂದ ಪ್ರತಿದಿನ ದರದಲ್ಲಿ ಬದಲಾವಣೆ ಕಂಡುಬರುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...