ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಮಕ್ಕಳ್ ನೀದಿ ಮೈಯಂ ಪಕ್ಷದ(ಎಂಎನ್‌ಎಂ) ಅಧ್ಯಕ್ಷ ಹಾಗೂ ನಟ ಕಮಲ್ ಹಾಸನ್ ಮೈತ್ರಿ ರಚಿಸಿಕೊಳ್ಳುವದರ ಬಗ್ಗೆ ಇನ್ನೆರೆಡು ದಿನಗಳಲ್ಲಿ ತಿಳಿಸುವುದಾಗಿ ಹೇಳಿದ್ದಾರೆ.
ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಸಂಸತ್ತಿನ ಚುನಾವಣೆಗಳನ್ನು ಉಲ್ಲೇಖಿಸಿ ಒಳ್ಳೆಯ ಅವಕಾಶಗಳನ್ನು ನಿರೀಕ್ಷಿಸಲಾಗುತ್ತಿದೆ. ಚುನಾವಣಾ ಕಾರ್ಯಗಳು ಕೂಡ ಚೆನ್ನಾಗಿ ನಡೆಯುತ್ತಿವೆ ಎಂದು ಹೇಳಿದರು.
“ಇನ್ನು ಎರಡು ದಿನಗಳಲ್ಲಿ ಶುಭ ಸುದ್ದಿಯೊಂದಿಗೆ ನಿಮ್ಮನ್ನು ಭೇಟಿ ಮಾಡುತ್ತೇನೆ. ಸಂಸತ್ ಚುನಾವಣಾ ಕಾರ್ಯಗಳು ಚೆನ್ನಾಗಿ ನಡೆಯುತ್ತಿವೆ. ಒಳ್ಳೆಯ ಅವಕಾಶಕ್ಕಾಗಿ ನಿರೀಕ್ಷಿಸಲಾಗುತ್ತಿದೆ. ಮೈತ್ರಿಗೆ ಸಂಬಂಧಿಸಿದಂತೆ ಇನ್ನೆರಡು ದಿನಗಳಲ್ಲಿ ನಾವು ನಿರ್ಧಾರ ಪ್ರಕಟಿಸುತ್ತೇವೆ” ಎಂದು ಕಮಲ್ ಹಾಸನ್ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗ್ಯಾರಂಟಿಗಳ ಅಸ್ತಿಭಾರದ ಮೇಲೆ ಕಟ್ಟಿದ ಅಹಿಂದ ಬಜೆಟ್
ತಮ್ಮ ಮುಂಬರುವ ಚಿತ್ರ ‘ಥಗ್ ಲೈಫ್’ ಪೂರ್ವ ಸಿದ್ಧತಾ ಕೆಲಸಗಳನ್ನು ಮುಗಿಸಿಕೊಂಡು ಅಮೆರಿಕದಿಂದ ಇಂದು ಮುಂಜಾನೆ ಚೆನ್ನೈಗೆ ಆಗಮಿಸಿದರು.
ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಡಿಎಂಕೆ ನಾಯಕ ಹಾಗೂ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ತಮ್ಮ ಪಕ್ಷ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಮಲ್ ಹಾಸನ್ ಅವರ ಎಂಎನ್‌ಎಂ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದರ ಬಗ್ಗೆ ಸುಳಿವು ನೀಡಿದ್ದರು.
ಕಮಲ್ ಹಾಸನ್ ಅವರು 2018ರಲ್ಲಿ ಎಂಎನ್‌ಎಂ ಪಕ್ಷವನ್ನು ಸ್ಥಾಪಿಸಿದ್ದರು. ಆದರೆ 2019ರ ಲೋಕಸಭೆ ಹಾಗೂ 2021ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಪರಾಭವಗೊಂಡಿತ್ತು. ಇರೋಡ್‌ನಲ್ಲಿ ನಂತರದಲ್ಲಿ ನಡೆದ ಉಪಚುನಾವಣೆಯಲ್ಲಿಯೂ ಕೂಡ ಎಂಎನ್‌ಎಂ ಡಿಎಂಕೆ ಅಭ್ಯರ್ಥಿಗೆ ಬೆಂಬಲ ನೀಡಿತ್ತು.
ಕಮಲ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 2022ರ ಡಿಸೆಂಬರ್‌ನಲ್ಲಿ ಕೈಗೊಂಡ ಭಾರತ್ ಜೋಡೋ ಯಾತ್ರೆಯಲ್ಲಿಯೂ ಕೂಡ ಭಾಗಿಯಾಗಿದ್ದರು.