ಎರಡು ದಿನಗಳಲ್ಲಿ ಶುಭ ಸುದ್ದಿ ನೀಡುತ್ತೇನೆ ಎಂದ ಕಮಲ್ ಹಾಸನ್

Date:

ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಮಕ್ಕಳ್ ನೀದಿ ಮೈಯಂ ಪಕ್ಷದ(ಎಂಎನ್‌ಎಂ) ಅಧ್ಯಕ್ಷ ಹಾಗೂ ನಟ ಕಮಲ್ ಹಾಸನ್ ಮೈತ್ರಿ ರಚಿಸಿಕೊಳ್ಳುವದರ ಬಗ್ಗೆ ಇನ್ನೆರೆಡು ದಿನಗಳಲ್ಲಿ ತಿಳಿಸುವುದಾಗಿ ಹೇಳಿದ್ದಾರೆ.

- Advertisement -

ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಸಂಸತ್ತಿನ ಚುನಾವಣೆಗಳನ್ನು ಉಲ್ಲೇಖಿಸಿ ಒಳ್ಳೆಯ ಅವಕಾಶಗಳನ್ನು ನಿರೀಕ್ಷಿಸಲಾಗುತ್ತಿದೆ. ಚುನಾವಣಾ ಕಾರ್ಯಗಳು ಕೂಡ ಚೆನ್ನಾಗಿ ನಡೆಯುತ್ತಿವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಇನ್ನು ಎರಡು ದಿನಗಳಲ್ಲಿ ಶುಭ ಸುದ್ದಿಯೊಂದಿಗೆ ನಿಮ್ಮನ್ನು ಭೇಟಿ ಮಾಡುತ್ತೇನೆ. ಸಂಸತ್‌ ಚುನಾವಣಾ ಕಾರ್ಯಗಳು ಚೆನ್ನಾಗಿ ನಡೆಯುತ್ತಿವೆ. ಒಳ್ಳೆಯ ಅವಕಾಶಕ್ಕಾಗಿ ನಿರೀಕ್ಷಿಸಲಾಗುತ್ತಿದೆ. ಮೈತ್ರಿಗೆ ಸಂಬಂಧಿಸಿದಂತೆ ಇನ್ನೆರಡು ದಿನಗಳಲ್ಲಿ ನಾವು ನಿರ್ಧಾರ ಪ್ರಕಟಿಸುತ್ತೇವೆ” ಎಂದು ಕಮಲ್‌ ಹಾಸನ್‌ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗ್ಯಾರಂಟಿಗಳ ಅಸ್ತಿಭಾರದ ಮೇಲೆ ಕಟ್ಟಿದ ಅಹಿಂದ ಬಜೆಟ್

ತಮ್ಮ ಮುಂಬರುವ ಚಿತ್ರ ‘ಥಗ್‌ ಲೈಫ್’ ಪೂರ್ವ ಸಿದ್ಧತಾ ಕೆಲಸಗಳನ್ನು ಮುಗಿಸಿಕೊಂಡು ಅಮೆರಿಕದಿಂದ ಇಂದು ಮುಂಜಾನೆ ಚೆನ್ನೈಗೆ ಆಗಮಿಸಿದರು.

ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಡಿಎಂಕೆ ನಾಯಕ ಹಾಗೂ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ತಮ್ಮ ಪಕ್ಷ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಮಲ್‌ ಹಾಸನ್‌ ಅವರ ಎಂಎನ್‌ಎಂ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದರ ಬಗ್ಗೆ ಸುಳಿವು ನೀಡಿದ್ದರು.

ಕಮಲ್‌ ಹಾಸನ್‌ ಅವರು 2018ರಲ್ಲಿ ಎಂಎನ್‌ಎಂ ಪಕ್ಷವನ್ನು ಸ್ಥಾಪಿಸಿದ್ದರು. ಆದರೆ 2019ರ ಲೋಕಸಭೆ ಹಾಗೂ 2021ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಪರಾಭವಗೊಂಡಿತ್ತು. ಇರೋಡ್‌ನಲ್ಲಿ ನಂತರದಲ್ಲಿ ನಡೆದ ಉಪಚುನಾವಣೆಯಲ್ಲಿಯೂ ಕೂಡ ಎಂಎನ್‌ಎಂ ಡಿಎಂಕೆ ಅಭ್ಯರ್ಥಿಗೆ ಬೆಂಬಲ ನೀಡಿತ್ತು.

ಕಮಲ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 2022ರ ಡಿಸೆಂಬರ್‌ನಲ್ಲಿ ಕೈಗೊಂಡ ಭಾರತ್ ಜೋಡೋ ಯಾತ್ರೆಯಲ್ಲಿಯೂ ಕೂಡ ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...