ಭೀಕರ ರೈಲು ಅಪಘಾತ : ಲೋಕೋ ಪೈಲಟ್‌ ಸಾವು, ನಾಲ್ವರಿಗೆ ಗಂಭೀರ ಗಾಯ

Date:

  • ಸಿಗ್ನಲ್‌ ವ್ಯತ್ಯಯದಿಂದ ಡಿಕ್ಕಿ ಹೊಡೆದ ಗೂಡ್ಸ್‌ ರೈಲುಗಳು
  • ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲು

ಮಧ್ಯಪ್ರದೇಶದ ಶಾದೋರ್‌ ಜಿಲ್ಲೆಯ ಸಿಂಗ್‌ಪುರ್‌ ಎಂಬಲ್ಲಿ ಎರಡು ಗೂಡ್ಸ್‌ ರೈಲುಗಳಲು ಡಿಕ್ಕಿಯಾಗಿದ್ದು, ಈ ಭೀಕರ ಅಪಘಾತದಲ್ಲಿ ರೈಲಿನ ಲೋಕೋ ಪೈಲಟ್‌ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ನಾಲ್ವರು ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

- Advertisement -

ಮಂಗಳವಾರ ಬೆಳಗ್ಗೆ 6:50ರ ಸುಮಾರಿಗೆ ಘಟನೆ ಸಂಭವಿಸಿದೆ. ವಿಲಾಸ್‌ ಪುರ್‌ ಮತ್ತು ಕತ್ನಿ ಮಾರ್ಗದಲ್ಲಿ ಎದುರಾಗಿ ಸಾಗುತ್ತಿದ್ದ ಗೂಡ್ಸ್‌ ರೈಲುಗಳು ಸಿಗ್ನಲ್‌ ವ್ಯತ್ಯಯದಿಂದಾಗಿ ಡಿಕ್ಕಿ ಹೊಡೆದಿವೆ ಎಂದು ರೈಲ್ವೇ ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಡಿಕ್ಕಿಯ ರಭಸಕ್ಕೆ ಎರಡೂ ರೈಲಿನ ಎಂಜಿನ್‌ ಮತ್ತು ಬೋಗಿಗಳು ಹಳಿಯಿಂದ ಉರುಳಿ ಬಿದ್ದಿವೆ. ಪರಿಣಾಮ ರೈಲುಗಳ ಎಂಜಿನ್‌ ಭಾಗಕ್ಕೆ ಬೆಂಕಿ ಹೊತ್ತಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಲೋಕೋ ಪೈಲಟ್‌ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ನಾಲ್ವರ ಪೈಕಿ ಇಬ್ಬರು ರೈಲಿನಡಿ ಸಿಲುಕಿಕೊಂಡಿದ್ದಾರೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಕ್ರೇನ್‌ ಬಳಸಿ ಗಾಯಾಳುಗಳ ರಕ್ಷಣಾ ಕಾರ್ಯಾಚರಣೆ ಮಾಡಲಾಗುತ್ತಿದೆ. ಉಳಿದ ಇಬ್ಬರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...