ಪ್ರತಿಭಟನಾನಿರತ ವಿದ್ಯಾರ್ಥಿಗಳ ಮನೆಗೆ ಗೂಂಡಾಗಳು, 15ರ ಬಾಲಕಿಗೆ ಬಲವಂತದ ಕ್ಷಮಾಪಣೆ: ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ

Date:

ಪರೀಕ್ಷಾ ಅಕ್ರಮ ಖಂಡಿಸಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಮತ್ತು ಗೂಂಡಾಗಳ ಮೂಲಕ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 15 ವರ್ಷದ ಬಾಲಕಿಯೊಬ್ಬಳಿಂದ ಬಲವಂತವಾಗಿ ಕ್ಷಮಾಪಣೆ ಪಡೆಯಲಾಗಿದೆ ಹಾಗೂ ಪ್ರತಿಭಟನೆಯಲ್ಲಿ ಭಾಗವಹಿಸಿದ ಯುವಕರ ಮನೆಗಳಿಗೆ ಗೂಂಡಾಗಳನ್ನು ಕಳುಹಿಸಿ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

- Advertisement -

ನವದೆಹಲಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಹುಲ್ ಗಾಂಧಿ, ದೇಶದ ಶೈಕ್ಷಣಿಕ ವ್ಯವಸ್ಥೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ದನಿ ಎತ್ತಿದ ಯುವಕರ ಮೇಲೆ ಸರ್ಕಾರ ಹಿಂಸಾಚಾರ ಮತ್ತು ಕಿರುಕುಳದ ಹಾದಿ ಹಿಡಿದಿದೆ ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನೂ ಓದಿ: ನಮ್ಮ ಬೆನ್ನು ಹತ್ತಿ ಬೇಟೆಯಾಡುವುದನ್ನು ಇನ್ನಾದರೂ ನಿಲ್ಲಿಸಿ: ಪ್ರಧಾನಿ ನಿಂದನೆ ಆರೋಪ ಹೊತ್ತ ಬಾಲೆಯ ತಾಯಿ ಕಳಕಳಿ

ಸುದ್ದಿಗೋಷ್ಠಿಯಲ್ಲಿ ದೆಹಲಿ, ಮುಂಬೈ, ಜಾರ್ಖಂಡ್ ಹಾಗೂ ಉತ್ತರ ಪ್ರದೇಶದ ಪ್ರಮುಖ ವಿದ್ಯಾರ್ಥಿ ನಾಯಕರು ಮತ್ತು ಸಂತ್ರಸ್ತರು ಉಪಸ್ಥಿತರಿದ್ದರು. ಜುಲೈ 20 ರಂದು ನಡೆದ ಸಂಸತ್ ಚಲೋ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಗಾಯಕ್ಕೆ ಒಳಗಾದ 32 ವರ್ಷದ ಮಹಿಳಾ ಪ್ರತಿಭಟನಾಕಾರರು ತಮ್ಮ ಅನುಭವ ಹಂಚಿಕೊಂಡರು.

“ಪರೀಕ್ಷಾ ಅಕ್ರಮ ಖಂಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಧರಣಿಯಲ್ಲಿ ಭಾಗವಹಿಸಿದ್ದ 15 ವರ್ಷದ ಬಾಲಕಿಯ ಮೇಲೆ ಎಫ್‌ಐಆರ್ ದಾಖಲಿಸಿ, ಆಕೆಯಿಂದ ಬಲವಂತವಾಗಿ ಕ್ಷಮಾಪಣೆ ವೀಡಿಯೋ ಪಡೆಯಲಾಗಿದೆ. ಇದು ಸಂಪೂರ್ಣ ಅಸಂಬದ್ಧ” ಎಂದು ರಾಹುಲ್ ಕರೆದಿದ್ದಾರೆ. ಹಾಗೆಯೇ ವಿದ್ಯಾರ್ಥಿಗಳು ಯಾವುದೇ ಅಪರಾಧ ಮಾಡಿಲ್ಲ ಹಾಗೂ ಅವರು ಕ್ಷಮೆ ಕೇಳುವ ಅಗತ್ಯವಿಲ್ಲ ಎಂದಿದ್ದಾರೆ.

ಜುಲೈನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಯುವಜನರ ಮನೆಗಳಿಗೆ ಗೂಂಡಾಗಳನ್ನು ಕಳುಹಿಸಿ ಬೆದರಿಕೆ ಹಾಕಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಆನ್‌ಲೈನ್ ಕಿರುಕುಳ ನೀಡಲಾಗುತ್ತಿದೆ ಎಂದೂ ರಾಹುಲ್ ಗಾಂಧಿ ದೂರಿದ್ದಾರೆ.

“ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿಚಾರ್ಜ್ ಹಾಗೂ ಪೆಲೆಟ್ ಗನ್ ಬಳಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ನೇರ ಹೊಣೆ. ಮಾಧ್ಯಮಗಳ ಮುಂದೆ ಬಂದು ವಿದ್ಯಾರ್ಥಿಗಳ ಪ್ರಶ್ನೆಗಳನ್ನು ಎದುರಿಸುವ ಧೈರ್ಯ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗಿಲ್ಲ” ಎಂದು ರಾಹುಲ್ ಟೀಕಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...