ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಗುರುವಾರ ರಾಜೀನಾಮೆ ಸಲ್ಲಿಸಿದ್ದು, “ಸನಾತನ ವಿರೋಧಿ ಘೋಷಣೆ ಕೂಗಲಾಗದು” ಎಂದು ಹೇಳಿದ್ದಾರೆ.
ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಪತ್ರ ಬರೆದಿರುವ ಗೌರವ್ ವಲ್ಲಭ್, ಪಕ್ಷವು ದಿಕ್ಕಿಲ್ಲದೆ ಸಾಗುತ್ತಿದೆ ಎಂದು ಹೇಳಿದ್ದಾರೆ. ‘ಸನಾತನ ವಿರೋಧಿ’ ಘೋಷಣೆ, ಜಾತಿ ಗಣತಿಯಂತಹ ವಿಚಾರಗಳು ತಮ್ಮ ನಿರ್ಗಮನಕ್ಕೆ ಕಾರಣ ಎಂದು ಹೇಳಿಕೊಂಡಿದ್ದಾರೆ.
ಇದನ್ನು ಓದಿದ್ದೀರಾ? ಜಾರ್ಖಂಡ್ ಬಿಜೆಪಿ ಶಾಸಕ ಜೈ ಪ್ರಕಾಶ್ ಕಾಂಗ್ರೆಸ್ ಸೇರ್ಪಡೆ
“ಇಂದು ಕಾಂಗ್ರೆಸ್ ಪಕ್ಷ ಮುನ್ನಡೆಯುತ್ತಿರುವ ದಿಕ್ಕು ತೋಚದ ರೀತಿಯಲ್ಲಿ ನನಗೆ ನೆಮ್ಮದಿ ಇಲ್ಲದಂತಾಗಿದೆ. ಸನಾತನ ಸಂಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದಾಗಲಿ, ದೇಶದ ಸಂಪತ್ತನ್ನು ಸೃಷ್ಟಿಸಿದವರನ್ನು ನಿಂದಿಸುವುದಾಗಲಿ ನಾನು ಹಗಲಿರುಳು ಮಾಡಲಾರೆ. ಅದಕ್ಕಾಗಿಯೇ ಕಾಂಗ್ರೆಸ್ ಪಕ್ಷದ ಎಲ್ಲಾ ಹುದ್ದೆಗಳು ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಗೌರವ್ ವಲ್ಲಭ್ ಟ್ವೀಟ್ ಮಾಡಿದ್ದಾರೆ.
कांग्रेस पार्टी आज जिस प्रकार से दिशाहीन होकर आगे बढ़ रही है,उसमें मैं ख़ुद को सहज महसूस नहीं कर पा रहा.मैं ना तो सनातन विरोधी नारे लगा सकता हूं और ना ही सुबह-शाम देश के वेल्थ क्रिएटर्स को गाली दे सकता.इसलिए मैं कांग्रेस पार्टी के सभी पदों व प्राथमिक सदस्यता से इस्तीफ़ा दे रहाहूं pic.twitter.com/Xp9nFO80I6
— Prof. Gourav Vallabh (@GouravVallabh) April 4, 2024
ಮಲ್ಲಿಕಾರ್ಜುನ ಖರ್ಗೆ ಅವರ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಪ್ರಚಾರವನ್ನು ಗೌರವ್ ವಲ್ಲಭ್ ನಿರ್ವಹಿಸಿದ್ದರು. ಆರ್ಥಿಕ ಸಮಸ್ಯೆಗಳ ಬಗ್ಗೆ ಪರಿಣಾಮಕಾರಿ ಧ್ವನಿ ಎತ್ತಿದ್ದರು. ಅವರು 2023 ರಲ್ಲಿ ಉದಯಪುರ ಕ್ಷೇತ್ರದಿಂದ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಪರಾವಭಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿಯು 32,000 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು.
ಗೌರವ್ ವಲ್ಲಭ್ ಅವರು 2019 ರಲ್ಲಿ ಜಾರ್ಖಂಡ್‌ನ ಜೆಮ್‌ಶೆಡ್‌ಪುರ ಪೂರ್ವದಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದಾರೆ. ಈ ಚುನಾವಣೆಯಲ್ಲಿ ಗೌರವ್ 18,000 ಕ್ಕೂ ಹೆಚ್ಚು ಮತಗಳನ್ನು ಗಳಿಸಿದ್ದು ಆಗಿನ ಮುಖ್ಯಮಂತ್ರಿ ರಘುಬರ್ ದಾಸ್ ಮತ್ತು ಸರಯು ರಾಯ್ ನಂತರ ಮೂರನೇ ಸ್ಥಾನದಲ್ಲಿದ್ದರು.