ಸನಾತನ ವಿರೋಧಿ ಘೋಷಣೆ ಕೂಗಲಾಗದು: ಕಾಂಗ್ರೆಸ್‌ ವಕ್ತಾರ ಗೌರವ್ ವಲ್ಲಭ್ ರಾಜೀನಾಮೆ

Date:

ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಗುರುವಾರ ರಾಜೀನಾಮೆ ಸಲ್ಲಿಸಿದ್ದು, “ಸನಾತನ ವಿರೋಧಿ ಘೋಷಣೆ ಕೂಗಲಾಗದು” ಎಂದು ಹೇಳಿದ್ದಾರೆ.

- Advertisement -

ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಪತ್ರ ಬರೆದಿರುವ ಗೌರವ್ ವಲ್ಲಭ್, ಪಕ್ಷವು ದಿಕ್ಕಿಲ್ಲದೆ ಸಾಗುತ್ತಿದೆ ಎಂದು ಹೇಳಿದ್ದಾರೆ. ‘ಸನಾತನ ವಿರೋಧಿ’ ಘೋಷಣೆ, ಜಾತಿ ಗಣತಿಯಂತಹ ವಿಚಾರಗಳು ತಮ್ಮ ನಿರ್ಗಮನಕ್ಕೆ ಕಾರಣ ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ?   ಜಾರ್ಖಂಡ್ ಬಿಜೆಪಿ ಶಾಸಕ ಜೈ ಪ್ರಕಾಶ್ ಕಾಂಗ್ರೆಸ್ ಸೇರ್ಪಡೆ

“ಇಂದು ಕಾಂಗ್ರೆಸ್ ಪಕ್ಷ ಮುನ್ನಡೆಯುತ್ತಿರುವ ದಿಕ್ಕು ತೋಚದ ರೀತಿಯಲ್ಲಿ ನನಗೆ ನೆಮ್ಮದಿ ಇಲ್ಲದಂತಾಗಿದೆ. ಸನಾತನ ಸಂಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದಾಗಲಿ, ದೇಶದ ಸಂಪತ್ತನ್ನು ಸೃಷ್ಟಿಸಿದವರನ್ನು ನಿಂದಿಸುವುದಾಗಲಿ ನಾನು ಹಗಲಿರುಳು ಮಾಡಲಾರೆ. ಅದಕ್ಕಾಗಿಯೇ ಕಾಂಗ್ರೆಸ್ ಪಕ್ಷದ ಎಲ್ಲಾ ಹುದ್ದೆಗಳು ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಗೌರವ್ ವಲ್ಲಭ್ ಟ್ವೀಟ್ ಮಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಪ್ರಚಾರವನ್ನು ಗೌರವ್ ವಲ್ಲಭ್ ನಿರ್ವಹಿಸಿದ್ದರು. ಆರ್ಥಿಕ ಸಮಸ್ಯೆಗಳ ಬಗ್ಗೆ ಪರಿಣಾಮಕಾರಿ ಧ್ವನಿ ಎತ್ತಿದ್ದರು. ಅವರು 2023 ರಲ್ಲಿ ಉದಯಪುರ ಕ್ಷೇತ್ರದಿಂದ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಪರಾವಭಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿಯು 32,000 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು.

ಗೌರವ್ ವಲ್ಲಭ್ ಅವರು 2019 ರಲ್ಲಿ ಜಾರ್ಖಂಡ್‌ನ ಜೆಮ್‌ಶೆಡ್‌ಪುರ ಪೂರ್ವದಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದಾರೆ. ಈ ಚುನಾವಣೆಯಲ್ಲಿ ಗೌರವ್ 18,000 ಕ್ಕೂ ಹೆಚ್ಚು ಮತಗಳನ್ನು ಗಳಿಸಿದ್ದು ಆಗಿನ ಮುಖ್ಯಮಂತ್ರಿ ರಘುಬರ್ ದಾಸ್ ಮತ್ತು ಸರಯು ರಾಯ್ ನಂತರ ಮೂರನೇ ಸ್ಥಾನದಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...