ಗೋವಾ ಬುಡಕಟ್ಟು ಜನರ ಭೂಮಿ ಕಬಳಿಕೆಗೆ ಸರ್ಕಾರದ ಸಾಥ್: ಸಿಜೆಪಿ ನಾಯಕ ದೀಪ್ಕೆ ಆಕ್ರೋಶ

Date:

ಗೋವಾ ರಾಜ್ಯದಲ್ಲಿ ಬುಡಕಟ್ಟು ಸಮುದಾಯಗಳಿಗೆ ಸೇರಿದ ಭೂಮಿಯನ್ನು ಸರ್ಕಾರವೇ ಕಬಳಿಸಿ, ಖಾಸಗಿ ಬಂಡವಾಳಶಾಹಿಗಳು ಮತ್ತು ಬಿಲ್ಡರ್‌ಗಳಿಗೆ ಹಸ್ತಾಂತರಿಸುತ್ತಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸ್ಥಾಪಕ ಹಾಗೂ ಸಂಚಾಲಕ ಅಭಿಜೀತ್ ದೀಪ್ಕೆ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಗೋವಾದಲ್ಲಿ ‘ಕ್ಯಾ ಬೋಲ್ತಿ ಪಬ್ಲಿಕ್’ (Kya Bolti Public) ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ದೀಪ್ಕೆ, ಗೋವಾ ಆಡಳಿತ ಮತ್ತು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬರಗಾಲ | ಕಾಡಿನಿಂದ ನಾಡಿನತ್ತ ವನ್ಯಜೀವಿಗಳು: ಮನುಷ್ಯರ ಜೀವಕ್ಕೆ...

ಹಳೇ ಮೈಸೂರು ಕಾಡು ಪ್ರಾಣಿಗಳ ಆವಾಸಸ್ಥಾನ. ಆದರೆ, ಇಂದು ಆ ಕಾಡಿನಂಚಿನಲ್ಲಿ ಬದುಕುತ್ತಿರುವ ಮನುಷ್ಯರಿಗೂ ಕಾಡಿನೊಳಗಿನ ವನ್ಯಜೀವಿಗಳಿಗೂ ನಡುವಿನ ಅಂತರ ಕಡಿಮೆಯಾಗುತ್ತಿದೆ. ಆಹಾರ ಮತ್ತು ನೀರು ಅರಸಿ ಕಾಡಿನಿಂದ ನಾಡಿನತ್ತ ಬರುತ್ತಿರುವ ಆನೆ,...

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಗೋವಾದ ಬಿಚೋಲಿಮ್ ತಾಲ್ಲೂಕಿನ ಕರಾಪುರ್-ಸರ್ವಾನ್ ಗ್ರಾಮದ ಗ್ರಾಮಸ್ಥರು ಮತ್ತು ಬುಡಕಟ್ಟು ಜನರು ತಮ್ಮ ಭೂಮಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬೃಹತ್ ಟೌನ್‌ಶಿಪ್ ಯೋಜನೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳೀಯರ ಮತ್ತು ಬುಡಕಟ್ಟು ಸಮುದಾಯದ ಭೂಮಿಯನ್ನು ಕಿತ್ತುಕೊಂಡು, ಸರ್ಕಾರ ತನ್ನ ಆಪ್ತ ಬಿಲ್ಡರ್‌ಗಳು ಹಾಗೂ ಬಂಡವಾಳಶಾಹಿಗಳಿಗೆ ನೀಡುತ್ತಿದೆ ಎಂದು ಆರೋಪಿಸಲಾಗಿದೆ. “ತಮ್ಮದೇ ಭೂಮಿಗೆ ಭೇಟಿ ನೀಡುವ ಹಿರಿಯ ಗ್ರಾಮಸ್ಥರನ್ನು ಯೋಜನೆಯ ಭದ್ರತಾ ಸಿಬ್ಬಂದಿ ‘ಕಳ್ಳರು’ ಎಂದು ಕರೆಯುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ದೀಪ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಿಇಸಿ ಗ್ಯಾನೇಶ್ ದೇಶದ್ರೋಹಿ; ಕೂಡಲೇ ರಾಜೀನಾಮೆ ನೀಡಲಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕರಾಪುರ್-ಸರ್ವಾನ್ ಭೂಮಿ ಉಳಿವಿಗಾಗಿ ಮತ್ತು ಯೋಜನೆಯ ವಿರುದ್ಧ ಕಾನೂನು ಹೋರಾಟ (ಅರ್ಜಿದಾರ) ನಡೆಸುತ್ತಿದ್ದ ಗ್ರಾಮದ ಯುವಕ ಗೌರೀಶ್ ಗಾಡಿ ಅವರ ಮೇಲೆ ಭೂಮಾಫಿಯಾ ಗುಂಡಾಗಳು ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದಾಗಿ ಅವರ ತಲೆಗೆ ಎಂಟು ಹೊಲಿಗೆಗಳನ್ನು ಹಾಕಲಾಗಿದ್ದು, ಕೈ ಮುರಿದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನರ ಪರವಾಗಿ ಹೋರಾಡುತ್ತಿರುವವರಿಗೆ ರಕ್ಷಣೆ ನೀಡುವ ಬದಲು ಸರ್ಕಾರ ಭೂಮಾಫಿಯಾಗೆ ಬೆಂಬಲ ನೀಡುತ್ತಿದೆ. ಅವರಿಗೆ ತಕ್ಷಣವೇ ಭದ್ರತೆ ಒದಗಿಸಬೇಕು ಎಂದು ದೀಪ್ಕೆ ಒತ್ತಾಯಿಸಿದ್ದಾರೆ.

ಹಾಗೆಯೇ, “ಗೋವಾದ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆಯ (TCP Act) ‘ಸೆಕ್ಷನ್ 39A’ ಅನ್ನು ತಕ್ಷಣವೇ ರದ್ದುಗೊಳಿಸಬೇಕು. ಈ ಕಾಯ್ದೆಯು ಭೂ ಕಬಳಿಕೆಗೆ ದಾರಿ ಮಾಡಿಕೊಡುತ್ತಿದ್ದು, ಇದು ಜಾರಿಯಲ್ಲಿದ್ದರೆ ಭವಿಷ್ಯದಲ್ಲಿ ಗೋವಾದ ಮೂಲ ನಿವಾಸಿಗಳಿಗೆ ತಮ್ಮದೇ ರಾಜ್ಯದಲ್ಲಿ ಸ್ವಂತ ಮನೆ ಕಟ್ಟಿಕೊಳ್ಳಲು ಭೂಮಿಯೇ ಉಳಿಯುವುದಿಲ್ಲ. ಗೋವಾದ ಸಂಸ್ಕೃತಿ, ಅಸ್ಮಿತೆ ನಾಶವಾಗಲಿದೆ” ಎಂದು ದೀಪ್ಕೆ ಎಚ್ಚರಿಸಿದ್ದಾರೆ.

ಇನ್ನು ಸಿಜೆಪಿ ಪ್ರತಿಭಟನೆಗಳಲ್ಲಿ ಹೊರಗಿನವರು ಭಾಗವಹಿಸುತ್ತಿದ್ದಾರೆ ಎಂಬ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ಹೇಳಿಕೆಗೆ ತಿರುಗೇಟು ನೀಡಿರುವ ದೀಪ್ಕೆ, “ನಮ್ಮ ಪ್ರತಿಭಟನೆಗೆ ಬರುವವರನ್ನು ನೀವು ಹೊರಗಿನವರು ಎನ್ನುತ್ತೀರಿ. ಆದರೆ ಗೋವಾದ ಅರಣ್ಯ ಮತ್ತು ಕರಾಪುರ್‌ನ ಭೂಮಿಯನ್ನು ನೀವು ಹೊರಗಿನ ಬಿಲ್ಡರ್ ಸ್ನೇಹಿತರಿಗೆ ಮಾರಾಟ ಮಾಡುತ್ತಿರುವುದು ಸರಿಯೇ” ಎಂದು ಪ್ರಶ್ನಿಸಿದ್ದಾರೆ.

ಈ ಸಂದರ್ಭದಲ್ಲಿ ಸಿಜೆಪಿ ಸಹ-ಸಂಯೋಜಕ ಅಶುತೋಷ್ ರಾಂಕಾ ಮತ್ತು ವಕ್ತಾರ ಸೌರಭ್ ದಾಸ್ ಕೂಡ ಉಪಸ್ಥಿತರಿದ್ದು, ಗೋವಾದ ‘ಜಲ, ಜಂಗಲ್ ಮತ್ತು ಜಮೀನು’ (ನೀರು, ಅರಣ್ಯ ಮತ್ತು ಭೂಮಿ) ರಕ್ಷಣೆಗಾಗಿ ನಡೆಯುವ ಹೋರಾಟಕ್ಕೆ ಸಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಘೋಷಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಸ್ಲೆರಿ ನೀರಿನ ಮಾದರಿಯಲ್ಲಿ ಸಂಭಾವ್ಯ ಕ್ಯಾನ್ಸರ್ ಕಾರಕ ಅಂಶ: ಕಾನೂನು ಸಮರಕ್ಕೆ ಸಜ್ಜಾದ ಎಫ್‌ಎಸ್‌ಎಸ್‌ಎಐ

ಪ್ಯಾಕೇಜ್ಡ್ ಕುಡಿಯುವ ನೀರಿನ ಮಾದರಿಯು ಪ್ರಯೋಗಾಲಯದ ಪರೀಕ್ಷೆಯಲ್ಲಿ ಅಸುರಕ್ಷಿತವೆಂದು ದೃಢಪಟ್ಟ ಹಿನ್ನೆಲೆಯಲ್ಲಿ,...

ಕಲಬುರಗಿ | ಸಾಹಿತ್ಯದ ಸ್ಥಿರತೆಗೆ ಸಮಕಾಲೀನತೆ, ತಾತ್ವಿಕತೆ ಮುಖ್ಯ: ಸಿದ್ಧಲಿಂಗ ದಬ್ಬಾ

ಸಾಹಿತ್ಯದ ಸ್ಥಿರತೆಯು ಸಮಕಾಲೀನತೆ, ನೈತಿಕತೆ ಹಾಗೂ ತಾತ್ವಿಕತೆಯ ನೆಲೆಗಟ್ಟಿನ ಮೇಲೆ ನಿಂತಿರುತ್ತದೆ....

ಸಂಭ್ರಮದ ತೆರೆ ಕಂಡ ಬೀದರ್ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: 12 ನಿರ್ಣಯ ಅಂಗೀಕಾರ

ಬೀದರ್‌ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದಿಂದ ನ.21, 22ರಂದು...

ಆನೆ ಓಡಿಸುವ ಕಾರ್ಯಾಚರಣೆಗೆ ತೀವ್ರ ವಿರೋಧ: ರಾಜೀನಾಮೆಗೆ ಮುಂದಾದ ಚಿಕ್ಕಮಗಳೂರಿನ ಮೂವರು ಶಾಸಕರು

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ...