ವರಸೆ ಬದಲಿಸಿದ ಸರ್ಕಾರ; FIR ಹಿಂಪಡೆಯುವ ಭರವಸೆ ಎಲ್ಲರಿಗೂ ಅಲ್ಲ ಎಂದ ಕೇಂದ್ರ

Date:

‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಪ್ರತಿಭಟನೆ ಮತ್ತೆ ಆರಂಭಿಸುವ ಎಚ್ಚರಿಕೆ ನೀಡಿರುವ ಬೆನ್ನಲ್ಲೇ, ಹಿಂಸಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಯಾವುದೇ ರಿಯಾಯಿತಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಪ್ರತಿಭಟನೆ ಹಿಂಪಡೆಯುವ ವೇಳೆ ನೀಡಿದ್ದ ಭರವಸೆ ಶಾಂತಿಯುತ ಪ್ರತಿಭಟನಾಕಾರರಿಗೆ ಮಾತ್ರ ಅನ್ವಯಿಸುತ್ತದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

- Advertisement -

ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆಯನ್ನು ಹಿಂಪಡೆಯುವ ಮುನ್ನ ಸಿಜೆಪಿ ಇಟ್ಟಿದ್ದ ಪ್ರಮುಖ ಬೇಡಿಕೆಗಳಲ್ಲಿ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲ ಎಫ್‌ಐಆರ್‌ಗಳನ್ನು ಹಿಂಪಡೆಯಬೇಕು ಎಂಬುದೂ ಸೇರಿತ್ತು. ಆದರೆ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ವಿದ್ಯಾರ್ಥಿಗಳ ವಿರುದ್ಧ ಇನ್ನೂ ಪ್ರಕರಣಗಳು ದಾಖಲಾಗುತ್ತಿವೆ ಹಾಗೂ ಬಂಧನಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಸಿಜೆಪಿ, ಸರ್ಕಾರ ಜುಲೈ 25ರ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದೆ. ಜೊತೆಗೆ, ಸರ್ಕಾರ ಸಹಿ ಮಾಡಿರುವ ಲಿಖಿತ ಒಪ್ಪಂದದ ಪ್ರತಿಯನ್ನೂ ಇನ್ನೂ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಆದರೆ, ಸರ್ಕಾರದ ಮೂಲಗಳು ಈ ಆರೋಪವನ್ನು ತಳ್ಳಿಹಾಕಿವೆ. ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಸುದ್ದಿಗೋಷ್ಠಿಯಲ್ಲಿ ನೀಡಿದ್ದ ಭರವಸೆ ಶಾಂತಿಯುತ ಪ್ರತಿಭಟನಾಕಾರರು ಮತ್ತು ಸಂಘಟಕರಿಗೆ ಮಾತ್ರ ಅನ್ವಯಿಸುತ್ತದೆ. ಹಿಂಸಾಚಾರ ಎಸಗಿದವರು ಅಥವಾ ಅಪರಾಧ ಹಿನ್ನೆಲೆಯುಳ್ಳವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರದ ಹಿರಿಯ ಸಚಿವರೊಬ್ಬರು ತಿಳಿಸಿದ್ದಾರೆ.

ಇದೇ ರೀತಿಯ ಭರವಸೆಯನ್ನು ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಉಪವಾಸ ಅಂತ್ಯಗೊಳಿಸುವ ಮುನ್ನವೂ ಸರ್ಕಾರ ನೀಡಿತ್ತು. ಆಗಲೂ ಜಂತರ್‌ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸದಿರುವುದಾಗಿ ಮಾತ್ರ ಸರ್ಕಾರ ಲಿಖಿತ ಭರವಸೆ ನೀಡಿತ್ತು ಎಂದು ಸಚಿವರು ನೆನಪಿಸಿದ್ದಾರೆ.

ಸಿಜೆಪಿಯೊಂದಿಗೆ ಸರ್ಕಾರ ಮಾಡಿಕೊಂಡಿರುವ ಒಪ್ಪಂದಕ್ಕೆ ಸಂಬಂಧಿಸಿದಂತೆ ಯಾವುದೇ ಸಹಿ ಮಾಡಲಾದ ಅಧಿಕೃತ ದಾಖಲೆ ಇಲ್ಲ ಎಂದು ಮತ್ತೊಬ್ಬ ಹಿರಿಯ ಸಚಿವರು ತಿಳಿಸಿದ್ದಾರೆ. ಸದ್ಯಕ್ಕೆ ಸರ್ಕಾರದ ನಿಲುವು ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರ ಸುದ್ದಿಗೋಷ್ಠಿಯ ಹೇಳಿಕೆಯಲ್ಲಿ ಮಾತ್ರ ದಾಖಲಾಗಿದೆ. ಸಿಜೆಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಸರ್ಕಾರದ ಸಹಿಯೊಂದಿಗೆ ಮಂಗಳವಾರದೊಳಗೆ ಪ್ರತಿಯನ್ನು ಹಿಂತಿರುಗಿಸುವುದಾಗಿ ಹೇಳಲಾಗಿದ್ದರೂ, ಅದು ಇನ್ನೂ ನೀಡಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಕಳೆದ ಶನಿವಾರ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ನಡ್ಡಾ, “ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್‌ಗಳನ್ನು ಹಿಂಪಡೆಯಲಾಗುವುದು. ಮುಂದೆಯೂ ಈ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರು ಮತ್ತು ಸಂಘಟಕರ ವಿರುದ್ಧ ಯಾವುದೇ ಪ್ರಕರಣ ದಾಖಲಿಸುವುದಿಲ್ಲ” ಎಂದು ಹೇಳಿದ್ದರು. ಆದರೆ, ಸೋನಂ ವಾಂಗ್ಚುಕ್‌ಗೆ ನೀಡಿದ್ದ ಲಿಖಿತ ಭರವಸೆಯಲ್ಲಿ “ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸದಿರುವ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿದೆ” ಎಂದು ಮಾತ್ರ ಉಲ್ಲೇಖಿಸಲಾಗಿತ್ತು.

image 2026 07 28T190321.202

ಈ ನಡುವೆ, ಬಿಹಾರ ಮತ್ತು ಅಸ್ಸಾಂನ ಬಿಜೆಪಿ ಸರ್ಕಾರಗಳು ಜುಲೈ 26ರ ಸಂಜೆ 6 ಗಂಟೆಯೊಳಗೆ ಬಂಧಿತರಾದ ಪ್ರತಿಭಟನಾಕಾರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವುದಾಗಿ ಹಾಗೂ ಅವರನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿವೆ. ಆದರೆ, ಹಿಂಸಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿವೆ. ಮತ್ತೊಂದೆಡೆ, ಪಶ್ಚಿಮ ಬಂಗಾಳದಲ್ಲಿ ಜುಲೈ 24ರ ಹಿಂಸಾಚಾರಕ್ಕೆ ಸಂಬಂಧಿಸಿ ಏಳು ಎಫ್‌ಐಆರ್‌ಗಳು ದಾಖಲಾಗಿದ್ದು, 16 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಹಲವರು ವಿದ್ಯಾರ್ಥಿಗಳಲ್ಲ, ಸಮಾಜಘಾತುಕ ಅಂಶಗಳು ಎಂದು ಅಲ್ಲಿನ ಸರ್ಕಾರ ಹೇಳಿದೆ.

ಸರ್ಕಾರವು ನಿಜವಾದ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ಗಳನ್ನು ಹಿಂಪಡೆಯುವ ಬದ್ಧತೆಯನ್ನು ಮುಂದುವರಿಸಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ, ನೀಟ್-ಯುಜಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣದಿಂದ ಪರೀಕ್ಷೆ ರದ್ದಾದ ಬಳಿಕ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡುವ ವಿಷಯದಲ್ಲೂ ಸರ್ಕಾರ ಸಕಾರಾತ್ಮಕವಾಗಿದೆ. ಕೇವಲ ಪರಿಹಾರಧನ ನೀಡುವುದಲ್ಲದೆ, ಮೃತರ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡುವ ಸಾಧ್ಯತೆಯನ್ನೂ ಸರ್ಕಾರ ಪರಿಶೀಲಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಪ್ರತಿಭಟನಾಕಾರರ ಹಿನ್ನೆಲೆ ಕೆದಕುತ್ತಿರುವ ಪೊಲೀಸರು; ವಿದ್ಯಾರ್ಥಿಗಳನ್ನು’ಕ್ರಿಮಿನಲ್’ ಎಂದು ಬಿಂಬಿಸುತ್ತಿರುವ ಗೋದಿ ಮಾಧ್ಯಮಗಳು!

ಇನ್ನೊಂದೆಡೆ, ಸಿಜೆಪಿ ವಕ್ತಾರ ಅಶುತೋಷ್ ರಂಕಾ, ಜುಲೈ 25ರಂದು ಸರ್ಕಾರದೊಂದಿಗೆ ಮಾಡಿಕೊಂಡ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ನೂರಾರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ದಾಖಲಾಗಿರುವ ಎಲ್ಲ ಎಫ್‌ಐಆರ್‌ಗಳನ್ನು ತಕ್ಷಣ ಹಿಂಪಡೆಯಬೇಕು, ಬಂಧಿತರನ್ನು ಬಿಡುಗಡೆ ಮಾಡಬೇಕು, ದೆಹಲಿ ಪೊಲೀಸರು, ಕೇಂದ್ರ ತನಿಖಾ ಸಂಸ್ಥೆಗಳು ಹಾಗೂ ಬಿಜೆಪಿ ಆಡಳಿತದ ರಾಜ್ಯಗಳ ಪೊಲೀಸರು ಹೊಸ ಪ್ರಕರಣಗಳನ್ನು ದಾಖಲಿಸುವುದನ್ನು ನಿಲ್ಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಜೊತೆಗೆ, ಸರ್ಕಾರದ ಸಹಿಯಿರುವ ಒಪ್ಪಂದದ ಪ್ರತಿಯನ್ನು ಕೂಡಲೇ ನೀಡಬೇಕೆಂದು ಆಗ್ರಹಿಸಿದ್ದಾರೆ.

ಇದರೊಂದಿಗೆ, ಪ್ರತಿಭಟನಾಕಾರರಿಗೆ ಕಾನೂನು ನೆರವು ಒದಗಿಸಲು ಸಿಜೆಪಿ ದೇಶವ್ಯಾಪಿ ಕಾನೂನು ಸಹಾಯ ಘಟಕವನ್ನು ಆರಂಭಿಸಿದ್ದು, ‘ಸಾಕ್ಷಿ’ (SAAKSHI) ಹೆಸರಿನ ಆನ್‌ಲೈನ್ ಸಾಕ್ಷ್ಯ ಸಂಗ್ರಹ ವೇದಿಕೆಯನ್ನು ಕೂಡ ಆರಂಭಿಸಿದೆ. ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ಕಾನೂನು ನೆರವು ನೀಡಲು ₹1 ಕೋಟಿ ನಿಧಿಯನ್ನು ಸ್ಥಾಪಿಸಲಾಗಿದೆ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಘೋಷಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿ: ಡಿಸಿ ಶಿಲ್ಪಾ ಶರ್ಮಾ

ಭಾರತದ ಸಂವಿಧಾನವು ವಿಶಿಷ್ಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದು, ಇಡೀ ವಿಶ್ವಕ್ಕೆ ಮಾದರಿಯಾಗಿದೆ....

SIR | ನ್ಯಾಯಾಲಯಕ್ಕೂ ಕೇರ್‌ ಮಾಡದ ಚುನಾವಣಾ ಆಯೋಗ; 72 ಸಾವಿರ ಮೇಲ್ಮನವಿಗಳ ರಹಸ್ಯ ಬಯಲು!

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗವು ನಡೆಸಿದ ಮತದಾರರ ಪಟ್ಟಿಯ 'ವಿಶೇಷ ತೀವ್ರ...

ಆತ್ಮಹತ್ಯೆ ಮಾಡಿಕೊಂಡ ರೈತರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಬೇಡಿ: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

ರೈತರು ಆತ್ಮಹತ್ಯೆ ಮಾಡಿಕೊಂಡರೆ ಅವರ ಅಂತ್ಯಕ್ರಿಯೆಯಲ್ಲಿ ಯಾರೂ ಪಾಲ್ಗೊಳ್ಳಬಾರದು, ಮೃತದೇಹಗಳನ್ನು ಪ್ರಾಣಿಗಳು...

ಅಸ್ಸಾಂ: ಬಾಲ್ಯವಿವಾಹದ ವಿರುದ್ಧ ಕಾರ್ಯಾಚರಣೆ ತೀವ್ರ, 500ಕ್ಕೂ ಹೆಚ್ಚು ಮಂದಿ ಬಂಧನ

ಅಸ್ಸಾಂನಲ್ಲಿ ಬಾಲ್ಯವಿವಾಹದ ವಿರುದ್ಧ ರಾಜ್ಯ ಸರ್ಕಾರವು ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಪ್ರಸ್ತುತ...