ಡೀಸೆಲ್, ಎಟಿಎಫ್ ರಫ್ತಿನ ಮೇಲಿನ ತೆರಿಗೆ ಹೆಚ್ಚಿಸಿದ ಸರ್ಕಾರ!

Date:

ಡೀಸೆಲ್ ಮತ್ತು ವಿಮಾನ ಇಂಧನ (ATF) ರಫ್ತಿನ ಮೇಲಿನ ‘ವಿಂಡ್‌ಫಾಲ್ ಗೇನ್ಸ್ ಟ್ಯಾಕ್ಸ್’ (ಅನಿರೀಕ್ಷಿತ ಲಾಭದ ಮೇಲಿನ ತೆರಿಗೆ) ಅನ್ನು ಕೇಂದ್ರ ಸರ್ಕಾರವು ಹೆಚ್ಚಳ ಮಾಡಿದ್ದು, ಪೆಟ್ರೋಲ್ ರಫ್ತಿನ ಮೇಲಿನ ತೆರಿಗೆಯನ್ನು ಶೂನ್ಯ ಮಟ್ಟದಲ್ಲೇ ಮುಂದುವರಿಸಿದೆ. ನವೆಂಬರ್ 16ರಿಂದ ಆರಂಭವಾಗುವ ಹದಿನೈದು ದಿನಗಳ ಅವಧಿಗೆ ಅನ್ವಯವಾಗುವಂತೆ ಹಣಕಾಸು ಸಚಿವಾಲಯವು ಸೋಮವಾರ ತಡರಾತ್ರಿ ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬಂದಿವೆ.

- Advertisement -

ನೂತನ ಆದೇಶದ ಪ್ರಕಾರ, ಡೀಸೆಲ್ ರಫ್ತಿನ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (SAED) ಹಾಗೂ ರಸ್ತೆ ಮತ್ತು ಮೂಲಸೌಕರ್ಯ ಸೆಸ್ ಸೇರಿದಂತೆ ಒಟ್ಟು ತೆರಿಗೆಯನ್ನು ಪ್ರತಿ ಲೀಟರ್‌ಗೆ ₹ 11.50 ರಿಂದ ₹ 14 ಕ್ಕೆ ಏರಿಸಲಾಗಿದೆ. ಅದೇ ರೀತಿ, ವಿಮಾನ ಇಂಧನ (ATF) ರಫ್ತಿನ ಮೇಲಿನ ಸುಂಕವನ್ನು ಪ್ರತಿ ಲೀಟರ್‌ಗೆ ₹ 11 ರಿಂದ ₹ 12.50 ಕ್ಕೆ ಹೆಚ್ಚಿಸಲಾಗಿದೆ. ಈ ಹಿಂದೆ ಅಕ್ಟೋಬರ್ 31ರಂದು ನಡೆದ ಪರಿಷ್ಕರಣೆಯಲ್ಲಿ ಪೆಟ್ರೋಲ್ ಮೇಲಿನ ₹ 2.50 ಸುಂಕವನ್ನು ರದ್ದುಗೊಳಿಸಲಾಗಿತ್ತು. ಈ ಬಾರಿಯೂ ಪೆಟ್ರೋಲ್ ರಫ್ತಿನ ಮೇಲಿನ ತೆರಿಗೆಯನ್ನು ಶೂನ್ಯದಲ್ಲೇ ಉಳಿಸಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಈ ತೆರಿಗೆ ಪರಿಷ್ಕರಣೆಯು ಕೇವಲ ವಿದೇಶಗಳಿಗೆ ರಫ್ತು ಮಾಡುವ ಇಂಧನಕ್ಕೆ ಮಾತ್ರ ಅನ್ವಯವಾಗಲಿದ್ದು, ದೇಶೀಯ ಬಳಕೆಗಾಗಿ ಪೂರೈಸಲಾಗುವ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಸ್ತಿತ್ವದಲ್ಲಿರುವ ಅಬಕಾರಿ ಸುಂಕದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ಹೀಗಾಗಿ ದೇಶೀಯ ಮಾರುಕಟ್ಟೆಯ ಗ್ರಾಹಕರ ಮೇಲೆ ಇದರ ಯಾವುದೇ ಹೊರೆ ಬೀಳುವುದಿಲ್ಲ.

ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಪರಿಸ್ಥಿತಿ ಮತ್ತು ಅದರಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರವು ಕಳೆದ ಮಾರ್ಚ್ 27ರಿಂದ ಡೀಸೆಲ್ ಮತ್ತು ಎಟಿಎಫ್ ರಫ್ತಿನ ಮೇಲೆ ಹಾಗೂ ಮೇ 16ರಿಂದ ಪೆಟ್ರೋಲ್ ರಫ್ತಿನ ಮೇಲೆ ಈ ವಿಶೇಷ ಸುಂಕವನ್ನು ವಿಧಿಸಲು ಆರಂಭಿಸಿತ್ತು. ಜಾಗತಿಕ ಮಾರುಕಟ್ಟೆಯಲ್ಲಿನ ಬೆಲೆ ವ್ಯತ್ಯಾಸದ ಲಾಭ ಪಡೆದು ತೈಲ ಕಂಪನಿಗಳು ಹೆಚ್ಚಿನ ಪ್ರಮಾಣದಲ್ಲಿ ಇಂಧನ ರಫ್ತು ಮಾಡುವುದನ್ನು ತಡೆಯುವುದು ಮತ್ತು ದೇಶೀಯ ಮಾರುಕಟ್ಟೆಯಲ್ಲಿ ಇಂಧನದ ಕೊರತೆಯಾಗದಂತೆ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಈ ತೆರಿಗೆಯ ಮುಖ್ಯ ಉದ್ದೇಶವಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಸೆಂಟ್ರಲ್ ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಿ ವಿತರಿಸುವ ಜವಾಬ್ದಾರಿಯನ್ನು ಕೇಂದ್ರೀಕೃತ ಅಡುಗೆ...

ಬೀದರ್‌ | ಸಂವಿಧಾನ ರಕ್ಷಣೆ, ಪ್ರಜಾಪ್ರಭುತ್ವ ಉಳಿವಿಗಾಗಿ ನ.26ರಂದು ಜನಾಂದೋಲನ ಸಮಾವೇಶ

ಸಂವಿಧಾನ ರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಸಂವಿಧಾನ ಅಂಗೀಕಾರ ದಿನವಾದ ನವೆಂಬರ್...

ವಿಜಯಪುರ |ಪಂಚಮಸಾಲಿ ಮೀಸಲಾತಿ ಹೋರಾಟ: ಡಿ.10ರಂದು

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧದ ಎದುರು...

ಬೆಳಗಾವಿ |ಕ್ಲಸ್ಟರ್ ಕಿಚನ್‌ಗೆ ಅಡುಗೆ ಸಿಬ್ಬಂದಿ ವಿರೋಧ!

ಸರ್ಕಾರಿ ಶಾಲೆಯ ಮಕ್ಕಳಿಗೆ ಬಿಸಿಬಿಸಿಯಾದ, ತಾಜಾ ಹಾಗೂ ಪೌಷ್ಟಿಕ ಆಹಾರ ಒದಗಿಸುವ...