ದೀಪ್ಕೆ, ಇತರೆ ಸಿಜೆಪಿ ನಾಯಕರ ಬಂಧನಕ್ಕೆ ಸರ್ಕಾರ ಸಂಚು: ಜೈಲಿಗೆ ಹೋಗಲು ಹೆದರಲ್ಲ ಎಂದ ಸೌರವ್ ದಾಸ್

Date:

ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೂ ಮುನ್ನ, ತಮ್ಮನ್ನು ಹಾಗೂ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಇತರೆ ಪ್ರಮುಖ ನಾಯಕರನ್ನು ಬಂಧಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ ಎಂದು ಸಿಜೆಪಿ ಸಹ-ಸಂಚಾಲಕ ಸೌರವ್ ದಾಸ್ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಸಾಮಾಜಿಕ ಜಾಲತಾಣ ‘X’ ನಲ್ಲಿ ಪೋಸ್ಟ್ ಮಾಡಿರುವ ಸೌರವ್ ದಾಸ್, “ನಾನು, ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರಮುಖ ನಾಯಕರಾದ ಅಶುತೋಷ್ ರಾಂಕಾ ಮತ್ತು ರತ್ನಾ ಸಿಂಗ್ ಸೇರಿದಂತೆ ಹಲವರನ್ನು ಅಕ್ಟೋಬರ್ 10 ರ ಪ್ರತಿಭಟನೆಗೂ ಮುನ್ನವೇ ಪೊಲೀಸರು ಬಂಧಿಸುವ ಸಾಧ್ಯತೆಯಿದೆ ಎಂಬ ಮಾಹಿತಿ ಸಿಕ್ಕಿದೆ” ಎಂದು ತಿಳಿಸಿದ್ದಾರೆ. ಮುಂದುವರಿದು, “ನಾವು ಜೈಲಿಗೆ ಹೋಗಲು ಸಿದ್ಧರಿದ್ದೇವೆ. ಯಾವುದೇ ಭೀತಿ ನಮಗಿಲ್ಲ, ಕಾನೂನು ಹೋರಾಟ ಮುಂದುವರಿಯಲಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಇದನ್ನೂ ಓದಿ: MPSC ಪೇಪರ್ ಲೀಕ್: ಪುಣೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಜೆಪಿ ಬೆಂಬಲ; ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

ಸೌರವ್ ದಾಸ್ ಅವರ ಪೋಸ್ಟ್ ಬೆನ್ನಲ್ಲೇ ಸ್ಪಂದಿಸಿರುವ ಅಭಿಜೀತ್ ದೀಪ್ಕೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ನೇರ ಸವಾಲು ಎಸೆದಿದ್ದಾರೆ. “ಅಮಿತ್ ಶಾ ಅವರೇ, ನೀವು ಎಷ್ಟು ಜನರನ್ನು ಬಂಧಿಸುತ್ತೀರಿ? ಅಕ್ಟೋಬರ್ 10 ರಂದು ಇಡೀ ದೇಶವೇ ರಸ್ತೆಗೆ ಇಳಿಯಲಿದೆ” ಎಂದು ಪೋಸ್ಟ್ ಮಾಡಿದ್ದಾರೆ.

ಇನ್ನು ಸಿಜೆಪಿ ಮತ್ತೊಬ್ಬ ಪ್ರಮುಖ ಕಾರ್ಯಕರ್ತ ಅಶುತೋಷ್ ರಾಂಕಾ ಮಾತನಾಡಿ, “ಸರ್ಕಾರವು ನಮ್ಮ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಥವಾ ಇತರ ಕಠಿಣ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲು ಯೋಜಿಸುತ್ತಿದೆ. ಈ ಸರ್ಕಾರವು ಜನಾಂದೋಲನಕ್ಕೆ ಹೆದರಿದೆ. ಗಾಂಧೀಜಿಯವರು ಹೇಳಿದಂತೆ ‘ಹಿಂಸೆ ಮತ್ತು ದ್ವೇಷವು ಭಯದಿಂದ ಹುಟ್ಟುತ್ತದೆ’. ಸರ್ಕಾರ ಭಯಗೊಂಡಿರುವುದರಿಂದಲೇ ಇಂತಹ ಬೆದರಿಕೆ ಕ್ರಮಗಳಿಗೆ ಮುಂದಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

ಮತದಾರರ ಪಟ್ಟಿಯಲ್ಲಿ ಅಕ್ರಮಗಳು (ಎಸ್‌ಐಆರ್ ಪ್ರಕ್ರಿಯೆ) ನಡೆದಿವೆ. ಏಕಪಕ್ಷೀಯ ನಿರ್ಧಾರವನ್ನು ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿಯು ದೇಶವ್ಯಾಪಿ ಆಂದೋಲನಕ್ಕೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತನ ಬಳಕೆ ಮಾಡಿರುವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಎಫ್‌ಐಆರ್ ದಾಖಲು

ತಮಿಳುನಾಡಿನ ಧರಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅಪ್ರಾಪ್ತ ಬಾಲಕನನ್ನು...

ಮದನಪಲ್ಲಿ ಸಾರ್ವಜನಿಕ ಸಭೆಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಮುಜುಗರ; ಭಾಷಣದ ನಡುವೆ ಗದ್ದಲ, ನಾಯ್ಡು ಮಧ್ಯಪ್ರವೇಶ

ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಭಾಷಣದ...

ಆಕ್ರೋಶಕ್ಕೆ ಹೆದರಿದ ಆಯೋಗ: ‘ಬಿಟ್ಟುಹೋದ’ ಮತದಾರರ ಸೇರ್ಪಡೆಗೆ ಕ್ರಮ

ದೇಶಾದ್ಯಂತ ನಡೆಸಲಾದ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ...