ಕೋವಿಡ್‌ನಿಂದ ಮೃತಪಟ್ಟ ವೈದ್ಯರ ಕುಟುಂಬಕ್ಕೆ ಪರಿಹಾರ; ಮಾಹಿತಿ ನೀಡಲು ಕೇಂದ್ರ ನಕಾರ

Date:

ಕೋವಿಡ್ ಸಾಂಕ್ರಾಮಿಕದ ಮೊದಲ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ಸಾವನ್ನಪ್ಪಿದ್ದ ವೈದ್ಯರ ಕುಟುಂಬಕ್ಕೆ ಪರಿಹಾರ ನೀಡಿರುವ ಬಗ್ಗೆ ಮಾಹಿತಿಯನ್ನು ನೀಡಲು ಸರ್ಕಾರ ನಿರಾಕರಿಸಿದೆ. ಈ ಬಗ್ಗೆ ಮಾಹಿತಿ ಕೋರಿ ಆರ್‌ಟಿಐ ಅರ್ಜಿ ಸಲ್ಲಿಸಲಾಗಿತ್ತು. ಆರ್‌ಟಿಐ ಕಾರ್ಯಕರ್ತ ಡಾ. ಕೆವಿ ಬಾಬು ಅರ್ಜಿ ಸಲ್ಲಿಸಿದ್ದರು.

- Advertisement -

ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ 2,244 ವೈದ್ಯರ ಪೈಕಿ 475 ವೈದ್ಯರ ಕುಟುಂಬಕ್ಕೆ ಶೇಕಡ 29 ವೈದ್ಯರ ಕುಟುಂಬಕ್ಕೆ ಪರಿಹಾರವನ್ನು ನೀಡಲಾಗಿದೆ ಎಂದು ಸರ್ಕಾರ ತಿಳಿಸಿತ್ತು. ಆದರೆ ಈ ವರ್ಷ ಕೇಂದ್ರ ಆರೋಗ್ಯ ಸಚಿವಾಲಯ ಆರ್‌ಟಿಐ ಅರ್ಜಿಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ. “ದತ್ತಾಂಶವು ವಸ್ತು ರೂಪದಲ್ಲಿ ಲಭ್ಯವಿಲ್ಲ” ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಬಿಜೆಪಿ ಸರ್ಕಾರದ ಕೋವಿಡ್ ಹಗರಣ | ಮೊದಲ ಎಫ್‌ಐಆರ್ ದಾಖಲು

ಇನ್ನು ಕೋವಿಡ್‌ನಿಂದಾಗಿ ಮೃತಪಟ್ಟ ವೈದ್ಯರ ನಿಗದಿತ ಸಂಖ್ಯೆಯನ್ನು ಸರ್ಕಾರ ಬಹಿರಂಗಪಡಿಸಿಲ್ಲ. ಆದರೆ ಭಾರತೀಯ ವೈದ್ಯರ ಅಸೋಸಿಯೇಷನ್ (ಐಎಂಎ) ಪ್ರಕಾರ ಮೃತ ವೈದ್ಯರ ಸಂಖ್ಯೆ 1,596ಕ್ಕೂ ಅಧಿಕವಿದೆ.

ಸುಮಾರು 4 ಲಕ್ಷಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಐಎಂಎ ಕೋವಿಡ್‌ನ ಎರಡನೇ ಅಲೆಯ ಸಂದರ್ಭದಲ್ಲಿ ಕೋವಿಡ್‌ನಿಂದ ಮೃತಪಟ್ಟ ವೈದ್ಯರ ಚಿತ್ರದ ಸಹಿತ ಸಂಪೂರ್ಣ ಮಾಹಿತಿಯನ್ನು ಆರೋಗ್ಯ ಸಚಿವಾಲಯಕ್ಕೆ ನೀಡಿದ್ದಾರೆ.

ಇನ್ನು ಕೋವಿಡ್‌ಗೆ ಬಲಿಯಾದ ವೈದ್ಯರ ಕುಟುಂಬಕ್ಕೆ ಪರಿಹಾರ ನೀಡಿದ ರಾಜ್ಯವಾರು ಪಟ್ಟಿಯ ಅರ್ಜಿಗೂ ಸರ್ಕಾರ ಇದೇ ಪ್ರತಿಕ್ರಿಯೆಯನ್ನು ನೀಡಿದೆ. “ದತ್ತಾಂಶವು ವಸ್ತು ರೂಪದಲ್ಲಿ ಲಭ್ಯವಿಲ್ಲ. ಹಾಗಾಗಿ ಆರ್‌ಟಿಐ ಕಾಯ್ದೆಯ ಸೆಕ್ಷನ್ 7(9) ಅಡಿಯಲ್ಲಿ ಮಾಹಿತಿ ನೀಡಲಾಗದು” ಎಂದು ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...