ಸರ್ಕಾರದ ನಿರ್ಧಾರ ಸರಿ: ವಾಂಗ್‌ಚುಕ್’ರನ್ನು ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲು ಹೈಕೋರ್ಟ್ ನಕಾರ

Date:

ಉಪವಾಸ ಸತ್ಯಾಗ್ರಹ ನಿರತ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಆಸ್ಪತ್ರೆಗೆ ಸ್ಥಳಾಂತರಿಸಿದ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ. ವಾಂಗ್‌ಚುಕ್ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ಕೋರಿ ಅವರ ಪತ್ನಿ ಡಾ. ಗೀತಾಂಜಲಿ ಆಂಗ್ಮೋ ಸಲ್ಲಿಸಿದ್ದ ತುರ್ತು ಅರ್ಜಿಯ ಮೇಲೆ ಯಾವುದೇ ಮಧ್ಯಂತರ ಆದೇಶ ನೀಡಲು ನ್ಯಾಯಾಲಯ ನಿರಾಕರಿಸಿದೆ.

- Advertisement -

ಭಾನುವಾರ ನಡೆದ ವಿಶೇಷ ಕಲಾಪದಲ್ಲಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಿನಿ ಪುಷ್ಕರ್ಣ ಅವರ ಪೀಠವು, ಪ್ರತಿಭಟನಾ ಸ್ಥಳದಿಂದ ವಾಂಗ್‌ಚುಕ್ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ ಸರ್ಕಾರದ ನಿರ್ಧಾರವನ್ನು “ಏಕಪಕ್ಷೀಯ ಕ್ರಮ” ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. “ಸೋನಮ್ ವಾಂಗ್‌ಚುಕ್ ಅವರು ಸ್ವಯಂಪ್ರೇರಿತವಾಗಿ ಯಾವುದೇ ಆಸ್ಪತ್ರೆಗೆ ದಾಖಲಾಗದ ಹಿನ್ನೆಲೆಯಲ್ಲಿ, ಅವರ ಆರೋಗ್ಯದ ದೃಷ್ಟಿಯಿಂದ ಇಂತಹ ಕ್ರಮ ಕೈಗೊಳ್ಳುವ ಹಕ್ಕು ಸರ್ಕಾರಕ್ಕೆ ಇದೆ” ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಸಫ್ದರ್‌ಜಂಗ್ ಆಸ್ಪತ್ರೆಯ ವೈದ್ಯರು ವಾಂಗ್‌ಚುಕ್ ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ವಾಂಗ್‌ಚುಕ್ ಅವರ ಒಪ್ಪಿಗೆಯ ಮೇರೆಗೆ ಸಕ್ಕರೆ ರಹಿತ ORS ಮತ್ತು ಪೊಟ್ಯಾಸಿಯಮ್ ಕ್ಲೋರೈಡ್ ಮಾತ್ರೆಗಳನ್ನು ಮಾತ್ರ ನೀಡಲಾಗುತ್ತಿದೆ. ಹೀಗಾಗಿ, ಅವರ ಮೇಲೆ ಯಾವುದೇ ರೀತಿಯ ಬಲಪ್ರಯೋಗ ಮಾಡಲಾಗಿದೆ ಅಥವಾ ಅವರ ದೈಹಿಕ ಸ್ವಾಯತ್ತತೆಯನ್ನು ಉಲ್ಲಂಘಿಸಲಾಗಿದೆ ಎಂದು ಹೇಳಲಾಗದು ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.

ವಾಂಗ್‌ಚುಕ್ ಅವರ ಪತ್ನಿ ಹಾಗೂ ಸಹೋದರನಿಗೆ ಆಸ್ಪತ್ರೆಯಲ್ಲಿ ಅವರನ್ನು ಭೇಟಿಯಾಗಲು ಅವಕಾಶ ಕಲ್ಪಿಸಲಾಗಿದೆ ಮತ್ತು ಅವರಿಗೆ ಪ್ರತ್ಯೇಕ ಕೊಠಡಿಯನ್ನು ಒದಗಿಸಲಾಗಿದೆ ಎಂಬ ಕೇಂದ್ರ ಸರ್ಕಾರದ ಪರ ವಕೀಲರ ವಾದವನ್ನು ನ್ಯಾಯಾಲಯ ಒಪ್ಪಿಕೊಂಡಿತು. “ಈ ಅಂಶಗಳನ್ನು ಪರಿಗಣಿಸಿ, ಈ ಹಂತದಲ್ಲಿ ಯಾವುದೇ ಮಧ್ಯಂತರ ಆದೇಶವನ್ನು ನೀಡುವ ಅಗತ್ಯವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಮೂರು ದಿನಗಳೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ. ಮುಂದಿನ ವಿಚಾರಣೆ ಜುಲೈ 24 ರಂದು ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...