‘ಭಾರತದ ಮೇಲೂ ಸಂಭವಿಸಬಹುದು – ಅಮೆರಿಕಗೆ ಕೇಂದ್ರ ಹೆದರುತ್ತಿದೆ’: ವೆನೆಜುವೆಲಾ ಮೇಲಿನ ದಾಳಿಗೆ ಸರ್ಕಾರದ ಮೌನ; ಆಕ್ರೋಶ

Date:

ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೋ ಅವರನ್ನು ಅಮೆರಿಕ ಸೆರೆ ಹಿಡಿದಿದ್ದು, ವೆನೆಜುವೆಲಾ ಮೇಲೆ ನಿರಂತರ ದಾಳಿ ನಡೆಸುತ್ತಿದೆ. ವೆನೆಜುವೆಲಾ ಮೇಲಿನ ದಾಳಿ ಮತ್ತು ಅಮೆರಿಕದ ಕ್ರೌರ್ಯದ ಕುರಿತು ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಯಾವುದೇ ನಿಲುವು ತೆಗೆದುಕೊಳ್ಳದೇ ಇರುವುದಕ್ಕೆ ಮೋದಿ ವಿರುದ್ಧ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ಅಮೆರಿಕಗೆ ಹೆದರುತ್ತಿದೆ. ವೆನೆಜುವೆಲಾದಂತೆ ಭಾರತದ ಮೇಲೂ ಅಂತಹ ಘಟನೆ ಸಂಭವಿಸಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

- Advertisement -

“ವೆನೆಜುವೆಲಾದಲ್ಲಿ ಏನು ನಡೆಯುತ್ತಿದೆಯೋ, ಅದು ವಿಶ್ವಸಂಸ್ಥೆಯ ನಿಯಮಗಳಿಗೆ ವಿರುದ್ಧವಾಗಿದೆ. ಚುನಾಯಿತ ಅಧ್ಯಕ್ಷರನ್ನು ಅಪಹರಿಸಲಾಗಿದೆ. ನಾಳೆ ಬೇರೆ ಯಾವುದೇ ದೇಶದ ಮೇಲೂ ಇದೇ ರೀತಿ ಆಗಬಹುದು ಎಂಬುದು ಗಂಭೀರ ಕಳವಳಕಾರಿ. ನಾಳೆ, ಭಾರತಕ್ಕೂ ಇದು ಆಗಬಹುದು” ಎಂದು ಚವಾಣ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

“ವೆನೆಜುವೆಲಾ ವಿಷಯದ ಬಗ್ಗೆ ಭಾರತ ಮಾತನಾಡಿಲ್ಲ, ನಿಲುವು ತೆಗೆದುಕೊಂಡಿಲ್ಲ. ರಷ್ಯಾ ಮತ್ತು ಚೀನಾ ನಿಲುವು ತೆಗೆದುಕೊಂಡಿವೆ. ಅಮೆರಿಕದ ಕೃತ್ಯವನ್ನು ಟೀಕಿಸಿವೆ. ನಾವು ಉಕ್ರೇನ್ ಯುದ್ಧದಲ್ಲೂ ನಿಲುವು ತೆಗೆದುಕೊಳ್ಳಲಿಲ್ಲ, ಇಸ್ರೇಲ್-ಹಮಾಸ್ ವಿಷಯದಲ್ಲೂ ನಾವು ನಿಲುವು ತೆಗೆದುಕೊಳ್ಳಲಿಲ್ಲ, ಈಗ ನಾವು ಅಮೆರಿಕನ್ನರಿಗೆ ತುಂಬಾ ಹೆದರುತ್ತಿದ್ದೇವೆ, ಏನಾಯಿತು ಎಂಬುದನ್ನು ನಾವು ಟೀಕಿಸಲು ಸಹ ಪ್ರಯತ್ನಿಸುತ್ತಿಲ್ಲ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ಕ್ಯಾರಕಾಸ್‌ನಲ್ಲಿ ಸೆರೆಹಿಡಿದು, ನ್ಯೂಯಾರ್ಕ್‌ನಲ್ಲಿ ಇರಿಸಲಾಗಿದೆ. ಅಮೆರಿಕ ಗುಪ್ತಚರ ಸಂಸ್ಥೆಗಳು ಮತ್ತು ಯುಎಸ್ ಕಾನೂನು ಜಾರಿ ಸಂಸ್ಥೆಗಳು ಅವರನ್ನು ಸೆರೆಹಿಡಿದಿವೆ.

ಈ ನಡುವೆ, ವೆನೆಜುವೆಲಾದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ವೆನೆಜುವೆಲಾದ ಜನರ ಸುರಕ್ಷತೆ ಮತ್ತು ಯೋಗಕ್ಷೇಮದ ವಿಚಾರದಲ್ಲಿ ಆ ದೇಶಕ್ಕೆ ಭಾರತದ ಬೆಂಬಲ ನೀಡುವುದಾಗಿ ಹೇಳಿದೆ. ಆದರೆ, ಅಮೆರಿಕದ ಕೃತ್ಯವನ್ನು ಖಂಡಿಸಿಲ್ಲ. “ವೆನೆಜುವೆಲಾದಲ್ಲಿನ ಇತ್ತೀಚಿನ ಬೆಳವಣಿಗೆಗಳು ತೀವ್ರ ಕಳವಳಕಾರಿಯಾಗಿವೆ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅಲ್ಲಿ, ಶಾಂತಿ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು, ಮಾತುಕತೆಯ ಮೂಲಕ ಶಾಂತಿಯುತವಾಗಿ ಸಮಸ್ಯೆಗಳನ್ನು ಪರಿಹರಿಸಲು ನಾವು ಸಂಬಂಧಪಟ್ಟ ಎಲ್ಲರಿಗೂ ಕರೆ ನೀಡುತ್ತೇವೆ” ಎಂದಷ್ಟೇ ವಿದೇಶಾಂಗ ಸಚಿವಾಲಯ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...