ಹೂಡಿಕೆ ವಂಚನೆ ಪ್ರಕರಣ: ನಟ ಗೋವಿಂದ, ಬಿಜೆಪಿ ಸಂಸದ ಸೇರಿ ಹಲವರ ವಿರುದ್ಧ ಎಫ್‌ಐಆರ್‌

Date:

ಗಾಜಿಯಾಬಾದ್ ಮೂಲದ ಕಂಪನಿಯೊಂದರ ಹೂಡಿಕೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಗೋವಿಂದ, ಶಕ್ತಿ ಕಪೂರ್, ಚಂಕಿ ಪಾಂಡೆ ಹಾಗೂ ಬಿಜೆಪಿ ಸಂಸದ ಮನೋಜ್ ತಿವಾರಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

- Advertisement -

​ಗಾಜಿಯಾಬಾದ್ ಮೂಲದ ‘ಮ್ಯಾಕ್ಸಿಜೋನ್ ಟಚ್ ಪ್ರೈವೇಟ್ ಲಿಮಿಟೆಡ್’ (Maxizone Touch Private Limited) ಎಂಬ ಕಂಪನಿಯು ನಕಲಿ ಯೋಜನೆಗಳನ್ನು ನಡೆಸಿ ಹೂಡಿಕೆದಾರರಿಗೆ ವಂಚಿಸಿದೆ ಎಂಬ ಆರೋಪ ಕೇಳಿಬಂದಿದೆ. ಈ ಕಂಪನಿಯ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ಈ ನಾಲ್ವರು ಗಣ್ಯರ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಪ್ರಸ್ತುತ ದಾಖಲಾಗಿರುವ ದೂರು 25 ಲಕ್ಷ ರೂ.ಗಳ ವಂಚನೆಗೆ ಸಂಬಂಧಿಸಿದ್ದಾಗಿದ್ದರೂ, ಇದರ ಮೂಲ ಸುಮಾರು 600 ಕೋಟಿ ರೂ.ಗಳ ಬೃಹತ್ ಹೂಡಿಕೆ ಮತ್ತು ಕ್ರಿಪ್ಟೋಕರೆನ್ಸಿ ಹಗರಣದೊಂದಿಗೆ ತಳುಕು ಹಾಕಿಕೊಂಡಿದೆ ಎಂದು ಶಂಕಿಸಲಾಗಿದೆ.

ಜಸ್ಪಾಲ್ ಸಿಂಗ್ ಎಂಬ ಹೂಡಿಕೆದಾರರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. ಹೂಡಿಕೆದಾರರಿಗೆ ಶೇ. 15 ರಷ್ಟು ಡಿವಿಡೆಂಡ್ (ಲಾಭಾಂಶ) ನೀಡುವುದಾಗಿ ಕಂಪನಿ ಭರವಸೆ ನೀಡಿತ್ತು. ಆದರೆ, ಹೂಡಿಕೆದಾರರಿಗೆ ಯಾವುದೇ ಬಡ್ಡಿಯಾಗಲಿ ಅಥವಾ ಅಸಲು ಹಣವಾಗಲಿ ಹಿಂತಿರುಗಿಲ್ಲ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ |ಮುಂಬಯಿ TISS ವಿದ್ಯಾರ್ಥಿಗಳ ‘ಕ್ಯಾಂಪಸ್‌ ರಾಜಕೀಯ’ ದಮನ ಸಲ್ಲದು!

​ಜನಪ್ರಿಯ ನಟರು ಈ ಕಂಪನಿಯ ಯೋಜನೆಗಳನ್ನು ಪ್ರಚಾರ ಮಾಡಿದ್ದರಿಂದ, ಅವರ ಮಾತುಗಳನ್ನು ನಂಬಿ ಅನೇಕರು ಹಣ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.
​
ವಂಚನೆಗೆ ಸಂಬಂಧಿಸಿದಂತೆ ಮ್ಯಾಕ್ಸಿಜೋನ್ ಟಚ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಾದ ಚಂದ್ರ ಭೂಷಣ್ ಸಿಂಗ್ ಮತ್ತು ಅವರ ಪತ್ನಿ ಪ್ರಿಯಾಂಕಾ ಸಿಂಗ್ ಅವರನ್ನು ಸೆಪ್ಟೆಂಬರ್ 2025 ರಲ್ಲೇ ಪೊಲೀಸರು ಬಂಧಿಸಿದ್ದಾರೆ. ಈಗ ಸೆಲೆಬ್ರಿಟಿಗಳ ಹೆಸರು ತಳುಕು ಹಾಕಿಕೊಂಡಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೆಎಸ್‌ಎಸ್‌ಸಿ ಪರೀಕ್ಷೆ ರದ್ದು ನಿರ್ಧಾರ ವಜಾಗೊಳಿಸಿದ ಜಾರ್ಖಂಡ್ ಹೈಕೋರ್ಟ್

ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗವು (JSSC-CGL) ನಡೆಸಿದ್ದ 'ಸಂಯೋಜಿತ ನಾಗರಿಕ ಸೇವಾ...

ಸಿಬಿಎಸ್‌ಇ 10 ಮತ್ತು 12ನೇ ತರಗತಿ ಪ್ರಾಯೋಗಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್‌ಇ) 2026-27ರ ಶೈಕ್ಷಣಿಕ ಸಾಲಿನ 10ನೇ...

ಸಹ-ಆರೋಪಿಗಳು ಖುಲಾಸೆಯಾದಾಗ ಪ್ರತ್ಯೇಕ ಆರೋಪವಿಲ್ಲದೆ ಕೊಲೆ ಪ್ರಕರಣದಲ್ಲಿ ಶಿಕ್ಷೆ ನೀಡಲಾಗದು: ಸುಪ್ರೀಂ ಕೋರ್ಟ್

ಇತರೆ ಸಹ-ಆರೋಪಿಗಳನ್ನು ದೋಷಮುಕ್ತಗೊಳಿಸಿದ ಸಂದರ್ಭದಲ್ಲಿ, ಯಾವುದೇ ಪ್ರತ್ಯೇಕ ಅಥವಾ ಸ್ವತಂತ್ರ ಆರೋಪವಿಲ್ಲದೆ...

ಕಂಬ ಕುಸಿದು ಬಾಲಕಿ ಸಾವು ಪ್ರಕರಣ: ಶಾಲಾ ಆಡಳಿತ ಮಂಡಳಿ ವಿರುದ್ಧದ ಪ್ರಕರಣ ಕೈಬಿಟ್ಟ ಸುಪ್ರೀಂ ಕೋರ್ಟ್

ಶಾಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಂಬ ಕುಸಿದು 12 ವರ್ಷದ ವಿದ್ಯಾರ್ಥಿನಿ ಮೃತಪಟ್ಟ...