ರಾಣಾನಿಗೆ ಬಿಹಾರ ಚುನಾವಣೆ ವೇಳೆ ಗಲ್ಲು ಶಿಕ್ಷೆ: ಸಂಜಯ್ ರಾವತ್‌

Date:

2008ರ ಮುಂಬೈ ದಾಳಿಯ ಪ್ರಮುಖ ರೂವಾರಿ ಉಗ್ರ ತಹವ್ವೂರ್‌ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ಕರೆತರಲಾಗಿದೆ. ಸದ್ಯ ರಾಣಾನನ್ನ ಕೋರ್ಟ್‌ 18 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳದ ಕಸ್ಟಡಿಗೆ ನೀಡಿದ್ದು, ಎನ್‌ಐಎ ಮುಂದಿನ ವಿಚಾರಣೆ ಕೈಗೊಂಡಿದೆ.

- Advertisement -

ದೇಶದ ಹಲವು ಭಾಗಗಳಿಗೆ ರಾಣಾನನ್ನ ಕರೆದೊಯ್ಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಈ ನಡುವೆ ರಾಣಾ ಹಸ್ತಾಂತರ ವಿಚಾರ ಕುರಿತು ಮಾತನಾಡಿರುವ ಶಿವಸೇನಾ ಸಂಸದ ಸಂಜಯ್‌ ರಾವತ್‌ , ರಾಣಾನನ್ನ ತಕ್ಷಣವೇ ಗಲ್ಲಿಗೇರಿಸಬೇಕು. ಆದರೆ ಬಿಹಾರ ಚುನಾವಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಗಲ್ಲಿಗೇರಿಸಲಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆನ್​​ಲೈನ್​​ ಗೇಮಿಂಗ್-ಬೆಟ್ಟಿಂಗ್‌ಗೆ ಕಡಿವಾಣ ಹಾಕಿ, ಕಾಯ್ದೆ ರೂಪಿಸುವ ಅಗತ್ಯವಿದೆ

ರಾಣಾನನ್ನು ಭಾರತಕ್ಕೆ ಕರೆತರಲು 16 ವರ್ಷ ಬೇಕಾಯಿತು. ಆದರೆ ಅವನನ್ನು ಹಸ್ತಾಂತರಿಸುವ ಪ್ರಕ್ರಿಯೆ ಕಾಂಗ್ರೆಸ್‌ ಆಡಳಿತದಲ್ಲೇ ಪ್ರಾರಂಭವಾಯಿತು. ಆದ್ದರಿಂದ ಅವನನ್ನು ಮರಳಿ ಕರೆತಂದ ಕ್ರೆಡಿಟ್‌ ದೇಶಕ್ಕೆ ಸಲ್ಲುತ್ತದೆ. ಯಾರೂ ವೈಯಕ್ತಿಕವಾಗಿ ಕ್ರೆಡಿಟ್‌ ತೆಗೆದುಕೊಳ್ಳುವ ಅವಶ್ಯಕತೆಯಿಲ್ಲ. ಅಲ್ಲದೇ ತಹವ್ವೂರ್‌ ರಾಣಾ ಭಾರತಕ್ಕೆ ಹಸ್ತಾಂತರಿಸಲಾದ ಮೊದಲ ಆರೋಪಿಯಲ್ಲ. ಇದಕ್ಕೂ ಮುನ್ನ 1993ರ ಸರಣಿ ಸ್ಫೋಟದ ಆರೋಪಿ ಅಬು ಸಲೇಂನನ್ನು ಕೂಡ ಭಾರತಕ್ಕೆ ಹಸ್ತಾಂತರಿಸಲಾಗಿತ್ತು ಎಂದು ನುಡಿದಿದ್ದಾರೆ.

ಇದೇ ವೇಳೆ ಕಾಂಗ್ರೆಸ್‌ ನಾಯಕ ಕನ್ಹಯ್ಯಾ ಕುಮಾರ್ ಮಾತನಾಡಿ, ತಹವ್ವೂರ್‌ ರಾಣಾ ಹಸ್ತಾಂತರ ರಾಜತಾಂತ್ರಿಕ ಯಶಸ್ಸಲ್ಲ. ಸಾರ್ವಜನಿಕ ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯುವ ಬಿಜೆಪಿಯ ಕುತಂತ್ರವಾಗಿದೆ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...