ಗ್ರಹಾಂ ಸ್ಟೇನ್ಸ್ ಹತ್ಯೆ ಪ್ರಕರಣ: ದಾರಾ ಸಿಂಗ್ ಕ್ಷಮಾದಾನ ಅರ್ಜಿ ಕುರಿತು ಶೀಘ್ರ ನಿರ್ಧಾರಕ್ಕೆ ಸುಪ್ರೀಂ ಸೂಚನೆ

Date:

1999ರಲ್ಲಿ ಒಡಿಶಾದ ಕಿಯೋಂಜರ್ ಜಿಲ್ಲೆಯಲ್ಲಿ ಆಸ್ಟ್ರೇಲಿಯಾದ ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟುವರ್ಟ್ ಸ್ಟೇನ್ಸ್ ಮತ್ತು ಅವರ ಇಬ್ಬರು ಪುಟ್ಟ ಪುತ್ರರನ್ನು ಹತ್ಯೆಗೈದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ ರವೀಂದ್ರ ಪಾಲ್ ಅಲಿಯಾಸ್ ದಾರಾ ಸಿಂಗ್‌ನ ಕ್ಷಮಾದಾನ ಅರ್ಜಿಯನ್ನು ಪರಿಶೀಲಿಸುತ್ತಿರುವ ಸಮಿತಿಯು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದೆ.

- Advertisement -

ನ್ಯಾಯಮೂರ್ತಿ ಮನೋಜ್ ಮಿಶ್ರಾ ಮತ್ತು ನ್ಯಾಯಮೂರ್ತಿ ವಿಜಯ್ ಬಿಷ್ಣೋಯ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಪ್ರಕರಣದ ವಿಚಾರಣೆಯನ್ನು ಆಗಸ್ಟ್ 19ಕ್ಕೆ ಮುಂದೂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ವಿಚಾರಣೆಯನ್ನು ಮುಂದೂಡುವ ಮುನ್ನ ಒಡಿಶಾ ಸರ್ಕಾರವು ನ್ಯಾಯಾಲಯದಲ್ಲಿ ಕಾಲಾವಕಾಶ ಕೋರಿತು. ‘ಕ್ಷಮಾದಾನ ಅರ್ಜಿಯನ್ನು ಪರಿಶೀಲಿಸುತ್ತಿರುವ ಸಮಿತಿಯು ಕೆಲವು ದಾಖಲೆಗಳನ್ನು ಕೇಳಿದ್ದು, ಅವುಗಳು ಇನ್ನೂ ಲಭ್ಯವಾಗಿಲ್ಲ’ ಎಂದು ಸರ್ಕಾರವು ನ್ಯಾಯಾಲಯದ ಗಮನಕ್ಕೆ ತಂದಿತು.

ಸರ್ಕಾರದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಹೆಚ್ಚಿನ ವಿಚಾರಣೆಯನ್ನು ಆಗಸ್ಟ್ 19ಕ್ಕೆ ಮುಂದೂಡಿತು. “ಈ ಸನ್ನಿವೇಶಗಳಲ್ಲಿ, ಪ್ರಕರಣವನ್ನು ಆಗಸ್ಟ್ 19ಕ್ಕೆ ಮುಂದೂಡುವುದು ಸೂಕ್ತವೆಂದು ನಾವು ಭಾವಿಸುತ್ತೇವೆ. ಈ ಮಧ್ಯೆ, ಸಮಿತಿಯು ತನ್ನ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ” ಎಂದು ಸುಪ್ರೀಂ ಕೋರ್ಟ್ ತನ್ನ ಒಂದು ಪುಟದ ಆದೇಶದಲ್ಲಿ ತಿಳಿಸಿದೆ.

ಕಳೆದ ವರ್ಷ ಮಾರ್ಚ್ 19 ರಂದು, ದಾರಾ ಸಿಂಗ್‌ನ ಕ್ಷಮಾದಾನ ಅರ್ಜಿಯನ್ನು ಆರು ವಾರಗಳೊಳಗೆ ಪರಿಗಣಿಸಿ ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಒಡಿಶಾ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. 25 ವರ್ಷಗಳಿಗೂ ಹೆಚ್ಚು ಕಾಲ ಜೈಲು ಶಿಕ್ಷೆ ಅನುಭವಿಸಿರುವ ತನಗೆ, ಅವಧಿಗೂ ಮುನ್ನ ಬಿಡುಗಡೆ ಹೊಂದಲು ನೆರವಾಗುವ ನಿಟ್ಟಿನಲ್ಲಿ ಉದಾರವಾದ ಕ್ಷಮಾದಾನ ನೀತಿಯ ಪ್ರಯೋಜನವನ್ನು ನೀಡಬೇಕೆಂದು ಸಿಂಗ್ ತನ್ನ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ಅನ್ನು ಕೋರಿದ್ದನು.

ಜನವರಿ 21, 1999 ರ ರಾತ್ರಿ ದಾರಾ ಸಿಂಗ್ ನೇತೃತ್ವದ ಗುಂಪು ಗ್ರಹಾಂ ಸ್ಟೇನ್ಸ್ ಮತ್ತು ಅವರ ಪುತ್ರರಾದ ಫಿಲಿಪ್ (10 ವರ್ಷ) ಹಾಗೂ ತಿಮೋತಿ (6 ವರ್ಷ) ಅವರನ್ನು ಜೀವಂತವಾಗಿ ದಹಿಸಿತ್ತು. ಈ ಕ್ರೂರ ಹತ್ಯೆಗಳಿಗಾಗಿ ದಾರಾ ಸಿಂಗ್‌ನನ್ನು ಅಪರಾಧಿ ಎಂದು ಘೋಷಿಸಲಾಗಿತ್ತು.

ಸ್ಟೇನ್ಸ್ ಮತ್ತು ಅವರ ಮಕ್ಕಳು ತಮ್ಮ ಸ್ಟೇಷನ್ ವ್ಯಾಗನ್‌ನಲ್ಲಿ ಮಲಗಿದ್ದಾಗ ಸಿಂಗ್ ನೇತೃತ್ವದ ಗುಂಪು ಅವರ ಮೇಲೆ ದಾಳಿ ಮಾಡಿ ವಾಹನಕ್ಕೆ ಬೆಂಕಿ ಹಚ್ಚಿತ್ತು. ಅವರು ತಪ್ಪಿಸಿಕೊಳ್ಳಲು ಯತ್ನಿಸಿದಾಗ, ಲಾಠಿಗಳನ್ನು ಹಿಡಿದಿದ್ದ ಗುಂಪು ಅವರನ್ನು ಹೊರಬರದಂತೆ ತಡೆದು ಹತ್ಯೆ ಮಾಡಿತ್ತು. ಅವರ ಸುಟ್ಟು ಕರಕಲಾದ ಅಸ್ಥಿಪಂಜರಗಳು ನಂತರ ಪತ್ತೆಯಾಗಿದ್ದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...