ಗ್ರೇಟ್ ನಿಕೋಬಾರ್ ಯೋಜನೆ ‘ಪರಿಸರ ವಿಪತ್ತು’ – ರಾಜನಾಥ್ ಸಿಂಗ್‌ಗೆ ಪತ್ರ ಬರೆದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್

Date:

ಗ್ರೇಟ್ ನಿಕೋಬಾರ್ ಯೋಜನೆಯ ಬಗ್ಗೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಭಾನುವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. “ಪ್ರಸ್ತುತ ರೂಪದಲ್ಲಿ ಈ ಯೋಜನೆಯು ‘ಪರಿಸರ ವಿಪತ್ತು’ ಸೃಷ್ಟಿಸುವುದಕ್ಕೆ ಒಂದು ಪಾಕವಿಧಾನ. ಕಡಿಮೆ ಪರಿಸರ ವೆಚ್ಚದೊಂದಿಗೆ ಪರ್ಯಾಯ ಅನ್ವೇಷಿಸಿ” ಎಂದು ಸರ್ಕಾರವನ್ನು ಜೈರಾಮ್ ರಮೇಶ್ ಒತ್ತಾಯಿಸಿದ್ದಾರೆ.

- Advertisement -

ಈ ಯೋಜನೆಯ ಬಗ್ಗೆ ಕಾಂಗ್ರೆಸ್ ಪದೇ ಪದೇ ಕಳವಳ ವ್ಯಕ್ತಪಡಿಸಿದೆ. ಈ ಪ್ರದೇಶದಲ್ಲಿ ಪರಿಸರ ವಿಜ್ಞಾನ ಮತ್ತು ಬುಡಕಟ್ಟು ಹಕ್ಕುಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಆರೋಪಿಸಿದೆ. ಈ ಸಂಬಂಧ ಕಾಂಗ್ರೆಸ್ ನಾಯಕ ರಮೇಶ್, ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದು, “ಭಾರತದ ರಕ್ಷಣಾ ಸನ್ನದ್ಧತೆಯನ್ನು ಬಲಪಡಿಸುವುದು ಮುಖ್ಯ. ಆದರೆ ಗ್ರೇಟ್ ನಿಕೋಬಾರ್ ಸುತ್ತಮುತ್ತಲಿನ ಕಾರ್ಯತಂತ್ರದ ಸಾಮರ್ಥ್ಯಗಳನ್ನು ಗಮನಾರ್ಹವಾಗಿ ಕಡಿಮೆ ಪರಿಸರ ಹಾನಿಯೊಂದಿಗೆ ಬಲಪಡಿಸುವ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? 40% ಕಮಿಷನ್ ಸರ್ಕಾರದಿಂದ ಮುಕ್ತಿ ಪಡೆಯಲು ರಾಜ್ಯ ತೀರ್ಮಾನಿಸಿದೆ: ಜೈರಾಮ್ ರಮೇಶ್

“ನೌಕಾ ಅಧಿಕಾರಿಗಳು ಈ ಪರ್ಯಾಯಗಳನ್ನು ಪ್ರಸ್ತಾಪಿಸಿದ್ದಾರೆ. ಇದು ದ್ವೀಪದ ದುರ್ಬಲ ಪರಿಸರ ವ್ಯವಸ್ಥೆಗೆ ತೀವ್ರವಾಗಿ ಪರಿಣಾಮ ಬೀರದೆ ದೇಶದ ರಕ್ಷಣಾ ಮೂಲಸೌಕರ್ಯವನ್ನು ಸುಧಾರಿಸಲು ಸಹಾಯ ಮಾಡಬಹುದು” ಎಂದು ಅಭಿಪ್ರಾಯಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪತ್ರ ಹಂಚಿಕೊಂಡಿರುವ ರಮೇಶ್, “ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವರು ಮತ್ತು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವರಿಗೆ ಬರೆದ ನಂತರ, ನಾನು ಗ್ರೇಟ್ ನಿಕೋಬಾರ್ ದ್ವೀಪ ಯೋಜನೆಯ ಬಗ್ಗೆ ರಕ್ಷಣಾ ಮಂತ್ರಿಗೆ ಪತ್ರ ಬರೆದಿದ್ದೇನೆ” ಎಂದು ತಿಳಿಸಿದ್ದಾರೆ.

“ಯೋಜನೆಯಿಂದಾಗಿ ಪ್ರದೇಶದಲ್ಲಿ ಸುಮಾರು 8.5 ಲಕ್ಷ ಮರಗಳನ್ನು ಕಡಿಯಬೇಕಾಗುತ್ತದೆ. ಇದು ವಿಶ್ವದಲ್ಲೇ ವಿಶಿಷ್ಟವಾದ ಜೀವವೈವಿಧ್ಯತೆಯನ್ನು ಹೊಂದಿರುವ ದ್ವೀಪದ ಪರಿಸರ ಸಮತೋಲನಕ್ಕೆ ಧಕ್ಕೆ ಉಂಟು ಮಾಡಲಿದೆ” ಎಂದು ಜೈರಾಮ್ ರಮೇಶ್ ಆತಂಕ ವ್ಯಕ್ತಪಡಿಸಿದ್ದಾರೆ.

ಹಾಗೆಯೇ, “ಈ ಯೋಜನೆಯು ಇಲ್ಲಿನ ಸ್ಥಳೀಯ ಮತ್ತು ಅತ್ಯಂತ ದುರ್ಬಲ ಬುಡಕಟ್ಟು ಜನಾಂಗದವರಾದ ಶೋಂಪೆನ್ ಮತ್ತು ನಿಕೋಬಾರೀಸ್ ಜನರಿಗೆ ಗಂಭೀರ ಅಪಾಯವನ್ನು ತಂದೊಡ್ಡಲಿದೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...