ಉತ್ತರ ಪ್ರದೇಶ | ಮದುವೆ ಸಮಾರಂಭಕ್ಕೆ ಹೊರಟ ಕಾರು ಭೀಕರ ಅಪಘಾತ: ವರ ಸೇರಿ ಎಂಟು ಮಂದಿ ಸಾವು

Date:

ವಿವಾಹ ಸಮಾರಂಭಕ್ಕೆ ಹೊರಟ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ವರ, ಇಬ್ಬರು ಅಪ್ರಾಪ್ತರು ಸೇರಿ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕಾರು ಗೋಡೆಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.

- Advertisement -

ಈ ಬಗ್ಗೆ ಮಾಹಿತಿ ನೀಡಿರುವ ಸಂಭಾಲ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ(ದಕ್ಷಿಣ) ಅನುಕೃತಿ ಶರ್ಮಾ, “ವರ ಸೇರಿದಂತೆ ವಿವಾಹ ಸಮಾರಂಭಕ್ಕೆ ಹೋಗುತ್ತಿದ್ದವರು ಇದ್ದ ಕಾರು ನಿಯಂತ್ರಣ ತಪ್ಪಿ ಜೆವಾನೈನಲ್ಲಿರುವ ಜನತಾ ಇಂಟರ್ ಕಾಲೇಜಿನ ಗೋಡೆಗೆ ಡಿಕ್ಕಿ ಹೊಡೆದಿದೆ. ಮಾಹಿತಿ ಬಂದ ಕೂಡಲೇ ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಶಿವಮೊಗ್ಗ | ಭೀಕರ ಅಪಘಾತ ಇಬ್ಬರು ಮೃತ್ಯು

ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ವರ ಸೂರಜ್ (24), ಅವರ ಅತ್ತಿಗೆ ಆಶಾ (26), ಅವರ ಮಗಳು ಐಶ್ವರ್ಯ (2), ವಿಷ್ಣು (6) ಸೇರಿ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಕಾರು ಅತಿ ವೇಗದಲ್ಲಿ ಚಲಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಾರಿನಲ್ಲಿ 10 ಮಂದಿ ಇದ್ದರು. ಸದ್ಯ ಇಬ್ಬರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...