ರೈಲಿನಲ್ಲಿ ಸೀಟು ವಿಚಾರಕ್ಕೆ ಗಲಾಟೆ: ಯುವಕನನ್ನು ಹೊಡೆದು ಕೊಂದ ದುಷ್ಟ ಪ್ರಯಾಣಿಕರ ಗುಂಪು

Date:

ದೆಹಲಿಯಿಂದ ಉತ್ತರ ಪ್ರದೇಶಕ್ಕೆ ಹೋಗುತ್ತಿದ್ದ ರೈಲಿನಲ್ಲಿ ಸೀಟಿನ ವಿಚಾರವಾಗಿ ಪ್ರಯಾಣಿಕರ ನಡುವೆ ಆರಂಭವಾದ ವಾಗ್ವಾದವು ರಕ್ತಪಾತಕ್ಕೆ ತಿರುಗಿ, ಸಾವಿನಲ್ಲಿ ಅಂತ್ಯಗೊಂಡಿದೆ. ಪ್ರಯಾಣಿಕರ ಗುಂಪೊಂದು ಯುವಕನನ್ನು ಅಮಾನುಷವಾಗಿ ಥಳಿಸಿ ಕೊಂದಿದೆ. ರೈಲ್ವೇ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆಸಿದ್ದು, ತನಿಖೆ ಆರಂಭಿಸಿದ್ದಾರೆ.

- Advertisement -

ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯ ಖೇಕ್ಡಾ ಪಟ್ಟಣದ ನಿವಾಸಿ ದೀಪಕ್ ಯಾದವ್ ಶುಕ್ರವಾರ ರಾತ್ರಿ ಕೆಲಸ ಮುಗಿಸಿಕೊಂಡು ದೆಹಲಿಯಿಂದ ತಮ್ಮೂರಿಗೆ ಮರಳುತ್ತಿದ್ದರು. ಅವರು ಸಹರಾನ್‌ಪುರಕ್ಕೆ ಹೋಗುವ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ಖೇಕ್ಡಾ ಬಳಿ ಚಲಿಸುತ್ತಿದ್ದಾಗ ಗುಂಪೊಂದು ಸೀಟಿನ ವಿಚಾರಕ್ಕೆ ಅವರೊಂದಿಗೆ ಗಲಾಟೆ ಆರಂಭಿಸಿತು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಗಲಾಟೆ ಎಷ್ಟು ಗಂಭೀರ ಸ್ವರೂಪಕ್ಕೆ ಹೋಯಿತೆಂದರೆ, ದುಷ್ಕರ್ಮಿಗಳ ಗುಂಪು ಯಾದವ್ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿತ್ತು. ಯಾದವ್ ಸ್ಥಳದಲ್ಲಿಯೇ ಕುಸಿದುಬಿದ್ದಿದ್ದರು. ಘಟನೆ ಬಗ್ಗೆ ಮಾಹಿತಿ ದೊರೆತ ಕೂಡಲೇ ಖೇಕ್ಡಾ ನಿಲ್ಧಾಣದಲ್ಲಿ ರೈಲನ್ನು ನಿಲ್ಲಿಸಲಾಯಿತು. ರೈಲು ನಿಲ್ಲುತ್ತಿದ್ದಂತೆಯೇ ದುಷ್ಕರ್ಮಿಗಳು ಇಳಿದು ಪರಾರಿಯಾಗಿದ್ದಾರೆ. ಯಾದವ್ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಬಂದ ಜಿಆರ್‌ಪಿ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆಸಿದ್ದಾರೆ. ತನಿಖೆ ಆರಂಭಿಸಿದ್ದಾರೆ. ಕೆಲವು ಪ್ರಯಾಣಿಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆಹಚ್ಚಿ, ಬಂಧಿಸುತ್ತೇವೆಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...