ಸಾಮಾನ್ಯ ಜನರು ಬಳಸುವ ವಸ್ತುಗಳ ಮೇಲಿನ ಜಿಎಸ್‌ಟಿ ಕಡಿತ, ಸ್ಲ್ಯಾಬ್‌ಗಳಲ್ಲಿ ಬದಲಾವಣೆ

Date:

ಬುಧವಾರ (ಸೆ.3) ನಡೆದ 56ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, ಸಾಮಾನ್ಯ ಜನರು ಬಳಸುವ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳನ್ನು ಪರಿಷ್ಕರಿಸುವ ಮಹತ್ವದ ನಿರ್ಧಾರಕ್ಕೆ ಜಿಎಸ್‌ಟಿ ಮಂಡಳಿ ಮುಂದೆ ಬಂದಿದೆ.

- Advertisement -

ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಹೇ‌ರ್ ಆಯಿಲ್‌ನಿಂದ ಸೇರಿದಂತೆ ಕಾರ್ನ್‌ಪ್ಲೇಕ್ಸ್, ಟಿವಿ ಸೆಟ್‌ಗಳಿಂದ ಹಿಡಿದು ಆರೋಗ್ಯ ಮತ್ತು ಜೀವ ವಿಮೆ ಪಾಲಿಸಿ ವರೆಗಿನ ಸಾಮಾನ್ಯ ಜನರು ಬಳಸುವ ವಸ್ತುಗಳ ಮೇಲಿನ ಜಿಎಸ್‌ಟಿ ಸ್ಲ್ಯಾಬ್ ಗಳಲ್ಲಿ ಮಹತ್ವದ ಬದಲಾವಣೆಗೆ ಅನುಮೋದನೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಟಿಂಗ್ ಆರೋಪದ ಸುತ್ತ ರಾಜಕೀಯ ಲೆಕ್ಕಾಚಾರ; ಸತ್ಯಾಸತ್ಯತೆ ಹೊಣೆಗಾರಿಕೆಯ...

ಸಿದ್ದರಾಮಯ್ಯ ಅವರ ನಿರಾಕರಣೆ, ಕುಮಾರಸ್ವಾಮಿ ಅವರ ಆರೋಪಗಳು, ಆರ್. ಅಶೋಕ್ ಅವರ ಹಣಕಾಸಿನ ಕುರಿತ ಹೇಳಿಕೆಗಳು ಮತ್ತು ಸರ್ಕಾರದ ತನಿಖೆಯ ಭರವಸೆ—ಇವೆಲ್ಲವೂ ಪ್ರಕರಣದ ವಿವಿಧ ಆಯಾಮಗಳನ್ನು ಪ್ರತಿನಿಧಿಸುತ್ತವೆ. ಆದರೆ ಇವುಗಳಲ್ಲಿ ಯಾವುದೂ ಸ್ವತಃ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಪ್ರಸ್ತುತ ನಾಲ್ಕು GST ಸ್ಲ್ಯಾಬ್‌ಗಳಿದ್ದು, ಶೇ.5, ಶೇ.12, ಶೇ.18 ಹಾಗೂ ಶೇ.28 ರಷ್ಟು ತೆರಿಗೆ ವಿಧಿಸಲಾಗುತ್ತಿದೆ. ಶೇ.12 ಮತ್ತು ಶೇ. 28ರ ತೆರಿಗೆ ಸ್ಲ್ಯಾಬ್‌ಗಳನ್ನು ತೆಗೆದುಹಾಕಿ, ಕೇವಲ ಶೇ.5 ಮತ್ತು ಶೇ.18ರ ಎರಡು ಹಂತದ ತೆರಿಗೆ ಸ್ಲ್ಯಾಬ್‌ಗಳನ್ನು ಜಾರಿಗೆ ತರಲು ಸಭೆ ಒಪ್ಪಿಗೆ ಸೂಚಿಸಲಾಗಿದೆ. ಇದು ಸೆಪ್ಟೆಂಬರ್ 22ರಿಂದ ಜಾರಿಗೆ ಬರಲಿದೆ.

ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಮಾಹಿತಿಯನ್ನು ಹಂಚಿಕೊಂಡ ಹಣಕಾಸು ಸಚಿವರು, “33 ಜೀವರಕ್ಷಕ ಔಷಧಿಗಳ ಮೇಲೆ ಈ ಹಿಂದೆ ಅನ್ವಯಿಸಲಾಗಿದ್ದ 12% ಜಿಎಸ್‌ಟಿಯನ್ನು ತೆಗೆದುಹಾಕಿ ಶೂನ್ಯಗೊಳಿಸಲಾಗಿದೆ. ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್‌ಟಿ ತೆಗೆಯಲಾಗಿದೆ” ಎಂದು ಹೇಳಿದರು.

“ಅವಧಿ ವಿಮೆ, ಯುಲಿಪ್ ಅಥವಾ ಎಂಡೋಮೆಂಟ್ ಪಾಲಿಸಿ ಸೇರಿ ವೈಯಕ್ತಿಕ ಜೀವ ವಿಮೆ ಮತ್ತು ಆರೋಗ್ಯ ವಿಮೆ ಪಾಲಿಸಿಗಳ ಪ್ರೀಮಿಯಮ್ಗೆ ಜಿಎಸ್‌ಟಿಯಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಹೆಚ್ಚು ಜನರಿಗೆ ವಿಮಾ ಸೌಲಭ್ಯ ತಲುಪಲಿ ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಫ್ಯಾಮಿಲಿ ಫೋಟರ್ ಪಾಲಿಸಿಗಳು, ಹಿರಿಯ ನಾಗರಿಕರ ಆರೋಗ್ಯ ವಿಮೆ ಪಾಲಿಸಿಗಳ ಪ್ರೀಮಿಯಂಗಳಿಗೆ ಜಿಎಸ್‌ಟಿಯಿಂದ ವಿನಾಯಿತಿ ನೀಡಲಾಗಿದೆ. 2017ರಲ್ಲಿ ಈ ತೆರಿಗೆ ವ್ಯವಸ್ಥೆ ಜಾರಿಗೆ ಬಂದಾಗಿನಿಂದ ಈ ವಿಮಾ ಉತ್ಪನ್ನಗಳ ಪ್ರೀಮಿಯಂ ಮೇಲೆ ಶೇ.18ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿತ್ತು” ಎಂದು ತಿಳಿಸಿದರು.

“ಸಾಮಾನ್ಯ ಜನರು ಮತ್ತು ಮಧ್ಯಮ ವರ್ಗದವರು ಬಳಸುವ ವಸ್ತುಗಳ ಮೇಲೆ ಸಂಪೂರ್ಣ ತೆರಿಗೆ ಕಡಿತ ಮಾಡಲಾಗಿದೆ. ಕೂದಲಿನ ಎಣ್ಣೆ, ಸೋಪು, ಶಾಂಪೂಗಳು, ಹಲ್ಲುಜ್ಜುವ ಬ್ರಷ್‌ಗಳು, ಟೂತ್‌ಪೇಸ್ಟ್, ಸೈಕಲ್‌ಗಳು ಹಾಗೂ ಅಡುಗೆ ಸಾಮಾನುಗಳ ಮೇಲಿನ ಜಿಎಸ್‌ಟಿಯನ್ನು ಶೇ.5ಕ್ಕೆ ಇಳಿಸಲಾಗಿದೆ. ಎಲ್ಲ ರಾಜ್ಯಗಳು ಜಿಎಸ್‌ಟಿ ದರ ತರ್ಕಬದ್ಧಗೊಳಿಸುವಿಕೆಗೆ ಬೆಂಬಲ ನೀಡಿವೆ. ಇದು ಒಮ್ಮತದ ನಿರ್ಧಾರವಾಗಿದೆ” ಎಂದು ನಿರ್ಮಲಾ ಸೀತಾರಾಮನ್‌ ಹೇಳಿದರು.

ಜಿಎಸ್‌ಟಿ ಪರಿಷ್ಕರಣೆ ಕುರಿತು ಪ್ರಧಾನಿ ಮೋದಿ ಅವರು ಎಕ್ಸ್‌ ತಾಣದಲ್ಲಿ ಪ್ರತಿಕ್ರಿಯಿಸಿದ್ದು, “ಜಿಎಸ್‌ಟಿ ವಿಚಾರವಾಗಿ ತಮ್ಮ ಸರ್ಕಾರ ಕೈಗೊಂಡಿರುವ ನಿರ್ಣಯಗಳು ಜನಸಾಮಾನ್ಯರ ಪರವಾಗಿವೆ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಈ ಬದಲಾವಣೆ ದೇಶದ ಆರ್ಥಿಕ ಪ್ರಗತಿಗೂ ವೇಗ ನೀಡಲಿದೆ” ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ.

ಜಿಎಸ್‌ಟಿ ವ್ಯವಸ್ಥೆಯ ಸರಳೀಕರಣ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರೋತ್ಸವ ಅಂಗವಾಗಿ ಮಾಡಿದ ಭಾಷಣದಲ್ಲಿ ಘೋಷಿಸಿದ್ದರು. ಅಲ್ಲದೇ, ಅಮೆರಿಕವು ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಶೇ 50ರಷ್ಟು ಸುಂಕ ವಿಧಿಸಿರುವ ಸಂದರ್ಭದಲ್ಲಿಯೇ ಈ ಜಿಎಸ್‌ಟಿ ವ್ಯವಸ್ಥೆಯಲ್ಲಿ ಸುಧಾರಣೆ ತಂದಿರುವುದು ಗಮನಾರ್ಹ ಸಂಗತಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಉಗ್ರರ ದಾಳಿಗೆ ಮೂವರು ಬಲಿ; ಸಿಎಂ ನಿವಾಸದ ಮುಂದೆ ಮೃತದೇಹಗಳನ್ನಿಟ್ಟು ಆಕ್ರೋಶ

ಮಣಿಪುರದ ಅರಣ್ಯ ಪ್ರದೇಶದಲ್ಲಿ ಕಟ್ಟಿಗೆ ಸಂಗ್ರಹಿಸಲು ತೆರಳಿದ್ದ ಮೂವರನ್ನು ಸೋಮವಾರ ಉಗ್ರರು...

ರಾಜ್ಯದ ಹಲವು ಜಿಲ್ಲೆಗಳಲ್ಲಿ 7 ದಿನಗಳವರೆಗೆ ಮಳೆ ಆರ್ಭಟ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಹಿಂಗಾರು ಮುಂದುವರಿದಿದ್ದು, ಕರ್ನಾಟಕದ ಪ್ರಮುಖ ಮೂರು ವಲಯಗಳಾದ ಕರಾವಳಿ, ಉತ್ತರ...

ಮಣಿಪುರ ಹಿಂಸಾಚಾರ | ಗುಂಡೇಟಿಗೆ ಮೂವರು ಬಲಿ; ಸಿಎಂ ನಿವಾಸದ ಮುಂದೆ ಶವಗಳನ್ನಿಟ್ಟು ಪ್ರತಿಭಟನೆ

ಮಣಿಪುರದಲ್ಲಿ ಹಿಂಸಾಚಾರದ ಕೃತ್ಯ ಮುಂದುವರೆದಿದ್ದು, ಉಗ್ರರು ನಡೆಸಿದ ಗುಂಡಿನ ದಾಳಿಗೆ ಮೂವರು...