ಗುಜರಾತ್ : ಬುಡಕಟ್ಟು ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಅಮಾನುಷ ಹಲ್ಲೆ

Date:

ಬುಡಕಟ್ಟು ಸಮುದಾಯದ ವಿಚ್ಛೇದಿತ ಮಹಿಳೆಯನ್ನು ಆಕೆಯ ಪ್ರಿಯಕರನ ಕುಟುಂಬದವರು ಅಪಹರಿಸಿ, ಅಮಾನುಷವಾಗಿ ಥಳಿಸಿ ರಸ್ತೆಯಲ್ಲಿ ಅರೆಬೆತ್ತಲೆಯಾಗಿ ಬಿಟ್ಟಿರುವ ಘಟನೆ ಗುಜರಾತ್‌ನ ತಾಪಿ ಜಿಲ್ಲೆಯ ವ್ಯಾರಾ ಪಟ್ಟಣದಲ್ಲಿ ನಡೆದಿದೆ.

- Advertisement -

ಬುಡಕಟ್ಟು ಸಮುದಾಯದ 26 ವರ್ಷದ ಈ ಮಹಿಳೆ ತನ್ನ ಹತ್ತು ವರ್ಷದ ಮಗನೊಂದಿಗೆ ಎಂಟು ವರ್ಷಗಳ ಹಿಂದೆ ವಿಚ್ಛೇದನ ಪಡೆದು ಒಂಟಿಯಾಗಿ ವಾಸಿಸುತ್ತಿದ್ದರು. ಒಂದೂವರೆ ವರ್ಷದ ಹಿಂದೆ, ಆಕೆ ಬೋರಖಡಿ ಗ್ರಾಮದ ನಿವಾಸಿ ನೀರವ್ ಚೌಧರಿ ಎಂಬಾತನನ್ನು ಪ್ರೀತಿಸುತ್ತಿದ್ದಳು. ಕಳೆದ ಒಂದು ವಾರದಿಂದ ಇಬ್ಬರೂ ವ್ಯಾರಾ ಪಟ್ಟಣದ ಬಾಡಿಗೆ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಪೊಲೀಸ್ ದೂರಿನ ಪ್ರಕಾರ, ಇವರಿಬ್ಬರ ಗೆಳತನ, ಒಟ್ಟಿಗೆ ವಾಸಿಸುವ ಬಗ್ಗೆ ಚೌಧರಿ ಅವರ ಪೋಷಕರು ಮತ್ತು ಸಂಬಂಧಿಕರು ಕೋಪಗೊಂಡಿದ್ದರು. ಕಳೆದ ಬುಧವಾರ ಮಧ್ಯಾಹ್ನ, ಮಹಿಳೆ ಹತ್ತಿರದ ಬುಹಾರಿ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಚೌಧರಿ ಅವರ ಪೋಷಕರು ಹಾಗೂ ಸಂಬಂಧಿಕರು ಆಕೆಯನ್ನು ಅಪಹರಿಸಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಚೌಧರಿಯ ತಾಯಿ ಮಹಿಳೆಯ ಕೂದಲು ಕತ್ತರಿಸುವುದರ ಜೊತೆ ಆಕೆಯನ್ನು ಅರೆಬೆತ್ತಲೆಗೊಳಿಸಿ ನಡುರಸ್ತೆಯಲ್ಲಿ ಬಿಟ್ಟಿದ್ದಾರೆ. ತಮ್ಮ ಮಗನ ಜೊತೆ ಇನ್ನು ಮುಂದೆ ಕಾಣಿಸಿಕೊಂಡರೆ ಪ್ರಾಣ ತೆಗೆಯುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ದೇವರು ಆತನಿಗೆ ಮರುಜನ್ಮ ನೀಡಿದ್ದಾನೆ’: ಪ್ರಾಣ ಉಳಿಸಿದ ನಂತರ ವಿಡಿಯೋ ಪೋಸ್ಟ್ ಮಾಡಿದ ಶಮಿ

ನಡುರಸ್ತೆಯಲ್ಲಿ ನಿಂತಿದ್ದ ಸಂತ್ರಸ್ತ ಮಹಿಳೆ ತನಗಾದ ದೌರ್ಜನ್ಯವನ್ನು ದೂರವಾಣಿ ಮೂಲಕ ಪೋಷಕರಿಗೆ ತಿಳಿಸಿದ್ದಾರೆ. ಆಕೆಯ ಪೋಷಕರು ಸ್ಥಳಕ್ಕಾಗಮಿಸಿ ಮನೆಗೆ ಕರೆದುಕೊಂಡು ಹೋಗಿದ್ದಾರೆ. ನಂತರ ಸಂತ್ರಸ್ತೆ ವ್ಯಾರಾ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ಪೊಲೀಸರು ಚೌಧರಿ ಅವರ ಪೋಷಕರ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಹಲ್ಲೆ, ಮಹಿಳೆಯರ ಮಾನಹಾನಿ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಪ್ರಕರಣವನ್ನು ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ ಅಸ್ತ್ರ!

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ...

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಹಾವಳಿ; 19 ಮಂದಿ ಬಲಿ, 3 ಸಾವಿರ ಬಾಟಲಿ ವಶ

ಕಳ್ಳಭಟ್ಟಿ ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಾಗಾಲ್ಯಾಂಡ್‌ನಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ತನಿಖೆಗೆ ಸುಪ್ರೀಂನಲ್ಲಿ ಅರ್ಜಿ; ಆಯೋಗದ ಡೇಟಾಬೇಸ್‌ ಆಡಿಟ್‌ಗೆ ಮನವಿ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧದ ಆರೋಪಗಳ ತನಿಖೆಗೆ...