ರಾಸಾಯನಿಕ ಘಟಕ ಒಂದರಲ್ಲಿ ವಿಷಕಾರಿ ಅನಿಲ ಸೇವಿಸಿ ಸುಮಾರು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಗುಜರಾತ್‌ನ ಭರೂಚ್ ಜಿಲ್ಲೆಯ ದಹೇಜ್‌ನಲ್ಲಿ ನಡೆದಿದೆ.
ಶನಿವಾರ ರಾತ್ರಿ 10 ಗಂಟೆಗೆ ಗುಜರಾತ್ ಫ್ಲೋರೋಕೆಮಿಕಲ್ಸ್ ಲಿಮಿಟೆಡ್ (ಜಿಎಫ್‌ಎಲ್) ಉತ್ಪಾದನಾ ಘಟಕದಲ್ಲಿ ಪೈಪ್‌ನಿಂದ ವಿಷಕಾರಿ ಅನಿಲ ಸೋರಿಕೆಯಾಗಿದೆ. ಈ ಅನಿಲ ಉಸಿರಾಡಿದ ಕಾರ್ಮಿಕರು ಪ್ರಜ್ಞಾಹೀನರಾದರು ಎಂದು ದಹೇಜ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಬಿಎಂ ಪಾಟಿದಾರ್ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಅಚ್ಛೇ ದಿನಗಳು ಮುಗಿದವು! ಗುಜರಾತ್ ವಜ್ರಗಳ ಉದ್ಯಮ ಭಾರೀ ಹಿಂಜರಿತದಲ್ಲಿ ತತ್ತರ!
ನಾಲ್ವರು ಕಾರ್ಮಿಕರನ್ನು ಭರೂಚ್‌ನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಅವರಲ್ಲಿ ಮೂವರು ಭಾನುವಾರ ಮುಂಜಾನೆ 3 ಗಂಟೆಗೆ ಮೃತಪಟ್ಟರೆ, ಇನ್ನೊಬ್ಬರು ಬೆಳಿಗ್ಗೆ 6 ಗಂಟೆಗೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
“ಕಂಪನಿಯ ಸಿಎಂಎಸ್ ಸ್ಥಾವರದ ನೆಲ ಅಂತಸ್ತಿನ ಮೂಲಕ ಹಾದುಹೋಗುವ ಪೈಪ್‌ನಲ್ಲಿ ಅನಿಲ ಸೋರಿಕೆಯಿಂದಾಗಿ ನಾಲ್ವರು ಕಾರ್ಮಿಕರು ಪ್ರಜ್ಞಾಹೀನರಾಗಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ನಾಲ್ವರು ಸಾವನ್ನಪ್ಪಿದರು” ಎಂದು ಹೇಳಿದರು.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
