ಗುಜರಾತ್ | ವಿಷಕಾರಿ ಅನಿಲ ಸೇವನೆ; ನಾಲ್ವರು ಕಾರ್ಮಿಕರ ಸಾವು

Date:

ರಾಸಾಯನಿಕ ಘಟಕ ಒಂದರಲ್ಲಿ ವಿಷಕಾರಿ ಅನಿಲ ಸೇವಿಸಿ ಸುಮಾರು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಗುಜರಾತ್‌ನ ಭರೂಚ್ ಜಿಲ್ಲೆಯ ದಹೇಜ್‌ನಲ್ಲಿ ನಡೆದಿದೆ.

- Advertisement -

ಶನಿವಾರ ರಾತ್ರಿ 10 ಗಂಟೆಗೆ ಗುಜರಾತ್ ಫ್ಲೋರೋಕೆಮಿಕಲ್ಸ್ ಲಿಮಿಟೆಡ್ (ಜಿಎಫ್‌ಎಲ್) ಉತ್ಪಾದನಾ ಘಟಕದಲ್ಲಿ ಪೈಪ್‌ನಿಂದ ವಿಷಕಾರಿ ಅನಿಲ ಸೋರಿಕೆಯಾಗಿದೆ. ಈ ಅನಿಲ ಉಸಿರಾಡಿದ ಕಾರ್ಮಿಕರು ಪ್ರಜ್ಞಾಹೀನರಾದರು ಎಂದು ದಹೇಜ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಬಿಎಂ ಪಾಟಿದಾರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಅಚ್ಛೇ ದಿನಗಳು ಮುಗಿದವು! ಗುಜರಾತ್ ವಜ್ರಗಳ ಉದ್ಯಮ ಭಾರೀ ಹಿಂಜರಿತದಲ್ಲಿ ತತ್ತರ!

ನಾಲ್ವರು ಕಾರ್ಮಿಕರನ್ನು ಭರೂಚ್‌ನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಅವರಲ್ಲಿ ಮೂವರು ಭಾನುವಾರ ಮುಂಜಾನೆ 3 ಗಂಟೆಗೆ ಮೃತಪಟ್ಟರೆ, ಇನ್ನೊಬ್ಬರು ಬೆಳಿಗ್ಗೆ 6 ಗಂಟೆಗೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

“ಕಂಪನಿಯ ಸಿಎಂಎಸ್ ಸ್ಥಾವರದ ನೆಲ ಅಂತಸ್ತಿನ ಮೂಲಕ ಹಾದುಹೋಗುವ ಪೈಪ್‌ನಲ್ಲಿ ಅನಿಲ ಸೋರಿಕೆಯಿಂದಾಗಿ ನಾಲ್ವರು ಕಾರ್ಮಿಕರು ಪ್ರಜ್ಞಾಹೀನರಾಗಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ನಾಲ್ವರು ಸಾವನ್ನಪ್ಪಿದರು” ಎಂದು ಹೇಳಿದರು.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...