ಗುಜರಾತ್ | 4 ವರ್ಷದ ಮಗುವಿನ ಅಪಹರಣ, ಕೊಲೆ; ಪೊಲೀಸ್ ಎನ್‌ಕೌಂಟರ್‌ನಲ್ಲಿ ಆರೋಪಿ ಸಾವು

Date:

ರೈಲ್ವೆ ನಿಲ್ದಾಣದಲ್ಲಿ ನಾಲ್ಕು ವರ್ಷದ ಮಗುವನ್ನು ಅಪಹರಿಸಿ, ಕೊಲೆ ಮಾಡಿದ (ಅತ್ಯಾಚಾರ ಶಂಕೆ) ಪ್ರಮುಖ ಆರೋಪಿ ಸುರೇಶ್ ಪರ್ಮಾರ್ ಎಂಬಾತನನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಕೊಂದಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ.

- Advertisement -

ಗುಜರಾತ್‌ನ ಆನಂದ್ ಜಿಲ್ಲೆಯ ವಾಸದ್ ರೈಲು ನಿಲ್ದಾಣದಲ್ಲಿ ಬಡ ಕುಟುಂಬಕ್ಕೆ ಸೇರಿದ ನಾಲ್ಕು ವರ್ಷದ ಮಗು ಪೋಷಕರೊಂದಿಗೆ ತಂಗಿತ್ತು. ಕೆಲವೇ ದಿನಗಳ ಹಿಂದೆ ಇಲ್ಲಿಗೆ ಬಂದಿದ್ದ ಈ ಕುಟುಂಬ ಪ್ಲಾಸ್ಟಿಕ್ ಮತ್ತು ತ್ಯಾಜ್ಯ ಆಯ್ದು ಜೀವನ ಸಾಗಿಸುತ್ತಿತ್ತು. ಮಗು ದಿಢೀರನೆ ನಾಪತ್ತೆಯಾಗಿದ್ದು, ನಂತರ ಮಗುವಿನ ಶವ ಪತ್ತೆಯಾಗಿತ್ತು. ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ನಿಜಾಂಶ ತಿಳಿಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಆರೋಪಿಯನ್ನು ಬಂಧಿಸಿದ್ದ ಬೋರ್ಸದ್ ಗ್ರಾಮೀಣ ಪೊಲೀಸರು, ಹೆಚ್ಚಿನ ತನಿಖೆಗಾಗಿ ಆತನನ್ನು ಆನಂದ್ ಲೋಕಲ್ ಕ್ರೈಮ್ ಬ್ರಾಂಚ್ (LCB) ವಶಕ್ಕೆ ನೀಡಿದ್ದರು. ಆರೋಪಿಯನ್ನು ವಾಹನದಲ್ಲಿ ಕರೆದೊಯ್ಯುವಾಗ ಆತ ತನಗೆ ವಾಂತಿಯಾಗುತ್ತಿದೆ ಎಂದು ಹೇಳಿದ್ದರಿಂದ ಪೊಲೀಸರು ವಾಹನವನ್ನು ರಸ್ತೆ ಬದಿ ನಿಲ್ಲಿಸಿದ್ದರು ಎಂದು ಹೇಳಲಾಗಿದೆ.

ವಾಹನದಿಂದ ಕೆಳಗಿಳಿಯುತ್ತಿದ್ದಂತೆ ಆರೋಪಿ ಸುರೇಶ್, ಪೊಲೀಸರ ಮೇಲೆಯೇ ಚಾಕುವಿನಿಂದ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ದಾಳಿಯಲ್ಲಿ ರಾಜ್‌ವೀರ್ ಸಿಂಗ್ ಮತ್ತು ಮಹಿಪಾಲ್ ಸಿಂಗ್ ಎಂಬ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿಕೊಂಡಿದ್ದಾರೆ.

ಆಯುಧವನ್ನು ಕೆಳಗೆ ಹಾಕುವಂತೆ ಸಬ್-ಇನ್‌ಸ್ಪೆಕ್ಟರ್ ರಾಣಾ ಅವರು ನೀಡಿದ ಎಚ್ಚರಿಕೆಯನ್ನು ನಿರ್ಲಕ್ಷಿಸಿ ಆರೋಪಿ ದಾಳಿ ಮುಂದುವರಿಸಿದಾಗ, ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಆರೋಪಿಯನ್ನು ತುರ್ತು ಚಿಕಿತ್ಸೆಗೆ ದಾಖಲಿಸಲಾಯಿತಾದರೂ, ಆತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ವಾದಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...