ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದು ಕನಿಷ್ಠ ಆರು ಜನರು ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ಬೆಳಗ್ಗೆ ಗುಜರಾತ್‌ನ ಆನಂದ್‌ನ ಅಹಮದಾಬಾದ್-ವಡೋದರಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. ಈ ಬಗ್ಗೆ ಆನಂದ್ ಎಸ್‌ಪಿ ಗೌರವ್ ಜಸಾನಿ ಮಾಹಿತಿ ನೀಡಿದ್ದಾರೆ.
ಆನಂದ್ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ನೀಡಿರುವ ಮಾಹಿತಿ ಪ್ರಕಾರ ಆನಂದ್ ಜಿಲ್ಲೆಯ ಚಿಖೋದ್ರಾ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಿಗ್ಗೆ 4.30ರ ಸುಮಾರಿಗೆ ಈ ಘಟನೆ ನಡೆದಿದೆ.
ಅಹಮದಾಬಾದ್ ಕಡೆಗೆ ತೆರಳುತ್ತಿದ್ದ ಖಾಸಗಿ ಐಷಾರಾಮಿ ಬಸ್ ಟೈರ್ ಒಡೆದ ಕಾರಣ ರಸ್ತೆ ಬದಿ ನಿಂತಿತ್ತು. ಟೈರ್ ಬದಲಾಯಿಸುತ್ತಿದ್ದಂತೆಯೇ ಪ್ರಯಾಣಿಕರು ಬಸ್‌ನಿಂದ ಕೆಳಗಿಳಿದಿದ್ದು, ಕೆಲವರು ವಾಹನದ ಮುಂದೆ ನಿಂತಿದ್ದಾಗ ವೇಗವಾಗಿ ಬಂದ ಟ್ರಕ್ ಹಿಂದಿನಿಂದ ಬಸ್‌ಗೆ ಡಿಕ್ಕಿ ಹೊಡೆದಿದೆ.
#UPDATE | Gujarat: At least six people died and eight were injured after a bus collided with a truck on the Ahmedabad-Vadodra Express Highway in Anand, earlier today: Gaurav Jasani, SP Anand https://t.co/TviMCwsmaS
— ANI (@ANI) July 15, 2024
ಈ ಅಪಘಾತದಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಬಸ್ ಚಾಲಕ ಕೂಡ ಸೇರಿದ್ದಾರೆ.
ಇದನ್ನು ಓದಿದ್ದೀರಾ? ‘ಕಣ್ಣು ರಸ್ತೆಯ ಮೇಲಿರಲಿ’: ರೀಲ್ಸ್ ಮಾಡುತ್ತಾ ಅಪಘಾತಕ್ಕೀಡಾದ ಯುವಕರ ವಿಡಿಯೋ ಹಂಚಿಕೊಂಡ ಪೊಲೀಸರು
ಮೃತರ ಪೈಕಿ ಮೂವರು ಮಹಿಳೆಯರು ಮತ್ತು ಮೂವರು ಪುರುಷರಾಗಿದ್ದಾರೆ. ಅವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.