ರೈತರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ‘ನೇಪಾಳ ಶೈಲಿ’ ಆಂದೋಲನ; ಗುಜರಾತ್ ಸರ್ಕಾರಕ್ಕೆ ಕಾಂಗ್ರೆಸ್‌ ಎಚ್ಚರಿಕೆ

Date:

ರೈತರ ಬೇಡಿಕೆಗಳು ಈಡೇರದಿದ್ದರೆ ಸಾಮೂಹಿಕ ಆಂದೋಲನ ಮತ್ತು ‘ನೇಪಾಳವಾಲಿ’ (ನೇಪಾಳದಲ್ಲಿ ನಡೆದಂತೆ) ಶೈಲಿಯ ದಂಗೆ ಎದುರಾಗುತ್ತದೆ ಎಂದು ಗುಜರಾತ್‌ ಸರ್ಕಾರಕ್ಕೆ ಅಲ್ಲಿನ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಮಿತ್ ಚಾವ್ಡಾ ಎಚ್ಚರಿಕೆ ನೀಡಿದ್ದಾರೆ. ರೈತರ ಬೇಡಿಕೆ ಈಡೇರಿಸಲು ಭೂಪೇಂದ್ರ ಪಟೇಲ್ ನೇತೃತ್ವದ ಸರ್ಕಾರಕ್ಕೆ ಎರಡು ತಿಂಗಳ ಗಡುವು ನೀಡಿದ್ದಾರೆ.

- Advertisement -

ರಾಜ್‌ಕೋಟ್‌ನಲ್ಲಿ ನಡೆದ ‘ಜನ ಆಕ್ರೋಶ್ ಸಭಾ’ ಸಮಾವೇಶದಲ್ಲಿ ಮಾತನಾಡಿದ ಚಾವ್ಡಾ, ಬಿಜೆಪಿ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. “ಸರ್ಕಾರವು ಭ್ರಷ್ಟಾಚಾರ, ದುರಹಂಕಾರ ಹಾಗೂ ರೈತರ ನೋವಿನ ಬಗ್ಗೆ ಅಸಡ್ಡೆಯಿಂದ ವರ್ತಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಸರ್ಕಾರ ಎರಡು ತಿಂಗಳೊಳಗೆ ರೈತರ ಕುಂದುಕೊರತೆಗಳನ್ನು ಪರಿಹರಿಸಬೇಕು. ವಿಫಲವಾದರೆ, ಗಾಂಧಿನಗರದ ವಿಧಾನಸಭೆಯನ್ನು ಸುತ್ತುವರಿಯಲು ಗುಜರಾತ್‌ನ ಎಲ್ಲ ಭಾಗಗಳ ಗ್ರಾಮೀಣ ಜನರನ್ನು ಕಾಂಗ್ರೆಸ್‌ ಸಜ್ಜುಗೊಳಿಸಲಿದೆ. ನ್ಯಾಯ ಸಿಗುವವರೆಗೆ ನಿರಂತರ ಆಂದೋಲನ ಪ್ರಾರಂಭಿಸಲಿದೆ” ಎಂದು ಘೋಷಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ನಿತೀಶ್ ಕುಮಾರ್ ಮತ್ತು ಬಿಜೆಪಿಯ ಸ್ವಯಂ ಸೋಲು

“ಸರ್ಕಾರ ರೈತರ ಹಿತಾಸಕ್ತಿಗಾಗಿ ಕೆಲಸ ಮಾಡದಿದ್ದರೆ, ನಾವು ರೈತರಿಗಾಗಿ ಹೋರಾಟ ನಡೆಸುತ್ತೇವೆ. ಸಾರ್ವಜನಿಕ ಕೋಪವು ಹೆಚ್ಚಾಗುತ್ತಿದೆ. ಈಗಲಾದರೂ, ಸರ್ಕಾರ ಎಚ್ಚೆತ್ತುಕೊಂಡು, ಕೆಲಸ ಮಾಡಬೇಕು. ಇಲ್ಲವಾದಲ್ಲಿ, ನಾವು ‘ನೇಪಾಳವಾಲಿ’ ಶೈಲಿಯ ಆಂದೋಲನ ಮಾಡುತ್ತೇವೆ. ನಿಮ್ಮ ಸಿಂಹಾಸನ ಉಳಿಯುವುದಿಲ್ಲ” ಎಂದು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

“ಅಕಾಲಿಕ ಮಳೆ ನಷ್ಟ, ಪರಿಹಾರದ ಕೊರತೆ ಹಾಗೂ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಸರಿಯಾದ ನೆರವು ದೊರೆಯದೆ ರೈತರು ಹೈರಾಣಾಗಿದ್ದಾರೆ. ಬೆಳೆಗಳಿಗೆ ನ್ಯಾಯಯುತ ಬೆಲೆಗಳು, ತಕ್ಷಣದ ಪರಿಹಾರ ಪ್ಯಾಕೇಜ್‌ಗಳು ಹಾಗೂ ಸಂತ್ರಸ್ತ ರೈತರಿಗೆ ಸಕಾಲಿಕ ನೆರವು ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...