ಗುಜರಾತ್ | ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆ; ಬಡತನ ಶಂಕೆ

Date:

ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನ ಬಾವ್ಲಾ ತಾಲೂಕಿನಲ್ಲಿ ನಡೆದಿದೆ.

- Advertisement -

ಮೃತರನ್ನು ಬಾಗೋದರಾ ಬಸ್ ನಿಲ್ದಾಣದ ಬಳಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ರಿಕ್ಷಾ ಚಾಲಕ ವಿಪುಲ್ ಕಾಂಜಿ ವಾಘೇಲಾ (34), ಅವರ ಪತ್ನಿ ಸೋನಾಲ್ (26), ಮಕ್ಕಳಾದ ಕರೀನಾ ಅಲಿ ಸಿಮ್ರಾನ್ (11), ಮಯೂರ (5) ಮತ್ತು ರಾಜ್‌ಕುಮಾರ್ (8) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಕುಟುಂಬದವರು ಮೂಲತಃ ಧೋಲ್ಕಾದ ಬಾರ್ಕೋಥಾದ ದೇವಿಪೂಜಕ್ ವಾಸ್ ಪ್ರದೇಶದವರಾಗಿದ್ದು, ಸ್ವಲ್ಪ ಸಮಯ ಹಿಂದೆ ಬಾಗೋದ್ರಾಗೆ ಬಂದು ನೆಲೆಸಿದ್ದರು. ವಿಪುಲ್ ಅವರು ಆಟೋ ಓಡಿಸಿ, ಬಂದ ಹಣದಲ್ಲಿ ಜೀವನವನ್ನು ಸಾಗಿಸುತ್ತಿದ್ದರು. ವಿಫುಲ್, ಶನಿವಾರ ತಡರಾತ್ರಿ ಮೂವರು ಮಕ್ಕಳು ಹಾಗೂ ಪತ್ನಿಯೊಂದಿಗೆ ವಿಷ ಸೇವಿಸಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮ: ಪೊಲೀಸ್ ಇಲಾಖೆಯ ಮಾದರಿ ಹೆಜ್ಜೆ

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದು, ಆರ್ಥಿಕ ಸಮಸ್ಯೆಯಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಿದ್ದಾರೆ.

ವಿಪುಲ್ ಕಾಂಜಿ ವಾಘೇಲಾ ಅವರು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಸಾಲ ಮಾಡಿ ಆಟೋ ರಿಕ್ಷವನ್ನು ಖರೀದಿಸಿದ್ದರು. ಕುಟುಂಬಕ್ಕೆ ಇವರೊಬ್ಬರೆ ಆಧಾರಸ್ತಂಭವಾಗಿದ್ದರು. ಪ್ರತಿ ತಿಂಗಳು ಇಎಂಐ ಮೂಲಕ ಸಾಲ ತೀರಿಸಲು ಕಷ್ಟಪಡುತ್ತಿದ್ದರು. ಆರ್ಥಿಕ ಸಂಕಷ್ಟದಿಂದಾದ ನಿತ್ಯವೂ ಒದ್ದಾಡುತ್ತಿದ್ದರು. ಇದೇ ಕಾರಣದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಂಬಂಧಿಕರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...