ಗುಜರಾತ್ | ಪೇಟ ಮತ್ತು ಸನ್ ಗ್ಲಾಸ್ ಧರಿಸಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ

Date:

ದೇಶಾದ್ಯಂತ ಜಾತಿ ದೌರ್ಜ್ಯನದ ಘಟನೆಗಳು ಹೆಚ್ಚುತ್ತಲೇ ಇವೆ. ಇತ್ತೀಚಿನ ಘಟನೆಯೊಂದರಲ್ಲಿ, ಪೇಟ ಮತ್ತು ಸನ್‌ ಗ್ಲಾಸ್‌ ಧರಿಸಿ, ಇನ್‌ಸ್ಟಾಗ್ರಾಂನಲ್ಲಿ ಫೋಟೋ ಅಪ್‌ಲೋಡ್‌ ಮಾಡಿದ್ದಕ್ಕೆ ದಲಿತ ಯುವಕನ ಮೇಲೆ ಪ್ರಬಲ ಜಾತಿಯ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ.

- Advertisement -

ಗುಜರಾತ್‌ನ ಸಬರ್‌ಕಾಂತ ಜಿಲ್ಲೆಯ ಸಯೆಬಾಪುರ ಗ್ರಾಮದಲ್ಲಿ ಜುಲೈ 17ರಂದು ಘಟನೆ ನಡೆದಿದೆ. ಹಲ್ಲೆಗೊಳಗಾದ ದಲಿತ ಯುವಕ ಅಜಯ್ ಪರ್ಮಾರ್ ಅವರು ಹಿಮಂತ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಪ್ರಬಲ ಜಾತಿಯ ಕ್ಷತ್ರಿಯರೆಂದು ಪರಿಗಣಿಸುವ ದರ್ಬಾರ್ ಸಮುದಾಯಕ್ಕೆ ಸೇರಿದ ನಾಲ್ವರು ತನ್ನನ್ನ ಥಳಿಸಿದ್ದಾರೆ. ಆರೋಪಿಗಳನ್ನು ನನ್ನನ್ನು ನವನಗರ ಬಸ್ ನಿಲ್ದಾಣದ ಬಳಿ, ಸುತ್ತುವರೆದು ದಾಳಿ ನಡೆಸಿದ್ದಾರೆ. ‘ದರ್ಬಾರ್ ಸಮುದಾಯದ ಜನರು ಮಾತ್ರ ಸಫಾ ಮತ್ತು ಸನ್‌ ಗ್ಲಾಸ್‌ ಧರಿಸಬೇಕು. ಬೇರೆ ಯಾರೂ ಅವುಗಳನ್ನು ಧರಿಸಬಾರದು’ ಎಂದು ಆರೋಪಿಗಳು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ಪರ್ಮಾರ್ ಆರೋಪಿಸಿದ್ದಾರೆ.

ಎಫ್‌ಐಆರ್‌ನಲ್ಲಿ ನಾಲ್ವರು ಆರೋಪಿಗಳನ್ನು ಹೆಸರಿಸಲಾಗಿದೆ – ಕಿರ್ಪಾಲ್‌ಸಿನ್ಹ್ ರಾಥೋಡ್, ಮನುಸಿನ್ ರಾಥೋಡ್ ಮತ್ತು ಅವರ ಪುತ್ರರಾದ ಹಿತೇಂದ್ರಸಿನ್ಹ್ ರಾಥೋಡ್ ಮತ್ತು ಶುಕಲ್‌ಸಿನ್ಹ್ ರಾಥೋಡ್ ಹಲ್ಲೆಗೈದಿರುವ ಆರೋಪಿಗಳು.

ಗುಜರಾತ್‌ನಲ್ಲಿ ಸನ್ ಗ್ಲಾಸ್ ಧರಿಸಿದ್ದಕ್ಕಾಗಿ ದಲಿತನೊಬ್ಬನನ್ನು ಥಳಿಸಿರುವುದು ಇದೇ ಮೊದಲಲ್ಲ. 2023ರ ಜೂನ್‌ನಲ್ಲಿ, ಪಾಲಂಪುರದ ಮೋಟಾ ಗ್ರಾಮದಲ್ಲಿ 21 ವರ್ಷ ವಯಸ್ಸಿನ ದಲಿತ ಯುವಕ ಮತ್ತು ಆತನ ಕುಟುಂಬದ ಮೇಲೆ ಪ್ರಬಲ ಜಾತಿ ರಜಪೂತ ಸಮುದಾಯದ ಗುಂಪೊಂದು ಸನ್‌ ಗ್ಲಾಸ್‌ ಮತ್ತು ಒಳ್ಳೆಯ ಬಟ್ಟೆ ಧರಿಸಿದ್ದಕ್ಕಾಗಿ ಹಲ್ಲೆ ಮಾಡಿತ್ತು.

2023ರ ನವೆಂಬರ್‌ನಲ್ಲಿ 21 ವರ್ಷದ ದಲಿತ ಯುವಕ ತನ್ನ ಉದ್ಯೋಗದಾತನ ಬಳಿ ತನ್ನ ಸಂಬಳ ಕೇಳಿದ್ದಕ್ಕಾಗಿ ಹಲ್ಲೆ ನಡೆಸಲಾಗಿತ್ತು. ಈ ವರ್ಷದ ಫೆಬ್ರವರಿಯಲ್ಲಿ, ಗಾಂಧಿನಗರ ಜಿಲ್ಲೆಯಲ್ಲಿ ವಧುವಿನ ಮನೆಗೆ ಕುದುರೆ ಮೇಲೆ ಸವಾರಿ ಮೂಲಕ ತೆರಳಿದ್ದಕ್ಕೆ, ದಲಿತ ವರನ ಮೇಲೆ ನಾಲ್ವರು ವ್ಯಕ್ತಿಗಳು ಹಲ್ಲೆ ನಡೆಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...