ಗುಜರಾತ್‌ | ಐದು ವರ್ಷಗಳಲ್ಲಿ ₹13,600 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ; 5,300 ಮಂದಿ ಬಂಧನ

Date:

ಗುಜರಾತ್ ಪೊಲೀಸರು ಇತ್ತೀಚೆಗೆ ವರದಿಯೊಂದನ್ನು ಹಂಚಿಕೊಂಡಿದ್ದಾರೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ರಾಜ್ಯ ಪೊಲೀಸರು ಬರೋಬ್ಬರಿ 13,600 ಕೋಟಿ ರೂ. ಮೌಲ್ಯದ 1.36 ಲಕ್ಷ ಕೆ.ಜಿ.ಯಷ್ಟು ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಅಲ್ಲದೆ, ಈ ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ 3,700 ಪ್ರಕರಣಗಳು ದಾಖಲಾಗಿದ್ದು, 5,300ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಜಪ್ತಿ ಮತ್ತು ಬಂಧನವು ಗುಜರಾತ್‌ನಲ್ಲಿ ಭಾರೀ ಪ್ರಮಾಣದ ಮಾದಕ ವಸ್ತು ಜಾಲವು ಚಾಲ್ತಿಯಲ್ಲಿದೆ ಎಂಬುದನ್ನು ಸೂಚಿಸಿದೆ.

- Advertisement -

ಈ ಕಾರ್ಯಾಚರಣೆಯ ಕುರಿತು ವಿವರಣೆ ನೀಡಿರುವ ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ್ ಸಂಘವಿ, “ಸರ್ಕಾರದ ಕಠಿಣ ಕ್ರಮವು ಮಾದಕ ವಸ್ತುಗಳ ಮಾರಾಟ ಜಾಲದಲ್ಲಿ ತೊಡಗಿರುವವರಲ್ಲಿ ತೀವ್ರ ಭೀತಿಯನ್ನು ಹುಟ್ಟಿಸಿದೆ. ಮಾದಕ ದ್ರವ್ಯಗಳನ್ನು ಇತರ ರಾಜ್ಯಗಳಿಗೆ ಸಾಗಿಸಲು ಗುಜರಾತ್ ಅನ್ನು ಒಂದು ಮಾರ್ಗವಾಗಿ ಬಳಸಿಕೊಳ್ಳಲು ಕಳ್ಳಸಾಗಣೆದಾರರು ಹೆದರುತ್ತಿದ್ದಾರೆ. ನಮ್ಮ ತನಿಖಾ ಸಂಸ್ಥೆಗಳು ಮಾದಕ ದ್ರವ್ಯ ಸರಬರಾಜು ಜಾಲದ ಪ್ರತಿಯೊಂದು ಕೊಂಡಿಯನ್ನು ಕಳಚುತ್ತಿವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಜಿ.ಎಸ್. ಮಲಿಕ್ ಹೇಳುವಂತೆ; “ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಡ್ರಗ್ಸ್ ವಶಪಡಿಸಿಕೊಂಡಿರುವುದು ರಾಜ್ಯದ ಡ್ರಗ್‌ ವಿರೋಧಿ ಕಾರ್ಯಾಚರಣೆಯ ಪ್ರಯತ್ನಗಳಲ್ಲಿ ಒಂದಾಗಿದೆ. ನಮ್ಮ ಕಾರ್ಯಾಚರಣೆಗಳ ಮೂಲಕ ನಾವು ಸಾವಿರಾರು ಪ್ರಕರಣಗಳನ್ನು ದಾಖಲಿಸಿ, ಸಾವಿರಾರು ಆರೋಪಿಗಳನ್ನು ಬಂಧಿಸಿದ್ದೇವೆ. ಇದರ ಪರಿಣಾಮವಾಗಿ ಹಲವು ಅಂತರರಾಷ್ಟ್ರೀಯ ಡ್ರಗ್ಸ್ ಕಳ್ಳಸಾಗಣೆ ಜಾಲಗಳ ಬೆನ್ನುಮೂಳೆಯೇ ಮುರಿದುಹೋಗಿದೆ” ಎಂದು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...