ಒತ್ತುವರಿ ಆರೋಪ: ಮಾಜಿ ಕ್ರಿಕೆಟಿಗ, ಟಿಎಂಸಿ ಸಂಸದ ಯೂಸುಫ್ ಪಠಾಣ್‌ಗೆ ನೋಟಿಸ್

Date:

ಗುಜರಾತ್‌ನ ಬಿಜೆಪಿ ಆಡಳಿತವಿರುವ ವಡೋದರ ಮಹಾನಗರ ಪಾಲಿಕೆ(ವಿಎಂಸಿ) ಮಾಜಿ ಟೀಂ ಇಂಡಿಯಾ ಕ್ರಿಕೆಟಿಗ ಹಾಗೂ ನೂತನವಾಗಿ ಪಶ್ಚಿಮ ಬಂಗಾಳದಿಂದ ಆಯ್ಕೆಯಾಗಿರುವ ಸಂಸದ ಯೂಸುಫ್‌ ಪಠಾಣ್‌ ಅವರಿಗೆ ಪಾಲಿಕೆಗೆ ಸೇರಿದ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಆರೋಪದ ಮೇಲೆ ನೋಟಿಸ್ ನೀಡಿದೆ.

ಬಿಜೆಪಿಯ ಮಾಜಿ ಪಾಲಿಕೆ ಸದಸ್ಯರಾದ ವಿಜಯ್‌ ಪವಾರ್‌ ದೂರಿನ ಮೇರೆಗೆ ವಿಎಂಸಿಯ ಸ್ಥಾಯಿ ಸ್ಥಮಿತಿ ಅಧ್ಯಕ್ಷರಾದ ಶೀತಲ್‌ ಮಿಸ್ತ್ರಿ ಅವರು ಜೂನ್‌ 6 ರಂದು ನೋಟಿಸ್‌ ಜಾರಿಗೊಳಿಸಿದ್ದಾರೆ.

“ನಮಗೆ ಯೂಸುಫ್ ಪಠಾಣ್ ಅವರ ಮೇಲೆ ಯಾವುದೇ ದ್ವೇಷವಿಲ್ಲ. ಮಾಜಿ ಕ್ರಿಕೆಟಿಗರ ಬಳಿಯಿರುವ ಜಾಗ ವಿಎಂಸಿ ವ್ಯಾಪ್ತಿಗೆ ಸೇರಿದೆ. ಒತ್ತುವರಿ ಮಾಡಿಕೊಂಡಿರುವ ವಿಎಂಸಿಯ ಜಾಗವನ್ನು 2012ರಲ್ಲಿ ನಿರ್ಮಾಣ ಕಾಮಗಾರಿ ಪ್ರಯುಕ್ತ ತಮಗೆ ನೀಡುವಂತೆ ಪ್ರತಿ ಚದುರ ಮೀಟರ್‌ಗೆ 57 ಸಾವಿರ ರೂ. ನೀಡುವುದಾಗಿ ತಿಳಿಸಿದ್ದರು. ಆದರೆ ವಿಎಂಸಿ ಆಡಳಿತ ಮಂಡಳಿ ಅನುಮತಿ ನೀಡಿದ್ದರೂ ರಾಜ್ಯ ಸರ್ಕಾರ ಅನುಮತಿ ನೀಡಿರಲಿಲ್ಲ” ಎಂದು ವಿಜಯ್‌ ಪವಾರ್‌ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?

ಒತ್ತುವರಿ ಜಾಗಕ್ಕೆ ಯೂಸುಫ್‌ ಪಠಾಣ್‌ ತಂತಿ ಬೇಲಿಯನ್ನು ಅಳವಡಿಸಿಕೊಂಡಿದ್ದು, ಪಾಲಿಕೆರ ಅಧಿಕಾರಿಗಳ ತನಿಖೆ ವೇಳೆ ತಿಳಿದುಬಂದಿದೆ. ನಂತರದಲ್ಲಿ ನೋಟಿಸ್‌ ಜಾರಿಗೊಳಿಸಲಾಗಿದೆ ಎಂದು ಪವಾರ್‌ ತಿಳಿಸಿದ್ದಾರೆ.

“ಜಾಗ ತೆರವುಗೊಳಿಸಲು ನೋಟಿಸ್‌ ಜಾರಿಗೊಳಿಸಿದ್ದು, ಕೆಲವು ವಾರಗಳ ಕಾಲ ನಾವು ಕಾಯುತ್ತೇವೆ. ಜಾಗವನ್ನು ಬಿಡದಿದ್ದಲ್ಲಿ ಮುಂದಿನ ಕ್ರಮ ಜರುಗಿಸುವ ಬಗ್ಗೆ ನಿರ್ಧರಿಸಲಾಗುತ್ತದೆ” ಎಂದು ಶೀತಲ್‌ ಮಿಸ್ತ್ರಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಅನಾರೋಗ್ಯದಿಂದ ತಮಟೆ ಬಾರಿಸದ ವ್ಯಕ್ತಿ; ದಲಿತ ಕುಟುಂಬಗಳಿಗೆ ಗ್ರಾಮದಿಂದ ಬಹಿಷ್ಕಾರ!

ದಲಿತ ಸಮುದಾಯದ ವ್ಯಕ್ತಿಯೊಬ್ಬರು ಅನಾರೋಗ್ಯದ ಕಾರಣ ದೇವಸ್ಥಾನದಲ್ಲಿ ತಮಟೆ ಬಾರಿಸಲು ಬರದ...

ವಿವಾದಾತ್ಮಕ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಬಂಧನ

ಪಿಸ್ತೂಲ್‌ ಹಿಡಿದು ರೈತರಿಗೆ ಬೆದರಿಸಿದ ಆರೋಪದ ಮೇಲೆ ವಿವಾದಾತ್ಮಕ ಐಎಎಸ್ ಅಧಿಕಾರಿ...

ಆಂಧ್ರ ಪ್ರದೇಶ | ಜನನಿಬಿಡ ಮುಖ್ಯ ರಸ್ತೆಯಲ್ಲೇ ವೈಎಸ್‌ಆರ್‌ಸಿಪಿ ಯುವ ಮುಖಂಡನ ಬರ್ಬರ ಹತ್ಯೆ

ವೈಎಸ್‌ಆರ್‌ಸಿಪಿಯ ಯುವ ಮುಖಂಡನೊಬ್ಬನನ್ನು ಜನನಿಬಿಡ ರಸ್ತೆಯಲ್ಲೇ ಮಾರಕಾಸ್ತ್ರದಿಂದ ಕಡಿದು ಬರ್ಬರವಾಗಿ ಕೊಲೆ...