ಗುಜರಾತ್ | ಕಾರ್ಖಾನೆಯಲ್ಲಿ ಅನಿಲ ಸೋರಿಕೆ; 28 ಕಾರ್ಮಿಕರು ಆಸ್ಪತ್ರೆಗೆ ದಾಖಲು

Date:

Advertisements

ಗುಜರಾತ್‌ನ ಭರೂಚ್ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಬುಧವಾರ ವಿಷಕಾರಿ ಅನಿಲ ಸೋರಿಕೆಯಾಗಿದ್ದು, 28 ಮಂದಿ ಕಾರ್ಮಿಕರು ಉಸಿರಾಟದ ಸಮಸ್ಯೆಗೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೇದಾಜ್ ಗ್ರಾಮದಲ್ಲಿರುವ ಪಿ.ಐ ರಾಸಾಯನಿಕ ಕಾರ್ಖಾನೆಯಲ್ಲಿ ಬುಧವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಅನಿಲ ಸೋರಿಕೆ ಕಂಡುಬಂದಿದೆ. ಕಾರ್ಖಾನೆಯಲ್ಲಿ ಸುಮಾರು 2,000 ಕಾರ್ಮಿಕರು ಇದ್ದರು. ಎಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

“ಕಾರ್ಖಾನೆಯ ಟ್ಯಾಂಕ್‌ನಿಂದ ಬ್ರೋಮಿನ್ ಅನಿಲ ಸೋರಿಕೆಯಾಗಿದೆ. ಇದರಿಂದಾಗಿ 28 ಕಾರ್ಮಿಕರು ಉಸಿರಾಟ ಸಮಸ್ಯೆಗೆ ತುತ್ತಾಗಿದ್ದರು. ಅವರೆಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ವೇದಾಚ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ವೈಶಾಲಿ ಅಹಿರ್ ಹೇಳಿದ್ದಾರೆ.

ಟ್ಯಾಂಕ್ ಬಳಿ ಇದ್ದ ಕಾರ್ಮಿಕರು ತಮಗೆ ಆರೋಗ್ಯ ಸಮಸ್ಯೆ ಕಂಡುಬರುತ್ತಿದೆ ಎಂದು ಮೇಲಧಿಕಾರಿಗಳಿಗೆ ಹೇಳಿಕೊಂಡಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋರಿಕೆಯನ್ನು ನಿಯಂತ್ರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

Download Eedina App Android / iOS

X