ಮೋದಿ ಉಪನಾಮ ಪ್ರಕರಣ | ರಾಹುಲ್‌ಗೆ ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಣೆ

Date:

ಮೋದಿ ಉಪನಾಮ ಪ್ರಕರಣದಲ್ಲಿ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯವರಿಗೆ ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದೆ. ಅಲ್ಲದೆ ನ್ಯಾಯಾಲಯವು ತನ್ನ ತೀರ್ಪನ್ನು ಬೇಸಿಗೆ ರಜೆಯ ನಂತರ ಪ್ರಕಟಿಸಲು ಕಾಯ್ದಿರಿಸಿದೆ.

ರಾಹುಲ್ ಗಾಂಧಿ ಅವರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಅವರು ಕೋರಿದ ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಹೇಮಂತ್ ಎಂ ಪ್ರಚ್ಚಕ್ ಅವರ ನ್ಯಾಯಪೀಠವು, ಯಾವುದೇ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿತು. ರಾಹುಲ್‌ ಅವರಿಗೆ ಶಿಕ್ಷೆಗೆ ತಡೆಯಾಜ್ಞೆ ನೀಡಬೇಕೆ ಎಂಬ ನಿರ್ಧಾರವನ್ನು ಗುಜರಾತ್ ಹೈಕೋರ್ಟ್ ಬೇಸಿಗೆ ರಜೆ ನಂತರ ನೀಡುವುದಾಗಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ?: ಮಾನ ಹಾನಿ ಪ್ರಕರಣ | ಶಿಕ್ಷೆಗೆ ತಡೆ ಕೋರಿದ್ದ ರಾಹುಲ್‌ ಗಾಂಧಿ ಅರ್ಜಿ ತಿರಸ್ಕರಿಸಿದ ಸೂರತ್‌ ನ್ಯಾಯಾಲಯ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದೂರುದಾರ ಪೂರ್ಣೇಶ್ ಮೋದಿ ಪರ ಹಿರಿಯ ವಕೀಲ ನಿರುಪಮ್ ನನ್ವತಿ ಹಾಗೂ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ನ್ಯಾಯಮೂರ್ತಿ ಹೇಮಂತ್ ಎಂ ಪ್ರಚ್ಚಕ್ ಅವರ ಪೀಠದ ಮುಂದೆ ವಾದಿಸಿದ ನಂತರ ಆಪಾದಿತನ ಅಪರಾಧವು ನೈತಿಕ ದೌರ್ಬಲ್ಯದ ಅಂಶವನ್ನು ಒಳಗೊಂಡಿಲ್ಲ ಎಂದು ತೀರ್ಪನ್ನು ಕಾಯ್ದಿರಿಸಲಾಯಿತು.

ರಾಹುಲ್‌ ಪರ ವಕೀಲರಾದ ಅಭಿಷೇಕ್ ಸಿಂಘ್ವಿ, ಪ್ರಕರಣವು ಗುರುತಿಸಬಹುದಾದ, ಜಾಮೀನು ನೀಡಬಹುದಾದ ಮತ್ತು ಗಂಭೀರವಲ್ಲದ ಅಪರಾಧ. ಆದ್ದರಿಂದ ಶಿಕ್ಷೆಯನ್ನು ಅಮಾನತುಗೊಳಿಸಬೇಕು. ಹೆಚ್ಚು ಗಂಭೀರವಾದ ಅಪರಾಧಗಳಿಗೆ ಸಂಬಂಧಿಸಿದ ಅನೇಕ ಪ್ರಕರಣಗಳಲ್ಲಿ ನ್ಯಾಯಾಲಯಗಳು ಶಿಕ್ಷೆಗೆ ತಡೆ ನೀಡಿವೆ ಎಂದು ವಾದಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಪ್ರಧಾನಿ ಮೋದಿಗೆ ಗುಜರಾತ್‌ನಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಓಕೆ, ಇತರೆಡೆ ಮಾತ್ರ ಬೇಡ’

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ....

ಬಿಜೆಪಿ ನಾಯಕರು ಖಿನ್ನತೆಗೆ ಒಳಗಾಗಿದ್ದಾರೆ ಎಂದ ತೇಜಸ್ವಿ ಯಾದವ್!

ಬಿಹಾರದ ಎರಡನೇ ಹಂತದ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ನಾಯಕರು ಖಿನ್ನತೆಗೆ...

ಹಾಸನ ಪೆನ್‌ಡ್ರೈವ್ ಪ್ರಕರಣ: ಜರ್ಮನಿಗೆ ತೆರಳಿರುವ ಸಂಸದ ಪ್ರಜ್ವಲ್ ರೇವಣ್ಣ?

ಹಾಸನದ ಅಶ್ಲೀಲ ವೀಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಶನಿವಾರ...