ಕೋರ್ಟ್‌ನಲ್ಲಿ ನ್ಯಾಯಾಧೀಶೆಯನ್ನು ನಿಂದಿಸಿದ ನ್ಯಾಯಾಧೀಶ; 2 ದಿನಗಳ ಬಳಿಕ ಕ್ಷಮೆಯಾಚಿಸಿದ ಜಡ್ಜ್‌

Date:

ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯವಿದ್ದ ಕಾರಣ ಹಿರಿಯ ನ್ಯಾಯಾಧೀಶರೊಬ್ಬರು ತಮ್ಮ ಸಹೋದ್ಯೋಗಿ ನ್ಯಾಯಾಧೀಶೆಯನ್ನು ನಿಂದಿಸಿರುವ ಘಟನೆ ಗುಜರಾತ್‌ ಹೈಕೋರ್ಟ್‌ನಲ್ಲಿ ನಡೆದಿದೆ. ನಿಂದನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಎರಡು ದಿನಗಳ ಬಳಿಕ ಕ್ಷಮೆಯಾಚಿಸಿದ್ದಾರೆ.

- Advertisement -

ಹೈಕೋರ್ಟ್‌ ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರು ತಮ್ಮ ಸಹೋದ್ಯೋಗಿಯನ್ನು ಸೋಮವಾರ ನ್ಯಾಯಾಲಯದಲ್ಲಿ ನಿಂದಿಸಿದ್ದರು. ಘಟನೆ ಸಂಬಂಧ ಬುಧವಾರ ವಿಷಾಧ ವ್ಯಕ್ತಪಡಿಸಿದ್ದು, ನ್ಯಾಯಾಧೀಶೆ ಬಳಿ ಕ್ಷಮೆ ಕೇಳಿದ್ದಾರೆ. (ದಸರಾ ನಿಮಿತ್ತ ಮಂಗಳವಾರ ರಜೆ ಇತ್ತು)

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಸೋಮವಾರ ಪ್ರಕರಣವೊಂದರ ಸಂಬಂಧ ನ್ಯಾಯಮೂರ್ತಿ ವೈಷ್ಣವ್ ಅವರು ನ್ಯಾಯಾಧೀಶೆ ಮೌನಾ ಭಟ್ ಅವರೊಂದಿಗೆ ತೀವ್ರ ಮಾತಿನ ಚಕಮಕಿ ನಡೆಸಿದ್ದರು. ಪ್ರಕರಣದ ಆದೇಶ ನೀಡುವಾಗ ಭಟ್ ಅವರು ವೈಷ್ಣವ್ ಅವರ ನಿಲುವನ್ನು ಒಪ್ಪಿರಲಿಲ್ಲ. ಆ ಕಾರಣಕ್ಕೆ ಅವರ ಮೇಲೆ ನಿಂದನಾತ್ಮಕವಾಗಿ ಮಾತನಾಡಿದ್ದರು.

“ಸೋಮವಾರ ನಡೆದದ್ದು ಆಗಬಾರದಿತ್ತು. ನಾನು ತಪ್ಪು ಮಾಡಿದೆ. ಅದಕ್ಕಾಗಿ ಕ್ಷಮಿಸಿ.  ನಾವು ಹೊಸ ವಿಚಾರಣೆಗಳನ್ನು ಪ್ರಾರಂಭಿಸೋಣ” ಎಂದು ನ್ಯಾಯಮೂರ್ತಿ ವೈಷ್ಣವ್ ಅವರು ನ್ಯಾಯಮೂರ್ತಿ ಮೌನ ಭಟ್ ಅವರ ಎದುರು ಕ್ಷಮೆ ಕೇಳಿದ್ದಾರೆ.

ನ್ಯಾಯಮೂರ್ತಿಗಳಾದ ವೈಷ್ಣವ್ ಮತ್ತು ಭಟ್ ಅವರ ನಡುವಿನ ಮಾತಿನ ಚಕಮಕಿ ನಡೆದಿದ್ದ ವಿಡಿಯೋವನ್ನು ಗುಜರಾತ್ ಹೈಕೋರ್ಟ್‌ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಿಂದ ತೆಗೆದುಹಾಕಲಾಗಿದೆ, ಘಟನೆಗೆ ಸಂಬಂಧಿಸಿದ ವೈರಲ್‌ ವಿಡಿಯೋದಲ್ಲಿ ನ್ಯಾಯಮೂರ್ತಿ ಭಟ್ ಅವರು ನ್ಯಾಯಮೂರ್ತಿ ವೈಷ್ಣವ್‌ಗೆ ಏನೋ ಹೇಳುತ್ತಿರುವುದು ಕಾಣಿಸುತ್ತದೆ.

ಈ ವೇಳೆ ನ್ಯಾಯಮೂರ್ತಿ ವೈಷ್ಣವ್, “ಹಾಗಾದರೆ ನೀವು ಭಿನ್ನಾಭಿಪ್ರಾಯ ಹೊಂದಿದ್ದೀರಿ… ನಾವು ಒಂದು ವಿಚಾರದಲ್ಲಿ ಭಿನ್ನವಾಗಿದ್ದೇವೆ ಇನ್ನೊಂದರಲ್ಲಿಯೂ ಭಿನ್ನವಾಗಿರಬಹುದು” ಎಂದು ಸಿಟ್ಟಿನಿಂದ ಹೇಳಿದ್ದಾರೆ. ಆಗ ನ್ಯಾಯಮೂರ್ತಿ ಭಟ್, ‘ಇದು ಭಿನ್ನಾಭಿಪ್ರಾಯದ ಪ್ರಶ್ನೆಯಲ್ಲ’ ಎಂದರು. ಇದಕ್ಕೆ ನ್ಯಾಯಮೂರ್ತಿ ವೈಷ್ಣವ್, “ಹಾಗಾದರೆ ಗೊಣಗಬೇಡಿ, ನೀವು ಪ್ರತ್ಯೇಕ ಆದೇಶ ನೀಡಿ, ನಾವು ಬೇರೆ ವಿಷಯಗಳನ್ನು ತೆಗೆದುಕೊಳ್ಳುತ್ತಿಲ್ಲ” ಎಂದು ಹೇಳಿರುವುದು ಕಂಡುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...