ಗುಜರಾತ್‌ನಲ್ಲಿ ಭಾರಿ ಮಳೆ | ತುಂಬಿದ ಒಂಬತ್ತು ಅಣೆಕಟ್ಟುಗಳು: 1,000ಕ್ಕೂ ಹೆಚ್ಚು ಜನರ ಸ್ಥಳಾಂತರ

Date:

ಗುಜರಾತ್‌ನಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು, ಒಂಬತ್ತು ಅಣೆಕಟ್ಟುಗಳು ತುಂಬಿದೆ. 27 ಜಿಲ್ಲೆಗಳ 160 ತಾಲೂಕುಗಳಲ್ಲಿ ಸರಾಸರಿ 21.24 ಮಿಮೀ ಮಳೆಯಾಗಿದೆ. ಆದರೆ 91 ತಾಲೂಕುಗಳು ಸಂಪೂರ್ಣವಾಗಿ ಬತ್ತಿಹೋಗಿವೆ. ಅಣೆಕಟ್ಟುಗಳಲ್ಲಿ ಅಪಾಯಕಾರಿಯಾಗಿ ನೀರಿನ ಮಟ್ಟ ಏರುತ್ತಿರುವ ಕಾರಣ 15 ಅಣೆಕಟ್ಟುಗಳ ಸಮೀಪ ಹೈ ಅಲರ್ಟ್‌ ಘೋಷಿಸಲಾಗಿದೆ. ಈಗಾಗಲೇ 22ಕ್ಕೂ ಅಧಿಕ ಮಂದಿ ಭಾರಿ ಮಳೆಗೆ ಬಲಿಯಾಗಿದ್ದಾರೆ.

- Advertisement -

ಮುನ್ನೆಚ್ಚರಿಕೆಯಾಗಿ, 1,060 ಜನರನ್ನು ಸ್ಥಳಾಂತರಿಸಲಾಗಿದೆ. ಭಾವನಗರದಲ್ಲಿ 729, ಸುರೇಂದ್ರನಗರದಲ್ಲಿ 134, ಬೋಟಾಡ್‌ನಲ್ಲಿ 117 ಮತ್ತು ಅಮ್ರೇಲಿಯಲ್ಲಿ 80 ಜನರನ್ನು ಸ್ಥಳಾಂತರಿಸಲಾಗಿದೆ. ಬೋಟಾಡ್‌ನಲ್ಲಿ 24, ಭಾವನಗರದಲ್ಲಿ 89 ಮತ್ತು ಅಮ್ರೇಲಿಯಲ್ಲಿ 69- ಹೀಗೆ ವಿಪತ್ತು ನಿರ್ವಹಣಾ ತಂಡಗಳು 182 ಜನರನ್ನು ರಕ್ಷಿಸಿವೆ. ಎನ್‌ಡಿಆರ್‌ಎಫ್‌ನ 13 ಮತ್ತು ಎಸ್‌ಡಿಆರ್‌ಎಫ್‌ನ 20 ಸೇರಿದಂತೆ 33 ತಂಡಗಳನ್ನು ನಿಯೋಜಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಗುಜರಾತ್ | ಭಾರೀ ಮಳೆ; ಚಂಡಮಾರುತದ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಗುಜರಾತ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ತೀವ್ರ ಮುಂಗಾರು ಮಳೆಯಾಗಿದ್ದು ಪ್ರವಾಹದ ಎಚ್ಚರಿಕೆ ನೀಡಲಾಗಿದೆ. 206 ಅಣೆಕಟ್ಟುಗಳಲ್ಲಿ, ಒಂಬತ್ತು ಅಣೆಕಟ್ಟುಗಳು ತುಂಬಿವೆ. 15 ಅಣೆಕಟ್ಟುಗಳು ಹೈ ಅಲರ್ಟ್‌ನಲ್ಲಿದೆ. ಸರ್ದಾರ್ ಸರೋವರ್ ಅಣೆಕಟ್ಟು ನಿರಂತರವಾಗಿ ತುಂಬುತ್ತಿದೆ. ಗಂಟೆಗೆ 16,914 ಕ್ಯೂಸೆಕ್ ನೀರಿನ ಒಳಹರಿವು ಇದ್ದು, ನರ್ಮದಾ ಕಾಲುವೆಗೆ 23,844 ಕ್ಯೂಸೆಕ್‌ಗಳನ್ನು ಬಿಡಲಾಗುತ್ತಿದೆ. ಪ್ರಸ್ತುತ ನೀರಿನ ಮಟ್ಟವು 392.22 ಅಡಿಗಳಷ್ಟಿದೆ.

ಜೊತೆಗೆ ವಿದ್ಯುತ್ ಸಮಸ್ಯೆಯೂ ಎದುರಾಗಿದೆ. 13,285 ಗ್ರಾಮಗಳಲ್ಲಿ ವಿದ್ಯುತ್ ಸಮಸ್ಯೆಯಾಗಿದ್ದು, ಈ ಪೈಕಿ 13,209 ಗ್ರಾಮಗಳಲ್ಲಿ ಸಮಸ್ಯೆ ಪರಿಹರಿಸಲಾಗಿದೆ. 17,005 ಹಾನಿಗೊಳಗಾದ ವಿದ್ಯುತ್ ಕಂಬಗಳಲ್ಲಿ 16,031 ದುರಸ್ತಿ ಮಾಡಲಾಗಿದೆ. ಆದರೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವೇ ಇಲ್ಲದಂತಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...