ಗುಜರಾತ್ | ಭ್ರಷ್ಟ ಅಧಿಕಾರಿ ಮೇಲೆ ಹಣ ಎಸೆದು ಜನರ ಆಕ್ರೋಶ; ವಿಡಿಯೋ ವೈರಲ್

Date:

ಲಂಚ ಕೊಡುವುದು ಮತ್ತು ತೆಗೆದುಕೊಳ್ಳುವುದು ಎರಡೂ ಕೂಡ ಅಪರಾಧ. ಭ್ರಷ್ಟಾಚಾರದ ಮೂಲವೇ ಲಂಚ. ಭ್ರಷ್ಟಾಚಾರ ನಿರ್ಮೂಲನೆಗಾಗಿ ಕಾನೂನುಗಳು ಜಾರಿಯಲ್ಲಿದ್ದರೂ, ಲಂಚದ ಹಾವಳಿ ಎಲ್ಲೆಡೆ ಜೀವಂತವಾಗಿದೆ. ಇತ್ತೀಚೆಗೆ, ಸರ್ಕಾರಿ ಸೇವೆಗಳನ್ನು ಒದಗಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಯ ಮೇಲೆ ಜನರು ಹಣವನ್ನು ಎಸೆದು, ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

ಸರ್ಕಾರಿ ಕಚೇರಿಗೆ ನುಗ್ಗಿದ್ದ ಜನರ ಗುಂಪು ಅಧಿಕಾರಯೊಬ್ಬರ ಮೇಲೆ ಹಣದ ನೋಟುಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ವೈರಲ್ ಆಗಿರುವ ವಿಡಿಯೋದಲ್ಲಿ, ಸರ್ಕಾರಿ ಅಧಿಕಾರಿ ಕೈಗಳನ್ನು ಮಡಚಿಕೊಂಡು ಕುರ್ಚಿಯ ಮೇಲೆ ಕುಳಿತಿದ್ದಾರೆ. ಅವರ ಮೇಲೆ ಜನರು ನೋಟುಗಳನ್ನು ಎಸೆಯುತ್ತ, ಗುಜರಾತಿ ಭಾಷೆಯನ್ನು ಬೈಯುತ್ತಿರುವ, ಘೋಷಣೆ ಕೂಗುತ್ತಿರುವುದು ಕಂಡುಬಂದಿದೆ. ಅಧಿಕಾರಿಯ ಮೇಲೆ ನೋಟುಗಳನ್ನು ಎಸೆದು ತಮ್ಮ ಕೋಪ ಮತ್ತು ಹತಾಶೆಯನ್ನು ವ್ಯಕ್ತಪಡಿಸಿದ್ದಾರೆ.

ವಿಡಿಯೋವನ್ನು ಹಂಚಿಕೊಂಡಿರುವ ನೆಟ್ಟಿಗರು, “ಭ್ರಷ್ಟಾಚಾರದ ಕ್ಯಾನ್ಸರ್ ಈಗ ಸಾಂಕ್ರಾಮಿಕ ರೋಗದಂತೆ ಹರಡಿದೆ. ಈ ಕ್ಯಾನ್ಸರ್ಅನ್ನು ತೊಡೆದುಹಾಕುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದರು. ಆದರೆ, ಭ್ರಷ್ಟಾಚಾರವನ್ನು ತಡೆಯಲು ಅವರು ಏನನ್ನೂ ಮಾಡಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ತೆಗೆದುಕೊಳ್ಳಿ. ನೀವು ಎಷ್ಟು ಲಂಚದ ಹಣ ತಿನ್ನುತ್ತೀರಿ? ಸಾರ್ವಜನಿಕರು ನಿಮಗೆ ತಕ್ಕ ಪಾಠ ಕಲಿಸಿದ್ದಾರೆ. ಸಾರ್ವನಿಕರು ಸೇವೆಗಳನ್ನು ಪಡೆಯಲು ಅವರು ಎಷ್ಟು ಲಂಚ ನೀಡುತ್ತಿದ್ದರು? ಈ ಅಧಿಕಾರಿಗಳು ಲಂಚವನ್ನು ತಮ್ಮ ಮೇಲಧಿಕಾರಿಗಳಿಗೂ ನೀಡುತ್ತಿರಬೇಕು?ಇದನ್ನು ಪತ್ತೆ ಹಚ್ಚುವುದು ಮುಖ್ಯ” ಎಂದು ನೆಟ್ಟಿಗರು ಹೇಳಿದ್ದಾರೆ.

“ಭಾರತದಲ್ಲಿ, ಬಿಜೆಪಿ ಅಥವಾ ಬಿಜೆಪಿಯೇತರ ಸರ್ಕಾರ, ಸರ್ಕಾರಿ ನೌಕರರು, ಪಿಯೋನ್‌ಗಳಿಂದ ಹಿಡಿದು ಉನ್ನತ ಐಎಎಸ್ ಅಧಿಕಾರಿಗಳವರೆಗೆ ಎಲ್ಲರೂ ಭ್ರಷ್ಟರಾಗಿದ್ದಾರೆ. ಅವರ ಆದಾಯ, ಆಸ್ತಿ ವೇಗವಾಗಿ ಬೆಳೆಯುತ್ತಿದೆ” ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...