ಗುಜರಾತ್ ರಾಜ್ಯಸಭಾ ಚುನಾವಣೆ; ‘ಸೊನ್ನೆ’ ಸುತ್ತಲಿದೆ ಕಾಂಗ್ರೆಸ್‌!

Date:

ಜೂನ್ 18ರಂದು ಗುಜರಾತ್‌ನ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅಲ್ಲಿನ ಅಧಿಕಾರರೂಢ ಬಿಜೆಪಿ ಭರ್ಜರಿ ಜಯ ಸಾಧಿಸುವ ನಿರೀಕ್ಷೆಯಿದೆ. 182 ಸದಸ್ಯರ ಗುಜರಾತ್ ವಿಧಾನಸಭೆಯಲ್ಲಿ 161 ಶಾಸರನ್ನು ಹೊಂದಿರುವ ಬಿಜೆಪಿ, ಎಲ್ಲ ನಾಲ್ಕು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಇದೇ ವೇಳೆ, ಕೇವಲ 12 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಯಾವುದೇ ಸ್ಥಾನವನ್ನು ಗೆಲ್ಲಲು ಅಗತ್ಯವಿರುವ ಸಂಖ್ಯಾಬಲವನ್ನು ಹೊಂದಿಲ್ಲ. ಆದ್ದರಿಂದ, ಇತಿಹಾಸದಲ್ಲೇ ಮೊದಲ ಬಾರಿಗೆ ಮೇಲ್ಮನೆಯಲ್ಲಿ ಗುಜರಾತ್‌ನಿಂದ ಕಾಂಗ್ರೆಸ್ ಪ್ರಾತಿನಿಧ್ಯ ಶೂನ್ಯಕ್ಕೆ ಇಳಿಯಲಿದೆ.

- Advertisement -

ಗುಜರಾತ್ ಒಟ್ಟು 11 ರಾಜ್ಯಸಭಾ ಸ್ಥಾನಗಳನ್ನು ಹೊಂದಿದ್ದು, ಪ್ರಸ್ತುತ ಅವುಗಳಲ್ಲಿ 10 ಸ್ಥಾನಗಳು ಬಿಜೆಪಿ ಹಾಗೂ ಒಂದು ಸ್ಥಾನ ಕಾಂಗ್ರೆಸ್‌ ಬಳಿ ಇದೆ. ಶಕ್ತಿಸಿನ್ಹ ಗೋಹಿಲ್ ಅವರು ಗುಜರಾತ್‌ನಿಂದ ಆಯ್ಕೆಯಾಗಿರುವ ಕಾಂಗ್ರೆಸ್‌ನ ಏಕೈಕ ರಾಜ್ಯಸಭಾ ಸದಸ್ಯ. ಜೂನ್ 21ರಂದು ಗೋಹಿಲ್ ಮತ್ತು ಬಿಜೆಪಿಯ ರಾಂಬಾಯಿ ಮೊಕರಿಯಾ, ನರಹರಿ ಅಮಿನ್ ಹಾಗೂ ರಮಿಲಾಬೆನ್ ಬಾರಾ ಅವರ ಅವಧಿ ಮುಕ್ತಾಯಗೊಳ್ಳಲಿದೆ. ಈ ನಾಲ್ವರೂ 2020ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಗುಜರಾತ್‌ನ ಇತರ ಏಳು ಬಿಜೆಪಿ ರಾಜ್ಯಸಭಾ ಸದಸ್ಯರಲ್ಲಿ ಕೇಂದ್ರ ಸಚಿವರಾದ ಎಸ್. ಜೈಶಂಕರ್ ಮತ್ತು ಜೆ. ಪಿ. ನಡ್ಡಾ ಸೇರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಚುನಾವಣಾ ಆಯೋಗವು ಜೂನ್ 1ರಂದು ಈ ನಾಲ್ಕು ಸ್ಥಾನಗಳ ಚುನಾವಣೆಗೆ ಅಧಿಸೂಚನೆ ಹೊರಡಿಸಿದೆ. ನಾಮಪತ್ರ ಸಲ್ಲಿಕೆಗೆ ಜೂನ್ 8 ಕೊನೆಯ ದಿನವಾಗಿದೆ. ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ರಾಜ್ಯಸಭಾ ಚುನಾವಣೆಯ ನಿಯಮಗಳಂತೆ ಎಲ್ಲ ಸದಸ್ಯರು ಹಾಜರಿದ್ದು ಮತ ಚಲಾಯಿಸಿದರೆ, ಗುಜರಾತ್‌ನಲ್ಲಿ ಸ್ಪರ್ಧಿಸುವ ಪ್ರತಿಯೊಬ್ಬ ಅಭ್ಯರ್ಥಿಗೆ ಕನಿಷ್ಠ 46 ಶಾಸಕರ ಬೆಂಬಲದ ಅಗತ್ಯವಿರುತ್ತದೆ. ಅಲ್ಲದೆ, ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರತಿ ಅಭ್ಯರ್ಥಿಗೆ ಕನಿಷ್ಠ 10 ಶಾಸಕರ ಬೆಂಬಲವಿರಬೇಕು. ಸದ್ಯ  ಕಾಂಗ್ರೆಸ್‌ನಲ್ಲಿ ಒಬ್ಬ ಅಭ್ಯರ್ಥಿಯನ್ನು ಪ್ರಸ್ತಾಪಿಸಲು ಬೇಕಿರುವಷ್ಟು ಶಾಸಕರಿದ್ದಾರೆ. ಆದಾಗ್ಯೂ, ಗೆಲುವಿಗೆ ಬೇಕಿರುವಷ್ಟು ಶಾಸಕರ ಬಲವಿಲ್ಲ. ಆದ್ದರಿಂದ, ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತದೆಯೇ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಸ್ತುತ ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್ ತನ್ನ ಸಾರ್ವಕಾಲಿಕ ಕನಿಷ್ಠ ಸಂಖ್ಯೆಯಾದ 12 ಶಾಸಕರನ್ನು ಹೊಂದಿದೆ. ಎಎಪಿ 5 ಮತ್ತು ಸಮಾಜವಾದಿ ಪಾರ್ಟಿ (SP) ಓರ್ವ ಶಾಸಕರನ್ನು ಹೊಂದಿವೆ. ಸದನದಲ್ಲಿ ಇಬ್ಬರು ಪಕ್ಷೇತರ ಶಾಸಕರಿದ್ದು, ಇಬ್ಬರೂ ಆಡಳಿತಾರೂಢ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಆದ್ದರಿಂದ, ಕಾಂಗ್ರೆಸ್‌, ಎಎಪಿ ಹಾಗೂ ಎಸ್‌ಐ ಮೂರೂ ಪಕ್ಷಗಳು ಒಗ್ಗೂಡಿದರೂ, ಅಗತ್ಯವಿರುವ 46 ಮತಗಳು ದೊರೆಯುವುದಿಲ್ಲ.

ಈ ಲೇಖನ ಓದಿದ್ದೀರಾ?: ಬಂಗಾರ ಸಾಮ್ರಾಜ್ಯ ಪತನ: ರಾಜೇಶ್ ಎಕ್ಸ್‌ಪೋರ್ಟ್ಸ್‌ನ 15.15 ಲಕ್ಷ ಕೋಟಿ ರೂ. ಮಹಾ ಹಗರಣ

ಹಿರಿಯ ಬಿಜೆಪಿ ನಾಯಕರೊಬ್ಬರು ಮಾತನಾಡಿ, “ನಾವು ಈ ಚುನಾವಣೆಯಲ್ಲಿ ಸಂಪೂರ್ಣ ಜಯ ಸಾಧಿಸಲಿದ್ದೇವೆ. ಆದರೆ, ಅದಕ್ಕಿಂತ ಮುಖ್ಯವಾಗಿ, ರಾಜ್ಯಸಭೆಯಲ್ಲಿ ಗುಜರಾತ್‌ನಿಂದ ಕಾಂಗ್ರೆಸ್ ಪ್ರಾತಿನಿಧ್ಯ ಮೊದಲ ಬಾರಿಗೆ ಶೂನ್ಯವಾಗಲಿದೆ. ನಾವು ಈ ಹಿಂದೆ 2014 ಮತ್ತು 2019 ರಲ್ಲಿ ಎರಡು ಬಾರಿ ಎಲ್ಲ 26 ಲೋಕಸಭಾ ಸ್ಥಾನಗಳನ್ನು ಗೆದ್ದಿದ್ದೆವು. ಕಾಂಗ್ರೆಸ್ ಬಳಿ ಗೆಲ್ಲಲು ಸಂಖ್ಯಾಬಲವಿಲ್ಲದ ಕಾರಣ ಅವರು ಯಾರನ್ನೂ ಕಣಕ್ಕಿಳಿಸುವುದಿಲ್ಲ ಎಂದು ಭಾವಿಸುತ್ತೇನೆ” ಎಂದಿದ್ದಾರೆ.

ಬಿಜೆಪಿ ಈಗಾಗಲೇ ತನ್ನ ನಾಲ್ಕು ಅಭ್ಯರ್ಥಿಗಳಾಗಿ ರಾಜು ಶುಕ್ಲಾ, ಮಾನ್‌ಸಿನ್ಹ್ ಪರ್ಮಾರ್, ಮುಕೇಶ್ ರಾಥ್ವಾ ಹಾಗೂ ಜಿತೇಂದ್ರ ಕಂಝಾರಿಯಾ ಅವರ ಹೆಸರನ್ನು ಘೋಷಿಸಿದೆ.

“ನಮ್ಮ ಬಳಿ ಸಂಖ್ಯಾಬಲವಿಲ್ಲ ಎಂಬುದು ನಿಜ. ಆದರೆ, ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೇ ಬೇಡವೇ ಎಂಬ ಬಗ್ಗೆ ಇದುವರೆಗೆ ಯಾವುದೇ ನಿರ್ಧಾರವಾಗಿಲ್ಲ” ಎಂದು ಗುಜರಾತ್ ಕಾಂಗ್ರೆಸ್ ವಕ್ತಾರ ಮನೀಶ್ ದೋಷಿ ಹೇಳಿದ್ದಾರೆ.

“ಪಕ್ಷದಲ್ಲಿ ಈ ಬಗ್ಗೆ ಇನ್ನು ಯಾವುದೇ ಚರ್ಚೆ ನಡೆದಿಲ್ಲ. ನಮ್ಮಲ್ಲಿ ಅಗತ್ಯ ಸಂಖ್ಯೆ ಇಲ್ಲದ ಕಾರಣ ಯಾರನ್ನೂ ಕಣಕ್ಕಿಳಿಸದಿರಲು ಪಕ್ಷ ನಿರ್ಧರಿಸುವ ಸಾಧ್ಯತೆಯಿದೆ” ಎಂದು ಮತ್ತೊಬ್ಬ ಹಿರಿಯ ಕಾಂಗ್ರೆಸ್ ಪದಾಧಿಕಾರಿ ಹೇಳಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...