ಗುಜರಾತ್‌ನ ಪೋರಬಂದರ್‌ನಲ್ಲಿ ಭಾನುವಾರ ಭಾರತೀಯ ಕೋಸ್ಟ್ ಗಾರ್ಡ್ (ಕರಾವಳಿ ಪಡೆ) ಹೆಲಿಕಾಪ್ಟರ್ ಪತನಗೊಂಡಿದೆ. ಆ ಹೆಲಿಕಾಪ್ಟರ್‌ನಲ್ಲಿದ್ದ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಹೆಲಿಕಾಪ್ಟರ್ ಅನ್ನು ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (ಎಎಲ್‌ಎಚ್) ಧ್ರುವ್ ಎಂದು ಗುರುತಿಸಲಾಗಿದೆ. ಎಎಲ್‌ಎಚ್ ಧ್ರುವ್ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಅಭಿವೃದ್ಧಿಪಡಿಸಿದ ಹೆಲಿಕಾಪ್ಟರ್ ಆಗಿದೆ.
ಇದನ್ನು ಓದಿದ್ದೀರಾ? ಖಜಕಿಸ್ತಾನ | 72 ಪ್ರಯಾಣಿಕರಿದ್ದ ವಿಮಾನ ಪತನ; ಬದುಕುಳಿದ 12 ಮಂದಿ
ಮಿಲಿಟರಿ ಮತ್ತು ನಾಗರಿಕ ವಲಯಗಳ ಅಗತ್ಯತೆಗಳನ್ನು ಪೂರೈಸಲು ಈ ಹೆಲಿಕಾಪ್ಟರ್ ಅನ್ನು ವಿನ್ಯಾಸಗೊಳಿಸಲಾಗಿದೆ. ಎಎಲ್‌ಎಚ್ ಧ್ರುವ್ 2002ರಿಂದ ಸೇವೆಯಲ್ಲಿದೆ.
ಸಾರಿಗೆ, ಹುಡುಕಾಟ, ರಕ್ಷಣೆ, ವೈದ್ಯಕೀಯ ಸ್ಥಳಾಂತರಿಸುವಿಕೆ, ಜಲಾಂತರ್ಗಾಮಿ ವಿರೋಧಿ ಯುದ್ಧ ಸೇರಿದಂತೆ ಹಲವು ಕಾರ್ಯಗಳಿಗೆ ಈ ಹೆಲಿಕಾಪ್ಟರ್ ಬಳಸಲಾಗುತ್ತಿದೆ. ಸೇನೆ, ನೌಕಾಪಡೆ ಮತ್ತು ವಾಯುಸೇನೆ ಸೇರಿದಂತೆ ಭಾರತೀಯ ಸಶಸ್ತ್ರ ಪಡೆಗಳಲ್ಲಿ ಅಧಿಕವಾಗಿ ಈ ಹೆಲಿಕಾಪ್ಟರ್ ಬಳಸಲಾಗುತ್ತಿದೆ ಎಂದು ವರದಿಯಾಗಿದೆ.
VIDEO | A Coast Guard chopper crashed at Porbandar Airport killing three. More details are awaited.
— Press Trust of India (@PTI_News) January 5, 2025
(Source: Third party)
(Full video available on PTI Videos- https://t.co/dv5TRAShcC) pic.twitter.com/v7e4G7W1Yk
ಈಗಾಗಲೇ ಈ ಹೆಲಿಕಾಪ್ಟರ್ ಅನ್ನು ನೇಪಾಳ, ಮಾರಿಷಸ್ ಮತ್ತು ಮಾಲ್ಡೀವ್ಸ್ ಸೇರಿದಂತೆ ಹಲವು ದೇಶಗಳಿಗೆ ರಫ್ತು ಮಾಡಲಾಗಿದೆ.
