ಗುಜರಾತ್ | ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರ ಸಾವು

Date:

ಗುಜರಾತ್‌ನ ಪೋರಬಂದರ್‌ನಲ್ಲಿ ಭಾನುವಾರ ಭಾರತೀಯ ಕೋಸ್ಟ್ ಗಾರ್ಡ್ (ಕರಾವಳಿ ಪಡೆ) ಹೆಲಿಕಾಪ್ಟರ್ ಪತನಗೊಂಡಿದೆ. ಆ ಹೆಲಿಕಾಪ್ಟರ್‌ನಲ್ಲಿದ್ದ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

- Advertisement -

ಹೆಲಿಕಾಪ್ಟರ್ ಅನ್ನು ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (ಎಎಲ್‌ಎಚ್) ಧ್ರುವ್ ಎಂದು ಗುರುತಿಸಲಾಗಿದೆ. ಎಎಲ್‌ಎಚ್‌ ಧ್ರುವ್ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಅಭಿವೃದ್ಧಿಪಡಿಸಿದ ಹೆಲಿಕಾಪ್ಟರ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಖಜಕಿಸ್ತಾನ | 72 ಪ್ರಯಾಣಿಕರಿದ್ದ ವಿಮಾನ ಪತನ; ಬದುಕುಳಿದ 12 ಮಂದಿ

ಮಿಲಿಟರಿ ಮತ್ತು ನಾಗರಿಕ ವಲಯಗಳ ಅಗತ್ಯತೆಗಳನ್ನು ಪೂರೈಸಲು ಈ ಹೆಲಿಕಾಪ್ಟರ್ ಅನ್ನು ವಿನ್ಯಾಸಗೊಳಿಸಲಾಗಿದೆ. ಎಎಲ್‌ಎಚ್‌ ಧ್ರುವ್ 2002ರಿಂದ ಸೇವೆಯಲ್ಲಿದೆ.

ಸಾರಿಗೆ, ಹುಡುಕಾಟ, ರಕ್ಷಣೆ, ವೈದ್ಯಕೀಯ ಸ್ಥಳಾಂತರಿಸುವಿಕೆ, ಜಲಾಂತರ್ಗಾಮಿ ವಿರೋಧಿ ಯುದ್ಧ ಸೇರಿದಂತೆ ಹಲವು ಕಾರ್ಯಗಳಿಗೆ ಈ ಹೆಲಿಕಾಪ್ಟರ್ ಬಳಸಲಾಗುತ್ತಿದೆ. ಸೇನೆ, ನೌಕಾಪಡೆ ಮತ್ತು ವಾಯುಸೇನೆ ಸೇರಿದಂತೆ ಭಾರತೀಯ ಸಶಸ್ತ್ರ ಪಡೆಗಳಲ್ಲಿ ಅಧಿಕವಾಗಿ ಈ ಹೆಲಿಕಾಪ್ಟರ್ ಬಳಸಲಾಗುತ್ತಿದೆ ಎಂದು ವರದಿಯಾಗಿದೆ.

ಈಗಾಗಲೇ ಈ ಹೆಲಿಕಾಪ್ಟರ್ ಅನ್ನು ನೇಪಾಳ, ಮಾರಿಷಸ್ ಮತ್ತು ಮಾಲ್ಡೀವ್ಸ್ ಸೇರಿದಂತೆ ಹಲವು ದೇಶಗಳಿಗೆ ರಫ್ತು ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...