ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

Date:

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಪ್ರಕರಣ ಇತ್ತೀಚೆಗಷ್ಟೇ ಸುದ್ದಿಯಾಗಿತ್ತು. ಇದೀಗ ಅದೇ ಗುಜರಾತ್‌ನ ಗ್ರಾಮವೊಂದರ‌ಲ್ಲಿ ಸಕಾರಾತ್ಮಕ ಬೆಳವಣಿಗೆಯೊಂದು ಕಂಡು ಬಂದಿದೆ. 78ನೇ ಸ್ವಾತಂತ್ರ ಸಂಭ್ರಮಕ್ಕೆ ಗುಜರಾತ್‌ನ ಅಲ್ವಾಡದಲ್ಲಿ ದಲಿತರಿಗೂ ಒಂದು ರೀತಿಯಲ್ಲಿ ಸ್ವಾತಂತ್ರ್ಯ ದೊರಕಿದಂತಾಗಿದೆ. ಶತ ಶತಮಾನಗಳಿಂದ ಜಾತಿ ತಾರತಮ್ಯಕ್ಕೆ ಅಂಟಿಕೊಂಡಿದ್ದ ಗ್ರಾಮವು ಈಗ ಒಂದು ಪ್ರಮಾಣದಲ್ಲಿ ಮುಕ್ತವಾಗಿ ತೆರೆದುಕೊಂಡು ಪ್ರಶಂಸೆಗೆ ಪಾತ್ರವಾಗಿದೆ.

- Advertisement -

ಈ ಹಿಂದೆ ಅಲ್ವಾಡ ಗ್ರಾಮದಲ್ಲಿ ದಲಿತರಿಗೆ ಕ್ಷೌರದ ಅಂಗಡಿಗೆ ಪ್ರವೇಶ ನಿಷಿದ್ಧವಾಗಿತ್ತು. ಸುಮಾರು 6,500 ಜನರು ವಾಸವಿರುವ ಈ ಗ್ರಾಮದಲ್ಲಿ 250 ಮಂದಿ ದಲಿತರು ತಲೆಮಾರುಗಳಿಂದ ವಾಸವಿದ್ದರು. ಆದರೆ ಕ್ಷೌರ ಮಾಡಬೇಕೆಂದಾಗ ಪಕ್ಕದ ಗ್ರಾಮಗಳಿಗೆ ತೆರಳಿ ತಮ್ಮ ಜಾತಿ ಗುರುತನ್ನು ಮರೆಮಾಚಿ ಕೂದಲು ತೆಗೆಸಿಕೊಳ್ಳಬೇಕಾದ ಪರಿಸ್ಥಿತಿ ದಲಿತ ಯುವಕರದ್ದಾಗಿತ್ತು. ಇದು ಇತ್ತೀಚೆಗೆ ನಿರ್ಮಾಣವಾದ ವಾತಾವರಣವಲ್ಲ, ಬದಲಾಗಿ ಎಷ್ಟೋ ದಶಕಗಳಿಂದ, ಶತಮಾನಗಳಿಂದ ರೂಢಿಗತವಾಗಿ ನಡೆದು ಬಂದಿರುವ ಅನಿಷ್ಟ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ರಾಯಚೂರು | ಕ್ಷೌರಿಕನಿಂದ ಕೊಲೆಯಾದ ದಲಿತ ಯುವಕ; ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಲು ಆಗ್ರಹ

ಈಗ ಗ್ರಾಮದ ಜನರು ಬದಲಾವಣೆಗೆ ಪ್ರಯತ್ನ ನಡೆಸಿದ್ದು, ಕೆಲವು ತಿಂಗಳುಗಳ ಚರ್ಚೆಯ ಬಳಿಕ ಇಂತಹದೊಂದು ವಾತಾವರಣ ಸೃಷ್ಟಿಯಾಗಿದೆ. ಸ್ವಾತಂತ್ರ್ಯೋತ್ಸವಕ್ಕೆ ಒಂದು ವಾರದ ಮೊದಲು ಕೃಷಿ ಕೂಲಿ ಕಾರ್ಮಿಕ ಕೀರ್ತಿ ಚೌಹಾಣ್‌ ತನ್ನ ಗ್ರಾಮದಲ್ಲೇ ಕ್ಷೌರ ಮಾಡಿಸಿಕೊಂಡಿದ್ದು, ಕ್ಷೌರದ ಅಂಗಡಿಯಲ್ಲಿ ಕೂದಲು ಕತ್ತರಿಸಿಕೊಂಡ ಮೊದಲ ದಲಿತ ಯುವಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಗ್ರಾಮದ ಐದೂ ಕ್ಷೌರದ ಅಂಗಡಿಗಳು ದಲಿತರಿಗೆ ಮುಕ್ತ ಪ್ರವೇಶವನ್ನು ನೀಡಲು ಒಪ್ಪಿಕೊಂಡಿವೆ.

“24 ವರ್ಷದ ನನ್ನ ಜೀವನದಲ್ಲಿ ಕೊನೆಗೂ ನಾನು ನನ್ನ ಗ್ರಾಮದಲ್ಲಿ ಸ್ವೀಕಾರಗೊಂಡಿದ್ದೇನೆ. ಈವರೆಗೂ ನಾನು ಕೂದಲು ಕತ್ತರಿಸಿಕೊಳ್ಳಬೇಕಾದರೆ ಬೇರೆ ಗ್ರಾಮಗಳಿಗೆ ಹೋಗಬೇಕಾಗಿತ್ತು. ಅಂತಿಮವಾಗಿ ನಮ್ಮ ಗ್ರಾಮದಲ್ಲಿಯೇ ಕ್ಷೌರ ಮಾಡಿಸಿಕೊಂಡ ಮೊದಲ ದಲಿತ ನಾನು” ಎಂದು ಕೀರ್ತಿ ಚೌಹಾಣ್‌ ಸಂತಸ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಅಧ್ಯಕ್ಷ ಸುರೇಶ್‌ ಚೌಧರಿ ಮಾತನಾಡಿ, “ಗ್ರಾಮದ ಸರಪಂಚನಾಗಿರುವ ನನಗೆ ಈ ಹಿಂದೆ ಜಾರಿಯಲ್ಲಿದ್ದ ನಿಯಮದ ಬಗ್ಗೆ ತಪ್ಪಿತಸ್ಥ ಎಂಬ ಭಾವನೆ ಇತ್ತು. ಕೊನೆಗೂ ಈ ಪದ್ದತಿ ನನ್ನ ಅವಧಿಯಲ್ಲೇ ಕೊನೆಗೊಂಡಿರುವುದರ ಬಗ್ಗೆ ನನಗೆ ಹೆಮ್ಮೆ ಇದೆ” ಬದಲಾವಣೆಯನ್ನು ಸ್ವಾಗತಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ದಲಿತರಿಗೆ ಕ್ಷೌರ ಮಾಡಲು ನಕಾರ; ಕ್ಷೌರಿಕನ ವಿರುದ್ಧ ಜಾತಿ ದೌರ್ಜನ್ಯ ಪ್ರಕರಣ ದಾಖಲು

ಈ ಮಹತ್ತರ ಬದಲಾವಣೆಯ ಹಿಂದೆ ದಲಿತ ಸಮುದಾಯದ ನಿರಂತರ ಪ್ರಯತ್ನವಿದೆ. ಜೊತೆಗೆ ಸ್ಥಳೀಯ ಚಳುವಳಿಗಾರ ಚೇತನ್‌ ದಭಿಯವರ ಬೆಂಬಲದೊಂದಿಗೆ ಗ್ರಾಮದ ಮೇಲ್ವರ್ಗಗಳ ಮತ್ತು ಕ್ಷೌರಿಕರ ಮನೋಧರ್ಮವನ್ನು ಬದಲಿಸುವ ಸಲುವಾಗಿ ಅವಿರತ ಪ್ರಯತ್ನಗಳು ನಡೆದಿವೆ. ಆದರೆ ಈ ಮನವೊಲಿಕೆ ವಿಧಾನ ವಿಫಲವಾದಾಗ ಜಿಲ್ಲಾಡಳಿತ ಮತ್ತು ಪೊಲೀಸರು ಮಧ್ಯೆ ಪ್ರವೇಶಿಸಬೇಕಾಯಿತು. ಮಮ್ತತ್‌ ದಾರ್‌ ಜನಕ್‌ ಮೆಹ್ತಾ ನೇತೃತ್ವದ ಜಿಲ್ಲಾಡಳಿತ ತಂಡವು ಬದಲಾವಣೆಗಾಗಿ ನಡೆದ ಪ್ರಯತ್ನದಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಅಲ್ವಾಡ ಗ್ರಾಮದಲ್ಲಿ ನಡೆದ ಈ ಬದಲಾವಣೆಗಳು ದೇಶದ ಬೇರೆ ಬೇರೆ ಭಾಗಗಳಲ್ಲಿ ಬೇರೂರಿರುವ ತಾರತಮ್ಯ, ಜಾತಿ ಪದ್ದತಿ, ಮೂಢನಂಬಿಕೆಗಳಿಂದ ಹೊರ ಬರುವಂತೆ ಪ್ರೇರಣೆ ನೀಡಿ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಅಡಿಪಾಯಕ್ಕೆ ಸ್ಪೂರ್ತಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...