ಗುರುಗ್ರಾಮ: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್ಐಆರ್ ದಾಖಲಿಸಿದ ಪೊಲೀಸರು

Date:

Advertisements

ತನಿಖೆಗೆ ಸಂಬಂಧಿಸಿದ ಮೂರು ಖಾತೆಗಳ ಬಗ್ಗೆ ಮಾಹಿತಿ ನೀಡಲು ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ನಿರಾಕರಿಸಿದ ಕಾರಣದಿಂದ ಗುರುಗ್ರಾಮ್ ಪೊಲೀಸರು ಸಾಮಾಜಿಕ ಮಾಧ್ಯಮ ವಾಟ್ಸಾಪ್ ನಿರ್ದೇಶಕರು ಮತ್ತು ನೋಡಲ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಸಾರ್ವಜನಿಕ ನೌಕರನು ಹೊರಡಿಸಿದ ಆದೇಶಕ್ಕೆ ಅವಿಧೇಯತೆ ತೋರುವುದು, ಅಪರಾಧಿಯನ್ನು ಕಾನೂನಿನ ಶಿಕ್ಷೆಯಿಂದ ರಕ್ಷಿಸಲು ಮರೆಮಾಚುವುದು ಮತ್ತು ಸಾಕ್ಷ್ಯವಾಗಿ ಸಲ್ಲಿಸಬೇಕಾದ ಯಾವುದೇ ದಾಖಲೆ ಅಥವಾ ಎಲೆಕ್ಟ್ರಾನಿಕ್ ದಾಖಲೆಯನ್ನು ನಾಶಪಡಿಸುವುದಕ್ಕೆ ಸಂಬಂಧಿಸಿದ ವಿಭಾಗಗಳಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸೈಬರ್ ಪೊಲೀಸ್ ಠಾಣೆಯಲ್ಲಿ ಇನ್‌ಸ್ಪೆಕ್ಟರ್ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ. ವಂಚನೆ ಮತ್ತು ಕ್ರಿಮಿನಲ್ ಪಿತೂರಿ ಆರೋಪದ ಅಡಿಯಲ್ಲಿ ಮೇ 27 ರಂದು ಎಫ್ಐಆರ್‌ಅನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅದರ ತನಿಖೆಯ ಭಾಗವಾಗಿ, ಗುರುಗ್ರಾಮ್ ಪೊಲೀಸರು ಆರೋಪಿಗಳು ಬಳಸುತ್ತಿದ್ದ ನಾಲ್ಕು ಸಂಖ್ಯೆಗಳ ಬಗ್ಗೆ ಮಾಹಿತಿಗಾಗಿ ವಾಟ್ಸಾಪ್ ಸಂಸ್ಥೆಯನ್ನು ಕೇಳಿದ್ದರು. ಜುಲೈ 17 ರಂದು ಇಮೇಲ್ ಮೂಲಕ ವಾಟ್ಸಾಪ್ ಸಂಸ್ಥೆಗೆ ನೋಟಿಸ್ ಕಳುಹಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಬಾಹ್ಯಾಕಾಶದಲ್ಲಿ ಸಿಲುಕಿರುವ ದಿಟ್ಟ ಸುನಿತಾ ವಿಲಿಯಮ್ಸ್ ಭೂಮಿಗೆ ಬರುವುದು ಯಾವಾಗ?

ನೀಡಿದ ನಂಬರ್‌ನ ಮಾಹಿತಿ ನೀಡುವಂತೆ ಪೊಲೀಸರು ಜುಲೈ 25ರಂದು ವಾಟ್ಸಾಪ್ ಸಂಸ್ಥೆಗೆ ಮತ್ತೆ ಕೇಳಿಕೊಂಡಿದ್ದಾರೆ. ಆದರೆ ಅದರ ನಿರಾಕರಣೆಯು ಶಾಸನಬದ್ಧ ಕಟ್ಟುಪಾಡುಗಳನ್ನು ನಿರ್ಲಕ್ಷಿಸುವ ಒಂದು ಸ್ಪಷ್ಟವಾದ ಕ್ರಿಯೆಯಾಗಿದೆ” ಎಂದು ಪೊಲೀಸ್ ದೂರಿನಲ್ಲಿ ಹೇಳಲಾಗಿದೆ.

ಅದರಂತೆ ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಎಫ್ಐರ್‌ನಲ್ಲಿ ಕೃಷ್ಣ ಚೌಧರಿ ಮತ್ತು ಇತರರನ್ನು ಹೆಸರಿಸಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ದೆಹಲಿಯ 50ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

ದೆಹಲಿಯ 50ಕ್ಕೂ ಅಧಿಕ ಶಾಲೆಗಳಿಗೆ ಬುಧವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ...

Download Eedina App Android / iOS

X