ಗುವಾಹಟಿ ಹೈಕೋರ್ಟ್‌ ಸ್ಥಳಾಂತರ – ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಬಹಿಷ್ಕಾರ; ವಕೀಲರ ಉಪವಾಸ ಪ್ರತಿಭಟನೆ

Date:

ಅಸ್ಸಾಂನ ಗುವಾಹಟಿಯಲ್ಲಿ ಹೈಕೋರ್ಟ್‌ನ ಹೊಸ ಸಂಕೀರ್ಣ ನಿರ್ಮಾಣಕ್ಕೆ ಭಾನುವಾರ ಶಂಕುಸ್ಥಾಪನೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಕಾರ್ಯಕ್ರಮವನ್ನು ಅಲ್ಲಿನ ಬಾರ್‌ ಅಸೋಸಿಯೇಷನ್ ಬಹಿಷ್ಕರಿಸಿದೆ. ಅಸೋಸಿಯೇಷನ್‌ನ ಸದಸ್ಯ ವಕೀಲರು ಉಪವಾಸ ಪ್ರತಿಭಟನೆ ನಡೆಸಿದ್ದಾರೆ.

- Advertisement -

ಗುವಾಹಟಿ ನಗರದ ಹೃದಯ ಭಾಗದಲ್ಲಿರುವ ಹೈಕೋರ್ಟ್‌ಅನ್ನು ನಗರದಿಂದ ಹೊರಭಾಗಕ್ಕೆ ಸ್ಥಳಾಂತರ ಮಾಡಲಾಗಿತ್ತಿದೆ. ಸ್ಥಳಾಂತರವನ್ನು ವಿರೋಧಿಸಿರುವ ವಕೀಲರು, ಇಂದು (ಭಾನುವಾರ) ಸಿಜೆಐ ಸೂರ್ಯಕಾಂತ್‌ ಅವರು ನೆರವೇರಿಸಲಿರುವ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ನೂತನ ಹೈಕೋರ್ಟ್‌ ಸಂಕೀರ್ಣವನ್ನು ಉತ್ತರ ಗುವಾಹಟಿಯ ರಂಗಮಹಲ್‌ನಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಈ ಪ್ರದೇಶಕ್ಕೆ ನ್ಯಾಯಾಂಗ ಪಟ್ಟಣವೆಂದೂ ಹೆಸರಿಸಲಾಗಿದೆ. ಆದರೆ, “ನಗರದ ಹೃದಯದ್ದಿರುವ ಹೈಕೋರ್ಟ್ ಅನ್ನು ಸ್ಥಳಾಂತರಿಸುವುದನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತೇವೆ. ಸ್ಥಳಾಂತರದ ಪ್ರಸ್ಥಾಪ ರೂಪುಗೊಂಡಾಗಿನಿಂದಲೂ ಇದನ್ನು ನಾವು ವಿರೋಧಿಸಿದ್ದೇವೆ. ಆದರೆ, ಸರ್ಕಾರವು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದೆ. ಯಾವುದೇ ವಕೀಲರು ಶಂಕುಸ್ಥಾಪನೆ ಸಮಾರಂಭದಲ್ಲಿ ಹಾಜರಾಗುವುದಿಲ್ಲ” ಎಂದು ಬಾರ್ ಅಸೋಸಿಯೇಷನ್‌ನ ಉಪಾಧ್ಯಕ್ಷ ಸಂತನು ಬೋರ್ತಕೂರ್ ತಿಳಿಸಿದ್ದಾರೆ.

ಅಸ್ಸಾಂ ಅಡ್ವೊಕೇಟ್ ಜನರಲ್ ದೇವಜಿತ್ ಸೈಕಿಯಾ ಅವರು ಬಾರ್‌ ಅಸೋಸಿಯೇಷನ್‌ನ ನಡೆಯನ್ನು ಟೀಕಿಸಿದ್ದಾರೆ. ಈ ಪ್ರತಿಭಟನೆಯ ಹಿಂದೆ ರಾಜಕೀಯ ಪಕ್ಷಗಳ ಹುನ್ನಾರವಿದೆ ಎಂದು ಆರೋಪಿಸಿದ್ದಾರೆ.

ಅಸ್ಸಾಂ ಸರ್ಕಾರವು ಬ್ರಹ್ಮಪುತ್ರ ನದಿಯ ಮುಂಭಾಗವನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸುತ್ತಿದೆ. ಇದಕ್ಕಾಗಿ, ನದಿ ಸಮೀಪವೇ ಇರುವ ಹೈಕೋರ್ಟ್ ಭೂಮಿಯನ್ನು ವಶಕ್ಕೆ ಪಡೆಯಬೇಕಿದೆ. ಅದಕ್ಕಾಗಿ, ಹೈಕೋರ್ಟ್‌ಅನ್ನು ಸ್ಥಳಾಂತರಿಸುತ್ತಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...